ಬಾಗೇಪಲ್ಲಿ: ಸಿಪಿಎಂನ ಡಾ.ಅನಿಲ್‌ಕುಮಾರ್ ನಾಗಾಲೋಟದ ಮುಂದೆ ಬಿಜೆಪಿ ಪರದಾಟ

Date:

ಸಿಪಿಎಂ ಅಭ್ಯರ್ಥಿ ಡಾ.ಅನಿಲ್‌ಕುಮಾರ್, ಬಾಗೇಪಲ್ಲಿಯಲ್ಲಿಯೇ ನೆಲೆಸಿ ‘ಪೀಪಲ್ಸ್ ಆಸ್ಪತ್ರೆ’ ಮೂಲಕ ಕ್ಷೇತ್ರದ ಜನರ ಸೇವೆ ಮಾಡುತ್ತಿದ್ದಾರೆ. ಜೆಡಿಎಸ್‌ ಕೂಡ ಸಿಪಿಎಂಗೆ ಬೆಂಬಲ ನೀಡಿರುವುದರಿಂದ ಡಾ. ಅನಿಲ್‌ಕುಮಾರ್‌ ಗೆಲ್ಲುವ ಸಾಧ್ಯತೆಯಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಸಹಾಯಕತೆಯಿಂದ ಪರದಾಡುತ್ತಿದೆ. ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಡಾ ಅನಿಲ್‌ಕುಮಾರ್ ಅವರ ಮನೆ ಮೇಲೆ ರಾತ್ರಿ ಕೆಲವು ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎನ್ನುವ ಆರೋಪ ವ್ಯಕ್ತವಾಗಿದೆ. ಕ್ಷೇತ್ರದಲ್ಲಿ ಅನಿಲ್‌ಕುಮಾರ್ ಜನಪ್ರಿಯತೆ ದಿನೇ ದಿನೆ ಹೆಚ್ಚುತ್ತಿರುವುದೇ ಬಿಜೆಪಿಯ ಹತಾಶೆಗೆ ಕಾರಣ ಎನ್ನಲಾಗಿದೆ.

ಬಾಗೇಪಲ್ಲಿ ಆಂಧ್ರದ ರಾಯಲಸೀಮಾಗೆ ಹತ್ತಿರವಿರುವ ಕ್ಷೇತ್ರ. ಹಾಗಾಗಿ ಇಲ್ಲಿ ತೆಲುಗಿನ ಪ್ರಭಾವ, ಆಂಧ್ರ ರಾಜಕಾರಣದ ಪ್ರಭಾವ ದಟ್ಟವಾಗಿದೆ. ಬಾಗೇಪಲ್ಲಿಕರ್ನಾಟಕದ ರಾಜಕಾರಣದಲ್ಲಿ ಅತ್ಯಂತ ಹೆಚ್ಚು ಗಮನ ಸೆಳೆದ ಕ್ಷೇತ್ರವಾಗಿದೆ. ಅದಕ್ಕೆ ಕಾರಣ ಸಿಪಿಎಂ. ಬಡ ಕೂಲಿ-ಕಾರ್ಮಿಕರನ್ನು ಸಂಘಟಿಸಿ, ಬಾಗೇಪಲ್ಲಿಯಂಥ ಬರಡು ನೆಲವನ್ನು ಹೋರಾಟದ ಭೂಮಿಯನ್ನಾಗಿ ರೂಪಿಸಿದ್ದು ಸಿಪಿಎಂ. ಇದೇ ಬಲದಿಂದ ಕಮ್ಯುನಿಸ್ಟ್ ಪಕ್ಷವು ಮೂರು ಬಾರಿ ಕ್ಷೇತ್ರದ ಚುಕ್ಕಾಣಿ ಹಿಡಿದಿತ್ತು. ಜಿ ವಿ ಶ್ರೀರಾಮ ರೆಡ್ಡಿ ಎರಡು ಬಾರಿ ಸಿಪಿಎಂ ಮೂಲಕ ಶಾಸಕರಾಗಿ ವಿಧಾನಸೌಧದಲ್ಲಿ ಬಡವರ, ನೊಂದವರ, ರೈತರ ಧ್ವನಿಯಾಗಿದ್ದರು. ಅವರ ಉತ್ತರಾಧಿಕಾರಿಯಂತೆ ಕ್ಷೇತ್ರದಲ್ಲಿ ಕಾಣಿಸಿಕೊಂಡಿರುವವರು ಡಾ. ಅನಿಲ್ ಕುಮಾರ್.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಿಪಿಎಂ ಪಕ್ಷ ಇತ್ತೀಚೆಗೆ ಬಾಗೇಪಲ್ಲಿಯಲ್ಲಿ ರಾಜ್ಯ ಸಮ್ಮೇಳನ ನಡೆಸುವ ಮೂಲಕ ಕ್ಷೇತ್ರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದೆ. ಪಕ್ಷದ ಅಭ್ಯರ್ಥಿಯಾಗಿರುವ ಡಾ. ಅನಿಲ್ ಕುಮಾರ್ ಕ್ಷೇತ್ರದಲ್ಲಿ ಜನಪರ ಕೆಲಸಗಳನ್ನು ಮಾಡುತ್ತ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ವೃತ್ತಿಯಲ್ಲಿ ವೈದ್ಯರಾದ ಇವರು ಸಾಮಾಜಿಕ ಬದ್ಧತೆ, ಕಾಳಜಿಯಿಂದ ಕೆಲಸ ಮಾಡುತ್ತಿರುವವರು; ರೈತರು, ಕೂಲಿ ಕಾರ್ಮಿಕರು, ದಲಿತ-ದಮನಿತರ ಧ್ವನಿಯಾಗಿ ಹಲವು ಹೋರಾಟಗಳಲ್ಲಿ ತೊಡಗಿಕೊಂಡವರು ಅನಿಲ್‌ಕುಮಾರ್. ಅವರ ಇಡೀ ಕುಟುಂಬ ವೈದ್ಯಕೀಯ ಕ್ಷೇತ್ರದಲ್ಲಿದ್ದು, ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದೆ.

