- 100ಕ್ಕೂ ಹೆಚ್ಚಿನ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ
- ಹಲವು ಸಮಸ್ಯೆಗಳನ್ನು ಈಡೇರಿಸುವ ಭರವಸೆ ನೀಡಿದ ಅಭ್ಯರ್ಥಿ
ಸೇಡಂ ಮತಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿಗೆ ಅವಕಾಶ ಕೊಟ್ಟು ಆಡಳಿತ ನೋಡಿದ್ದಿರಿ. ಜೆಡಿಎಸ್‌ಗೆ ಒಂದು ಅವಕಾಶ ಕೊಟ್ಟು ನೋಡಿ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರ ಮಾಡಿತೋರಿಸುತ್ತೇನೆ” ಎಂದು ಸೇಡಂ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಾಲರಾಜ್ ಗುತ್ತೇದಾರ ಮನವಿ ಮಾಡಿಕೊಂಡಿದ್ದಾರೆ.
ಸೇಡಂ ಪಟ್ಟಣದ ಜೆಡಿಎಸ್ ಕಛೇರಿಯಲ್ಲಿ ಗುರುವಾರ ಸಂಜೆ ತಾಲೂಕಿನ ಹನುಮನಹಳ್ಳಿ, ಕೊಡ್ಲಾ ಗ್ರಾಮದ ರವಿ, ಭೀಮಾಶಾಪ್ಪ, ಶಂಕರ ಗುತ್ತೇದಾರ್, ಕೃಷ್ಣಪ್ಪ, ದೇವು, ಪ್ರಕಾಶ್, ಶರಣಯ್ಯ, ಪ್ರವೀಣ್, ಬಂಗಾರಪ್ಪ ಸೇರಿದಂತೆ 100ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್‌ಗೆ ಸೇರ್ಪಡೆಯಾದರು. ಅವರನ್ನು ಪಕ್ಷಕ್ಕೆ ಸ್ವಾಗತಿಸಿ ಗುತ್ತೇದಾರ ಮಾತನಾಡಿದರು.
“ರೈತರಿಗೆ, ವಿದ್ಯಾರ್ಥಿಗಳಿಗೆ, ಬಡವರಿಗೆ, ಕೂಲಿಕಾರ್ಮಿಕರ ಪರವಾಗಿ ಅನೇಕ ಯೋಜನೆಗಳು ಜಾರಿಗೆ ತರುತ್ತೇನೆ. ಸೇಡಂ ಮತಕ್ಷೇತ್ರದ ನಿರುದ್ಯೋಗಿ ಯುವಕರಿಗೆ ಸ್ಥಳೀಯ ಸಿಮೆಂಟ್ ಕಾರ್ಖಾನೆಗಳಲ್ಲಿ ಉದ್ಯೊಗ ನೀಡಲು ಶ್ರಮೀಸಲಾಗುವುದು” ಎಂದು ಭರವಸೆ ನೀಡಿದರು.
ಈ ಸುದ್ದಿ ಓದಿದ್ದೀರಾ?: ಚುನಾವಣೆಗೂ ಮೊದಲೇ ಕಾಂಗ್ರೆಸ್ ಬೆಂಬಲಕ್ಕೆ ನಿಂತ ಬಿಜೆಪಿ ಬಂಡಾಯ ಅಭ್ಯರ್ಥಿ ಗೂಳಿಹಟ್ಟಿ ಶೇಖರ್…!
“ಜೆಡಿಎಸ್ ಅಭ್ಯರ್ಥಿಯಾಗಿ ನಾನು ಆಯ್ಕೆಯಾದಾಗಿನಿಂದ ಮತಕ್ಷೇತ್ರದ ಜನರ ಸಮಸ್ಯೆ ಅರಿಯಲು ಕ್ಷೇತ್ರದ 133 ಗ್ರಾಮಗಳಲ್ಲಿ ಪಾದಯಾತ್ರೆ ನಡೆಸಿದ್ದೇನೆ. ಜನರ ಸಮಸ್ಯೆ ಆಲಿಸಿದ್ದೇನೆ. ಮಾತ್ರವಲ್ಲದೇ, ಅನೇಕ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ” ಎಂದರು.
ಈ ವೇಳೆ ಸುನೀತಾ ತಳವಾರ, ಶಂಭುಲಿಂಗ ನಾಟೇಕಾರ, ಭೀಮರಾಯ ಹನಮನಳ್ಳಿ, ಓಂಕಾರ್ ಮೋಹನ, ಡಾ. ಸುಶೀಲ್ ಗುತ್ತೇದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.