ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್ ವಿರುದ್ಧ ಅರೆಸ್ಟ್‌ ವಾರಂಟ್‌

Date:

  • 14 ವರ್ಷಗಳ ಹಿಂದಿನ 25 ಲಕ್ಷದ ಚೆಕ್ ಬೌನ್ಸ್ ಪ್ರಕರಣ
  • ಆನೇಕಲ್ ನ್ಯಾಯಾಲಯದಿಂದ ಆದೇಶ

ಕೋಲಾರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್ ಅವರ ವಿರುದ್ಧ ‘ಅರೆಸ್ಟ್‌ ವಾರಂಟ್’ ಜಾರಿಯಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಮುಖಭಂಗವಾಗಿದೆ. 14 ವರ್ಷಗಳ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಜೆಎಂಎಫ್‌ಸಿ ನ್ಯಾಯಾಲಯವು ವರ್ತೂರು ಅವರನ್ನು ಮೇ 10ರೊಳಗೆ ಬಂಧಿಸುವಂತೆ ಆದೇಶ ಹೊರಡಿಸಿದೆ.

14 ವರ್ಷಗಳ ಹಿಂದೆ ವರ್ತೂರು ಪ್ರಕಾಶ್ ಅವರು ಲೀಲಾವತಿ ಎಂಬುವವರಿಗೆ ಚೆಕ್‌ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಅರೆಸ್ಟ್‌ ವಾರಂಟ್ ನೀಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಣದ ವ್ಯವಹಾರವೊಂದಕ್ಕೆ ಸಂಬಂಧಪಟ್ಟಂತೆ 2008ರಲ್ಲಿ ಲೀಲಾವತಿ ಎಂಬುವರಿಗೆ 25 ಲಕ್ಷ ರೂ.ಗಳ ಚೆಕ್ ಅನ್ನು ವರ್ತೂರು ಪ್ರಕಾಶ್ ನೀಡಿದ್ದರು. ಲೀಲಾವತಿಯವರು ಚೆಕ್ ಮೂಲಕ ನಗದು ಡ್ರಾ ಮಾಡಲು ಹೋದಾಗ ಅದು ಬೌನ್ಸ್ ಆಗಿತ್ತು.

ಚೆಕ್‌ ಬೌನ್ಸ್‌ ಕುರಿತು ಲೀಲಾವತಿ ಆನೇಕಲ್‌ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವರ್ತೂರು ಪ್ರಕಾಶ್ ವಿರುದ್ಧ ದೂರು ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಪ್ರಕಾಶ್‌ ಅವರಿಗೆ ನ್ಯಾಯಾಲಯ ಸಾಕಷ್ಟು ಬಾರಿ ಸಮನ್ಸ್‌ ಜಾರಿ ಮಾಡಿತ್ತು. ಆದರೆ, ಸಮನ್ಸ್‌ನ ಹೊರತಾಗಿಯೂ ವರ್ತೂರು ಪ್ರಕಾಶ್‌ ನ್ಯಾಯಾಲಯಕ್ಕೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ.

ಓ ಸುದ್ದಿ ಓದಿದ್ದೀರಾ? ಆಂಧ್ರಪ್ರದೇಶದಲ್ಲಿ ಜಾತಿ ತಾರತಮ್ಯಕ್ಕೆ ದಲಿತ ಸರ್ಕಾರಿ ವೈದ್ಯರ ಬಲಿ

ಅರೆಸ್ಟ್‌ ವಾರಂಟ್ ಜಾರಿ ಮಾಡಿರುವ ನ್ಯಾಯಾಲಯ ಮೇ 10ರೊಳಗೆ ಪ್ರಕಾಶ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಆದೇಶಿಸಿದೆ.

ವರ್ತೂರು ಪ್ರಕಾಶ್‌ಗೆ ಬಂಧನದ ಭೀತಿ ಇದೇ ಮೊದಲೇನಲ್ಲ, ಈ ಮೊದಲು 2018ರಲ್ಲಿ ಕೋಲಾರದಲ್ಲಿ ಜಮೀನು ಖರೀದಿಸಿ ಜಮೀನು ಮಾಲೀಕರಿಗೆ ಹಣ ನೀಡಿರಲಿಲ್ಲ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...