ಕೊರೊನಾ ಸಮಯದಲ್ಲೂ ಎನ್‌ಜಿಒ ಜೊತೆ ಸೇರಿ ಜನರ ಆರೋಗ್ಯ ಕಾಪಾಡುವುದು ಸೇರಿದಂತೆ ಬಹಳಷ್ಟು ಕೆಲಸ ಮಾಡಿರುವ ಅವರು ಜನಮನ್ನಣೆ ಗಳಿಸಿ ಜನಪರ ವೈದ್ಯರೆನಿಸಿಕೊಂಡಿದ್ದಾರೆ. ಬಾಗೇಪಲ್ಲಿಯಲ್ಲಿಯೇ ನೆಲೆಸಿ ‘ಪೀಪಲ್ಸ್ ಆಸ್ಪತ್ರೆ’ ತೆರೆಯುವ ಮೂಲಕ ಕ್ಷೇತ್ರದ ಜನರ ಸೇವೆ ಮಾಡುತ್ತಿದ್ದಾರೆ. ಜೊತೆಗೆ ಪಕ್ಷ ಸಂಘಟನೆಯಲ್ಲೂ ಸಕ್ರಿಯವಾಗಿದ್ದ ಇವರಿಗೆ ಚುನಾವಣೆಯಲ್ಲಿ ಜನ ಕೈ ಹಿಡಿಯುವ ಸಾಧ್ಯತೆ ಇದೆ. ಜೆಡಿಎಸ್‌ ಈ ಬಾರಿ ಚುನಾವಣೆಯಿಂದ ಹಿಂದೆ ಸರಿದಿದ್ದು, ಡಾ.ಅನಿಲಕುಮಾರ್‌ಗೆ ಬೆಂಬಲ ನೀಡಿರುವುದು ಅವರಲ್ಲಿ ಗೆಲುವಿನ ಭರವಸೆ ಮೂಡಿಸಿದೆ.

ಕ್ಷೇತ್ರದಲ್ಲಿ ಅನಿಲ್‌ಕುಮಾರ್ ಅವರಿಗೆ ಪೈಪೋಟಿ ನೀಡುತ್ತಿರುವವರು ಕಾಂಗ್ರೆಸ್ ಅಭ್ಯರ್ಥಿ ಎಸ್ ಎನ್ ಸುಬ್ಬಾರೆಡ್ಡಿ. ಸತತ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಾಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮೂರನೆಯ ಬಾರಿಗೆ ಹ್ಯಾಟ್ರಿಕ್‌ ಗೆಲುವು ಸಾಧಿಸಲು ಮುಂದಾಗಿದ್ದಾರೆ. ಆದರೆ ಅವರ ಹತ್ತು ವರ್ಷದ ಆಡಳಿತ ವೈಫಲ್ಯ ಅವರಿಗೆ ಮೈನಸ್ ಆಗಿದೆ. ಕ್ಷೇತ್ರವನ್ನು ಅಭಿವೃದ್ದಿ ಪಡಿಸುವುದರಲ್ಲಿ ಅವರು ವಿಫಲರಾಗಿದ್ದಾರೆ ಎನ್ನುವ ಅಸಮಾಧಾನ ಜನರಲ್ಲಿದೆ.

