ಅನರ್ಹರ ಬಿಪಿಎಲ್ ಕಾರ್ಡ್‌ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Date:

Advertisements

ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ವಾಪಸ್ ಪಡೆಯಲಾಗುವುದು. ಅರ್ಹರ ಕಾರ್ಡ್‌ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಬಿಪಿಎಲ್ ಕಾರ್ಡ್‌ಗಳ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್‌ಗಳನ್ನು ವಾಪಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಆದಾಯ ತೆರಿಗೆ ಪಾವತಿಸುವವರಿಗೂ, ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ ಎಂದು ಮರು ಪ್ರಶ್ನಿಸಿದ ಸಿಎಂ, ಯಾವ ಕಾರ್ಡ್‌ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕದಲ್ಲಿ ಟ್ರಂಪ್ ಆಡಳಿತ; ಜಾಗರೂಕವಾಗಿರಬೇಕಿದೆ ಭಾರತ!

ಶೇ. 40 ಕಮಿಷನ್ ಆರೋಪದಿಂದ ಮುಕ್ತರಾಗಿದ್ದೇವೆ ಎನ್ನುವ ಆರ್. ಅಶೋಕ್ ಮಾತಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೊಟ್ಟ ದೂರಿನ ಆಧಾರದಲ್ಲಿ ನಾವು ತನಿಖೆಗೆ ಸೂಚಿಸಿದ್ದೆವು. ಸಾಕ್ಷ್ಯಾಧಾರಗಳ ಕೊರತೆಯಿಂದ ಕೊಲೆ ಆರೋಪಿಗಳು ಬಿಡುಗಡೆ ಆಗುತ್ತಾರೆ. ಹಾಗಂತ ಕೊಲೆಯೇ ಆಗಿಲ್ಲ ಅಂದರೆ ಅದರಲ್ಲಿ ಅರ್ಥ ಇಲ್ಲ. ಕೊಲೆ ನಡೆದಿರುತ್ತದೆ. ಸಾಕ್ಷಿಗಳು ಸಾಕ್ಷ್ಯ ಹೇಳಿರುವುದಿಲ್ಲ ಅಷ್ಟೆ ಅಂದರು.

ಆಪರೇಷನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಲಾಗಿತ್ತು ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, ” ಬಿಜೆಪಿಯವರು ಆಪರೇಷನ್ ಕಮಲಕ್ಕೆ ಪ್ರಯತ್ನಿಸಿದರು, ವಿಫಲರಾದರು ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X