ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ 50 ಸಾವಿರ ರೂ. ಬಹುಮಾನ ನೀಡಿದ ಜಮೀರ್ ಅಹಮದ್ ಖಾನ್

Date:

  • ಇಂಡೋನೆಷ್ಯಾ ಜಕಾರ್ತಾದಲ್ಲಿ ನಡೆದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ
  • ವಿಶೇಷ ಚೇತನರ ಪರ ಕೆಲಸ ಮಾಡುವ ಗ್ಲೋಬಲ್ ಆರ್ಗನೈಜೇಶನ್ ಸಂಸ್ಥೆಗೆ 2 ಲಕ್ಷ ನೆರವು

ಇಂಡೋನೆಷ್ಯಾ ಜಕಾರ್ತಾದಲ್ಲಿ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ಗಳಿಸಿದ ಮೊಹಮದ್ ತಾಹೀರ್ ಎಂಬ ವಿದ್ಯಾರ್ಥಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ 50 ಸಾವಿರ ರೂ. ಬಹುಮಾನ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಂದರ್ಭದಲ್ಲಿ ಪದಕ ಗೆದ್ದ ಮೊಹಮದ್ ತಾಹೀರ್‌ಗೆ ನಗದು ಬಹುಮಾನ ನೀಡಿ ಸನ್ಮಾನಿಸಿದರು.

ಕಳೆದ ತಿಂಗಳು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೋಷಕರೊಂದಿಗೆ ಬಂದಿದ್ದ ತಾಹೀರ್, “ನಾನು ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದು ಪಾಲ್ಗೊಳ್ಳಲು ಆರ್ಥಿಕ ಸಂಕಷ್ಟ ಎದುರಾಗಿದೆ. ನಮ್ಮ ತಂದೆ ಎಲೆಕ್ಟ್ರಿಶಿಯನ್ ಕೆಲಸ ಮಾಡುತ್ತಿದ್ದು ಅಷ್ಟು ಹಣ ಹೊಂದಿಸಲು ಆಗುತ್ತಿಲ್ಲ” ಎಂದು ಹೇಳಿದ್ದ. ಆಗ ಈ ವಿದ್ಯಾರ್ಥಿಗೆ ಸಚಿವರು 65 ಸಾವಿರ ರೂ. ವಿಮಾನಯಾನ ಟಿಕೆಟ್ ಮಾಡಿಸಿಕೊಟ್ಟಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಹೆಬ್ಬಾಳದ ಕ್ರೆಸೆಂಟ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ತಾಹೀರ್ ಚಿನ್ನದ ಪದಕ ಗೆದ್ದು ಬಂದಿದ್ದಾನೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇಂದು ಸಚಿವರ ಬಳಿ ಬಂದಿದ್ದ ತಾಹೀರ್ ಪೋಷಕರು, ನೀವು ಸಹಾಯ ಮಾಡಿದ್ದಕ್ಕೆ ನಮ್ಮ ಮಗ ಸ್ಪರ್ಧೆಯಲ್ಲಿ ಭಾಗಿಯಾಗಿ ಬಂಗಾರ ಪದಕ ಗೆಲ್ಲುವಂತಾಯಿತು ಎಂದು ಕೃತಜ್ಞತೆ ಸಲ್ಲಿಸಿದರು. 50 ಸಾವಿರ ನಗದು ಬಹುಮಾನ ನೀಡಿದ ಸಚಿವರು, ನಿಮ್ಮ ಮಗನ ಸಾಧನೆ ಹೆಮ್ಮೆಯ ವಿಷಯ ಎಂದು ಹೇಳಿದರು.

ವಿಶೇಷ ಚೇತನರ ಪರ ಕೆಲಸ ಮಾಡುವ ಗ್ಲೋಬಲ್ ಆರ್ಗನೈಜೇಶನ್ ಸಂಸ್ಥೆಗೆ ಸಚಿವರು ವೈಯಕ್ತಿಕವಾಗಿ ಎರಡು ಲಕ್ಷ ರೂ. ನೆರವನ್ನು ಇದೇ ಸಂದರ್ಭದಲ್ಲಿ ನೀಡಿದರು.

ಮಾಜಿ ಸಂಸದ ಚಂದ್ರಪ್ಪ, ಮಾಜಿ ಮೇಯರ್ ರಾಮಚಂದ್ರಪ್ಪ, ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶೇಖರ್, ಮುಖಂಡರಾದ ಜಿ. ಎ. ಬಾವಾ ಮತ್ತಿತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ; ಸಿಎಂ ಸಿದ್ದರಾಮಯ್ಯ ಭರವಸೆ

ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ...

ಪೂರ್ಣಪ್ರಮಾಣದಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆ; ನಾಳೆ ಪ್ರಮಾಣ ವಚನ

ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆಯ ಕಸರತ್ತು ಕೊನೆಗೂ ಅಂತ್ಯಗೊಂಡಿದ್ದು, 24...

ಕಾಂಗ್ರೆಸ್‌ ಸರ್ಕಾರ | ಪ್ರಮಾಣವಚನ ಸ್ವೀಕರಿಸಿದವರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಎಂಟು...