ಚುನಾವಣೆ 2023 | ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸಲು ಸೂಚನೆ

Date:

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಾಸನ ಜಿಲ್ಲೆಗೆ ಸಾಮಾನ್ಯ ಹಾಗೂ ವೆಚ್ಚ ವೀಕ್ಷಕರನ್ನು ಚುನಾವಣಾ ಆಯೋಗ ನಿಯೋಜಿಸಿದೆ. ಅವರೆಲ್ಲರೂ ಜಿಲ್ಲೆಯಲ್ಲಿ ಉನ್ನತ ಮಟ್ಟದಲ್ಲಿ ಕೆಲಸ ಮಾಡುತ್ತಿರುವ ಹಲವು ಸಮಿತಿಗಳ ಜೊತೆ ಸಭೆ ನಡೆಸಿದ್ದು, ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸುವಂತೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

- Advertisement -

ಹಾಸನ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆದಿದೆ. “ಯಾವುದೇ ಲೋಪ ಇಲ್ಲದಂತೆ ಅಧಿಕಾರಿಗಳು ಪರಸ್ಪರ ಸಹಕಾರ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಮತಗಟ್ಟೆ ಹಂತದಲ್ಲಿ ಯಾವುದೇ ಸಮಸ್ಯೆಗಳು ಇಲ್ಲದಿರುವುದನ್ನು ಖಾತರಿ ಪಡಿಸಿಕೊಳ್ಳಬೇಕು” ಎಂದು ಚುನಾವಣಾ ವೀಕ್ಷಕರು ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

“ಮತಯಂತ್ರಗಳ ಸಾಗಾಟಕ್ಕೆ ವ್ಯವಸ್ಥಿತ ಯೋಜನೆ ರೂಪಿಸಿ, ತಂಡಗಳು ದಿನದ 24 ಗಂಟೆಯೂ ಕೆಲಸ ಮಾಡಬೇಕಾಗಿದೆ. ಎಲ್ಲ ತಂಡಗಳಿಗೆ ಸೂಕ್ತ ಗುಣಾತ್ಮಕ ತರಬೇತಿ ನೀಡಿ, ಅಗತ್ಯ ಸೌಲಭ್ಯ ಒದಗಿಸಬೇಕು. ಸ್ವೀಪ್ ಚಟುವಟಿಕೆಗಳನ್ನು ಹೆಚ್ಚಿಸಿ, ಮತದಾರರಲ್ಲಿ ಜಾಗೃತಿ ಮೂಡಿಸಬೇಕು” ಎಂದು ತಿಳಿಸಿದರು.

“ಸಾರ್ವಜನಿಕರು, ರಾಜಕೀಯ ಪಕ್ಷಗಳು, ಪ್ರತಿನಿಧಿಗಳು ಹಾಗೂ ಅಭ್ಯರ್ಥಿಗಳು ತಮ್ಮ ಚುನಾವಣಾ ವೀಕ್ಷಕರನ್ನು ಭೇಟಿ ಮಾಡಿ ದೂರು, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ವ್ಯಾಪಕ ಪ್ರಚಾರ ನೀಡಿ, ಏನಾದರೂ ದೂರುಗಳಿದ್ದರೆ ಅವುಗಳನ್ನು ಸಲ್ಲಿಸುವಂತೆ ಜಾಗೃತಿ ಮೂಡಿಸಿ” ಎಂದು ವೀಕ್ಷಕರು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಕಾಂಗ್ರೆಸ್‌ ತೊರೆದ ಮದ್ದೂರು ಗುರುಚರಣ್; ಡಿಕೆ ಸಹೋದರರ ವಿರುದ್ಧ ವಾಗ್ದಾಳಿ

ಸಭೆಯಲ್ಲಿ ಚುನಾವಣಾ ವೀಕ್ಷಕರುಗಳಾದ ಸಂಜೀವ್ ಕುಮಾರ್, ಅಶೋಕ್ ಕುಮಾರ್, ಮನೀತ್ ಗೋಯಲ್, ಬಾಲಾಜಿ ದಿಗಂಬ‌ ಮಂಜುಲೆ, ಪೊಲೀಸ್ ವೀಕ್ಷಕ ಬೀಮಲ್ ಗುಪ್ತ, ಚುನಾವಣಾ ವೆಚ್ಚ ವೀಕ್ಷಕರು ಐಆರ್‌ಎಸ್ ಡಾ.ನಿಖಿಲ್ ಕುಮಾರ್ ಸಿಂಗ್,  ಐಆರ್‌ಎಸ್ ಡಾ. ಕಾರ್ತಿಕೇಯನ್ ಪಾಂಡ್ಯ, ಐಆರ್‌ಎಸ್ ಮದನ್ ಮೋಹನ್ ಮೀನಾ, ಐಆರ್‌ಎಸ್ ಎಂ.ವಿ ಸಿಂಗ್, ಜಿಲ್ಲಾ ನೋಡಲ್‌ ಅಧಿಕಾರಿಯಾದ ಆದಾಯ ತೆರಿಗೆ ಇಲಾಖೆಯ ಎಡಿಐಟಿ ಚರುಮಾಮಿಲ ವಿನಯ್ ಕೆ.ಚೌದರಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...