ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

Date:

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ, ೭೦ನೇ ಬೌದ್ಧ ಧಮ್ಮ ದೀಕ್ಷಾ ಕಾರ್ಯಕ್ರಮದ ಅಂಗವಾಗಿ ಬರೋಬ್ಬರಿ ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ ನೀಡುವ ಬೃಹತ್ ಗುರಿ ಹೊಂದಲಾಗಿದೆ ಎಂದು ಅಂತರರಾಷ್ಟ್ರೀಯ ಬೌದ್ಧ ಯುವ ಸಂಘಟನೆ (ಇಂಡಿಯಾ) ರಾಷ್ಟ್ರೀಯ ಅಧ್ಯಕ್ಷ, ಝೆನ್ ಮಾಂಕ್ ಡಾ. ಶಾಕು ಬೋಧಿಧಮ್ಮ ತಿಳಿಸಿದ್ದಾರೆ.

- Advertisement -

ಬಾಗಲಕೋಟೆಯ ನವನಗರದ 71ನೇ ಸೆಕ್ಟರ್‌ನಲ್ಲಿ ಆಯೋಜಿಸಿದ್ದ ಧಮ್ಮ ಜನಜಾಗೃತಿ ಯಾತ್ರೆಯ ಸ್ವಾಗತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. “ಐತಿಹಾಸಿಕ ಸನ್ನತಿ ನೆಲದಲ್ಲಿ 2026ರ ನವೆಂಬರ್ 1ರಂದು ಬೃಹತ್ ಧಮ್ಮ ದೀಕ್ಷಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅಂಬೇಡ್ಕರ್‌ ವಾದಿಗಳು, ಬೌದ್ಧ ಅನುಯಾಯಿಗಳು, ಭಿಕ್ಷು ಸಂಘದ ಸದಸ್ಯರು, ಉಪಾಸಕ-ಉಪಾಸಿಕಾ ಸಂಘಗಳ ಸದಸ್ಯರು, ಸಾಮಾಜಿಕ ಮತ್ತು ರಾಜಕೀಯ ಮುಖಂಡರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪ್ರತಿನಿಧಿಗಳು, ಹಿಂದುಳಿದ ವರ್ಗಗಳ ಮುಖಂಡರು ಹಾಗೂ ವಿವಿಧ ಬಹುಜನ ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಇಂಟರ್ನೆಟ್‌ನಿಂದ AIವರೆಗೆ.. ದಶಕಗಳ ಹಿಂದೆಯೇ ಜಗತ್ತಿನ ಭವಿಷ್ಯ ಕಂಡಿದ್ದ...

ತಂತ್ರಜ್ಞಾನ ನಮ್ಮ ಕೈಸೇರುವ, ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗುವ ದಶಕಗಳ ಹಿಂದೆಯೇ, ಅಂದಿನ ಕಾಲದ ಕಲಾವಿದರು ತಮ್ಮ ಗೀತೆಗಳ ಸಾಲುಗಳ ಮೂಲಕ ಮುಂದಿನ ಜಗತ್ತು ಹೀಗೇ ಇದ್ದೀತೆಂದು ಖಚಿತವಾಗಿ ಹೇಳಿದ್ದರು. ಮಾನವಕುಲವು ಮುಂದೆ...

ಕೊಪ್ಪಳ | ದಸರಾ ಪುರಾಣ ಪ್ರವಚನಕ್ಕೆ ಮುಸ್ಲಿಂ ಕಲಾವಿದನ...

ಧರ್ಮಗಳು ಬೇರೆ ಬೇರೆಯಾದರೂ ಕಲೆ, ಸಂಸ್ಕೃತಿ ಮತ್ತು ಮಾನವೀಯತೆಯ ಮುಂದೆ ಧರ್ಮದ ಗಡಿಗಳು ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮ ಸಾಕ್ಷಿ. ಇಲ್ಲಿನ ಕಂಪ್ಲಿ ಪ್ರದೇಶದ ಬನಶಂಕರಿ ದೇವಸ್ಥಾನದಲ್ಲಿ ನಡೆಯುವ ದಸರಾ...