ಬಿಜೆಪಿ ಪಕ್ಷದಿಂದ ಸಿ.ಮುನಿರಾಜು ಅವರು ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ ಈ ಕ್ಷೇತ್ರದಲ್ಲಿ ಠೇವಣಿ ಉಳಿಸಿಕೊಳ್ಳಲು ಸಾಕಷ್ಟು ಸಲ ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ. 2008ರಲ್ಲಿ ಚಿತ್ರನಟ ಸಾಯಿಕುಮಾರ್ ಅವರನ್ನು ಬಿಜೆಪಿ ಪಕ್ಷದಿಂದ ಚುನಾವಣೆ ಕಣಕ್ಕೆ ಇಳಿಸಿ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಪ್ರಯತ್ನಿಸಿದರೂ ಅದು ಕೈಗೂಡಿರಲಿಲ್ಲ. ಇಲ್ಲಿ ನಡೆದ 13 ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲುವುದಿರಲಿ, ಎರಡನೆಯ ಸ್ಥಾನ ಪಡೆಯಲೂ ಸಾಧ್ಯವಾಗಿಲ್ಲ. ಬಿಜೆಪಿ ಅಭ್ಯರ್ಥಿ ಮುನಿರಾಜು ಈ ಬಾರಿ ಹಣದ ಹೊಳೆಯನ್ನೇ ಹರಿಸಿ ಗೆಲ್ಲಲೇಬೇಕೆಂದು ಪಣ ತೊಟ್ಟಿದ್ದರೂ ಮೂರನೆಯ ಸ್ಥಾನಕ್ಕೆ  ತಲುಪುವುದೂ ಕಷ್ಟವೆಂದು ಹೇಳಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ: ಬಾಗೇಪಲ್ಲಿ ಕ್ಷೇತ್ರ | ಸಿಪಿಐಎಂ ಅಭ್ಯರ್ಥಿ ಅನಿಲ್ ಕುಮಾರ್ ಮನೆ ಮೇಲೆ ದಾಳಿ; ಹತ್ಯೆಗೆ ಸಂಚು ಆರೋಪ

ಈ ಹಿಂದೆ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದ ಮಿಥುನ್ ರೆಡ್ಡಿ ಈಗ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಮೂರ್ನಾಲ್ಕು ವರ್ಷಗಳಿಂದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜ ಸೇವೆ ಮಾಡುತ್ತಾ ಬಂದವರು ಮಿಥುನ್ ರೆಡ್ಡಿ. ಕೊರೊನಾ ಸಂದರ್ಭದಲ್ಲಿ ಜನರಿಗೆ ಕಿಟ್‌ಗಳನ್ನು ಹಂಚುವ ಮೂಲಕ ಕ್ಷೇತ್ರದಲ್ಲಿ ತಮ್ಮದೇ ಹೆಸರು ಮಾಡಿದ್ದಾರೆ. ಶ್ರೀರಾಮರೆಡ್ಡಿಯವರ ಹೆಸರೇಳಿ PSS ಪಕ್ಷದ ಬೆಂಬಲವನ್ನೂ ಮಿಥುನ್ ರೆಡ್ಡಿ ಪಡೆದುಕೊಂಡಿದ್ದಾರೆ.

ಈ ಬಾರಿ ಬಿಜೆಪಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಅಂತಾದರೂ ಹಣ ಸುರಿದು ಮತದಾರರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್, ಸಿಪಿಎಂ ಮತ್ತು ಪಕ್ಷೇತರ ಅಭ್ಯರ್ಥಿಗಳ ಮಧ್ಯೆ ಪೈಪೋಟಿ ಇಲ್ಲಿ ನಡೆಯುತ್ತಿದೆ. ಜೆಡಿಎಸ್‌ ಸಿಪಿಎಂಗೆ ಬೆಂಬಲ ನೀಡಿರುವುದರಿಂದ ಅನಿಲ್‌ಕುಮಾರ್‌ ಗೆಲ್ಲುವ ಸಾಧ್ಯತೆಯಿದೆ. ಆದರೂ ಕೊನೇ ಕ್ಷಣದ ಬದಲಾವಣೆಗಳು ಫಲಿತಾಂಶವನ್ನು ನಿರ್ಧರಿಸಲಿವೆ.

Laxamana
ಲಕ್ಷ್ಮಣ್ ಮಂಡಲಗೇರಾ
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು...

ಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರು...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...