ಆಯನೂರು ಮಂಜುನಾಥ್‌ ರಾಜೀನಾಮೆ ಘೋಷಣೆ; ಜೆಡಿಎಸ್‌ನಿಂದ ಸ್ಪರ್ಧೆ ಸಾಧ್ಯತೆ

Date:

  • ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ
  • ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿರುದ್ಧ ವಾಗ್ದಾಳಿ

ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಇಂದು ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ. ಇದೇ ಸಂದರ್ಭದಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದ್ದಾರೆ.

“ಈ ಹಿಂದೆ ತಿಳಿಸಿದಂತೆಯೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಪದವೀಧರರು, ನೌಕರರು, ಕಾರ್ಮಿಕರ ಹಿತರಕ್ಷಣೆಗಾಗಿ ವಿಧಾನಸಭೆ ಪ್ರವೇಶ ಬಯಸಿದ್ದೇನೆ. ಗುರುವಾರ ನಾಮಪತ್ರ ಸಲ್ಲಿಸುತ್ತೇನೆ” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಶಿವಮೊಗ್ಗ ನಗರದ ಜನರ ಶಾಂತಿಯುತ ಬದುಕಿಗೆ ಅವಕಾಶ ಕಲ್ಪಿಸುವ ಉದ್ದೇಶ ನನ್ನದು. ಫ್ಲೆಕ್ಸ್‌ನಲ್ಲಿ ಹೇಳಿದಂತೆ ಹರಕು ಬಾಯಿ ಹೊಲಿದು, ಒಡೆದ ಮನಸ್ಸುಗಳನ್ನು ಒಗ್ಗೂಡಿಸುವ ನನ್ನ ಪ್ರಯತ್ನಕ್ಕೆ ಈಗಾಗಲೇ ಸ್ವಲ್ಪ ಮಟ್ಟಿಗೆ ಫಲ ದೊರೆತಿದೆ. ಅಶಾಂತ ನಗರ ಎಂಬ ಅಪಖ್ಯಾತಿಯಿಂದ ಶಿವಮೊಗ್ಗವನ್ನು ಮುಕ್ತವಾಗಿಸಲು ನಾನು ಬದ್ಧ. ಆ ಮೂಲಕ ನಗರಕ್ಕೆ ಉದ್ಯಮಗಳು ಬರುವಂತೆ ಮಾಡಿ ಉದ್ಯೋಗಾವಕಾಶ ಕಲ್ಪಿಸಬಯಸಿದ್ದೇನೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಗದೀಶ್‌ ಶೆಟ್ಟರ್‌ಗೆ ಹುಬ್ಬಳ್ಳಿ ಜನ ಪಾಠ ಕಲಿಸುತ್ತಾರೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕುಬೇರರು ಮತ್ತು ಬಲಾಢ್ಯರ ಎದುರು ಸ್ಪರ್ಧೆ ಮಾಡುತ್ತಿದ್ದು, ನಗರದ ಜನತೆ ನನ್ನ ಬೆಂಬಲಿಸಲು ಮನವಿ ಮಾಡುತ್ತೇನೆ. ತೆನೆ ಹೊರುತ್ತೇನೋ ಇಲ್ಲವೋ ಎಂಬ ಬಗ್ಗೆ ಕೆಲ ನಾಯಕರ ಜೊತೆ ಮಾತನಾಡಿ ನಿರ್ಧರಿಸುತ್ತೇನೆ. ಅದು ರಾಜ್ಯದ ರಾಜಕೀಯ ಪಕ್ಷದ ನಾಯಕರೊಂದಿಗೆ ಎನ್ನುವ ಮೂಲಕ ಜೆಡಿಎಸ್ ಸೇರುವ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಾಂಗ್ರೆಸ್‌ ಪ್ರಧಾನಿ ಅಭ್ಯರ್ಥಿ ಯಾರೆಂದು ಕೇಳಿದರೆ ಹೇಳುವುದಿಲ್ಲ : ಬಿ.ಎಸ್.ಯಡಿಯೂರಪ್ಪ

ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್‌-ಬಿಜೆಪಿ...

2025ರ ವೇಳೆಗೆ ಬಿಜೆಪಿ ಮೀಸಲಾತಿ ರದ್ದುಪಡಿಸಲಿದೆ: ತೆಲಂಗಾಣ ಸಿಎಂ ಆರೋಪ

ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ...

ಈ ದಿನ ವಿಶೇಷ | ಬಿಜೆಪಿ ಬೆಳೆಸಿದ ಯಡಿಯೂರಪ್ಪ ಬಿಜೆಪಿಗೇ ಬೇಡವಾದರೆ?

ಯಡಿಯೂರಪ್ಪನವರು ಸ್ವಂತ ಶಕ್ತಿಯಿಂದ ಪಕ್ಷ ಕಟ್ಟಿದವರು, ಬೆಳೆದವರು. ಅವರು ಮೋದಿಗಿಂತ ಹಿರಿಯರು,...

ಕೇಂದ್ರದ ದ್ರೋಹ ಸಮರ್ಥಿಸಿದ ಪ್ರಲ್ಹಾದ್‌ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು: ಸಿದ್ದರಾಮಯ್ಯ ಕರೆ

ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರದಿಂದ ಆದ ದ್ರೋಹವನ್ನು ಸಮರ್ಥಿಸಿದ ಪ್ರಲ್ಹಾದ್‌...