“ಬಾಬಾಸಾಹೇಬ ಡಾ. ಬಿ.ಆರ್ ಅಂಬೇಡ್ಕರ್ ಅವರ ಸಂಕಲ್ಪವನ್ನು ಸಾಕಾರಗೊಳಿಸುವ ಉದ್ದೇಶದಿಂದ ಕರ್ನಾಟಕದಾದ್ಯಂತ ಧಮ್ಮ ಜನಜಾಗೃತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ” ಎಂದು ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರೊ. ಐ.ಜಿ ಬೆಳ್ಳನ್ನವರ ಹೇಳಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಭದಂತ ಬೋಧಿರತ್ನ, ಭದಂತ ಬುದ್ಧರತ್ನ ಹಾಗೂ ನವನಗರ ಬೌದ್ಧ ವಿಹಾರದ ಭಂತೆಜಿ ಧಮ್ಮಪಾಲ ಉಪಸ್ಥಿತರಿದ್ದರು.

ಯಾತ್ರೆಯೊಂದಿಗೆ ಆಗಮಿಸಿದ ಗಣ್ಯರನ್ನು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಲಾಯಿತು. ಸಂಜೆ ನವನಗರಕ್ಕೆ ಆಗಮಿಸಿದ ಧಮ್ಮ ಜನಜಾಗೃತಿ ಯಾತ್ರೆಯನ್ನು ಬೌದ್ಧ ವಿಹಾರ ಸಮಿತಿಯ ಅಧ್ಯಕ್ಷ ಪ್ರೇಮನಾಥ ಗರಸಂಗಿ ಅವರ ನೇತೃತ್ವದ ತಂಡ ಹೂಮಳೆ ಸುರಿಸುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿತು.

ಈ ಸಂದರ್ಭದಲ್ಲಿ ಸದಾಶಿವ ಕೊಡಬಾಗಿ, ಡಿ.ಎಸ್. ಭೀಮ್, ಮಹೇಶ ಬೀಳಗಿ, ಮನೋಹರ ಗರಸಂಗಿ, ದುರಗೇಶ ನೀಲನಾಯಕ, ರಾಜು ನಾರಾಯಣಿ, ಗುರುಶಾಂತಪ್ಪ ಮದೀನಕರ, ಬಾಬಾಸಾಹೇಬ ಕಾಂಬಳೆ, ಬಾಬು ಕಾಂಬಳೆ, ಮಲ್ಲಪ್ಪ ನಾರಾಯಣಿ, ಪ್ರಭು ಬಂಡಿ, ಗ್ಯಾನಪ್ಪ ನಾರಾಯಣಿ, ಹುಲಗಪ್ಪ ಹೊದ್ಲುರ, ಯಮನಪ್ಪ ಶಿರೂರ ಹಾಗೂ ಯಲ್ಲಪ್ಪ ಸಾನಕ್ಯಾನವರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಶಹಾಪುರದ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಆಚರಣೆ

ಶಹಾಪುರ ತಾಲೂಕಿನ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಅಂಗವಾಗಿ ಪಂಚಶೀಲ...

ಗದಗ | ಅಲೆಮಾರಿ ಕುಟುಂಬಗಳ ಗುಡಿಸಲು ತೆರವುಗೊಳಿಸಲು ಮುಂದಾದ ಪುರಸಭೆ; ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ

ಜಿಲ್ಲೆಯ ಲಕ್ಷ್ಮೀಶ್ವರ ನಗರದ ಎಂ.ಎ. ಕಾಲೇಜಿನ ಹಿಂಭಾಗದಲ್ಲಿರುವ ಗಡ್ಡದೇವರಮಠ ನಗರದಲ್ಲಿ ವಾಸವಿರುವ...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...

ಚಿಂತಾಮಣಿ | ಸಿದ್ದರಾಮಯ್ಯ ವೈಯಕ್ತಿಕ ಚಾರಿತ್ರ್ಯವಧೆ ಮಾಡುವ ಸಣ್ಣತನ ನಮಗಿಲ್ಲ: ಪ್ರತಾಪ್ ಸಿಂಹ

ನಗರದ ಪಾಲಿಟೆಕ್ನಿಕ್ ಮೈದಾನದ ಮಾತಾ ಭಾರತಿ ಮಂಗಳ ಮಂಟಪದಲ್ಲಿ ಆಯೋಜಿಸಿದ್ದ ದಸರಾ...