ಗ್ರೇಟರ್‌ ಬೆಂಗಳೂರು ಪ್ರಾಧಿಕಾರ | 5 ಪಾಲಿಕೆಗಳಲ್ಲಿ 368 ವಾರ್ಡ್; ನಗರಾಭಿವೃದ್ದಿ ಇಲಾಖೆ ಅಧಿಸೂಚನೆ

Date:

Advertisements

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ಗಳನ್ನು ಮರು ವಿಂಗಡಣೆ ಮಾಡಿ, ಗಡಿ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಮಂಗಳವಾರ ಕರಡು ಅಧಿಸೂಚನೆ ಹೊರಡಿಸಿದೆ. ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು 368 ವಾರ್ಡ್‌ಗಳಿವೆ.

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ–2024 (ಜಿಬಿಜಿಎ) ಅಡಿಯಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರವನ್ನು (ಜಿಬಿಎ) ಸೆಪ್ಟೆಂಬರ್‌ 2ರಂದು ರಚಿಸಲಾಗಿತ್ತು. ಜಿಬಿಎ ವ್ಯಾಪ್ತಿಯಲ್ಲಿ ಹಿಂದಿನ ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ 198 ವಾರ್ಡ್‌ಗಳನ್ನು ಹಂಚಿಕೆ ಮಾಡಿ ಐದು ನಗರ ಪಾಲಿಕೆಗಳನ್ನು ರಚಿಸಿ, ಗಡಿ ನಿಗದಿ ಮಾಡಿ ಅಂದೇ ಅಧಿಸೂಚನೆ ಹೊರಡಿಸಲಾಗಿತ್ತು.

ಐದು ನಗರ ಪಾಲಿಕೆಗಳ ವಾರ್ಡ್‌ಗಳನ್ನು ಮರು ವಿಂಗಡಿಸಲು, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್ ನೇತೃತ್ವದಲ್ಲಿ‘ವಾರ್ಡ್‌ಗಳ ಪುನರ್‌ ವಿಂಗಡಣಾ ಆಯೋಗ’ವನ್ನು ರಚಿಸಿ, ಸೆಪ್ಟೆಂಬರ್‌ 23ರಂದು ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ಆಯೋಗ ಒಂದು ವಾರ ತಡವಾಗಿ, ಸೆ. 30ರಂದು ವರದಿ ಸಲ್ಲಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ–2024ರ ಪ್ರಕರಣ 29ರ ಉಪ ಪ್ರಕರಣ (1) ಮತ್ತು (3)ರ ಅನ್ವಯ ವಾರ್ಡ್‌ಗಳ ಪುನರ್‌ ವಿಂಗಡಣೆ ಮಾಡಿ, ಸಲ್ಲಿಸಲಾಗಿದ್ದ ವಾರ್ಡ್‌ ಮರು ವಿಂಗಡಣೆಯ ವರದಿಯನ್ನು ಸರ್ಕಾರ ಒಪ್ಪಿದೆ. ಜಿಬಿಜಿಎ ಕಾಯ್ದೆಯ 29ರಲ್ಲಿ ಪ್ರದತ್ತವಾದ ಅಧಿಕಾರದನ್ವಯ 2011ರ ಜನಗಣತಿಯ ಆಧಾರದಲ್ಲಿ, ಗ್ರೇಟರ್‌ ಬೆಂಗಳೂರು ಪ್ರದೇಶದ ಐದು ನಗರ ಪಾಲಿಕೆಗಳಲ್ಲಿ ವಾರ್ಡ್‌ವಾರು ಕ್ಷೇತ್ರ ಪುನರ್‌ ವಿಂಗಡಣೆ ಮಾಡಿ ಕರಡು ಅಧಿಸೂಚನೆ ಹೊರಡಿಸಿದೆ.

ಯಾವುದೇ ಆಕ್ಷೇಪ/ ಸಲಹೆಗಳಿದ್ದರೆ ಸಾರ್ವಜನಿಕರು ತಮ್ಮ ಪೂರ್ಣ ವಿಳಾಸ, ಸಹಿಯೊಂದಿಗೆ ಸೂಕ್ತ ಕಾರಣ–ವಿವರಣೆಗಳೊಂದಿಗೆ ಲಿಖಿತ ರೂಪದಲ್ಲಿ ‘ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 436, 4ನೇ ಮಹಡಿ, ವಿಕಾಸ ಸೌಧ, ಬಿ.ಆರ್‌. ಅಂಬೇಡ್ಕರ್‌ ವೀದಿ, ಬೆಂಗಳೂರು– 560001’ ಇವರಿಗೆ ಅಕ್ಟೋಬರ್‌ 15ರ ಸಂಜೆ 5ರೊಳಗೆ ಸಲ್ಲಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ತಿಳಿಸಿದೆ.

ನಿಗದಿತ ಅವಧಿಯಲ್ಲಿ ಸ್ವೀಕೃತವಾದ ಆಕ್ಷೇಪಣೆ/ ಸಲಹೆಗಳನ್ನು ಪರಿಶೀಲಿಸಿ, ನಗರ ಪಾಲಿಕೆಗಳ ವಾರ್ಡ್‌ವಾರು ಕ್ಷೇತ್ರ ಪುನರ್‌ ವಿಂಗಡಣೆಯನ್ನು ಅಂತಿಮಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಒತ್ತುವರಿ ಅರಣ್ಯ ಭೂಮಿ ವಶಕ್ಕೆ ವಿಶೇಷ ಕಾರ್ಯಪಡೆ ರಚನೆ; ಅರಣ್ಯ ಸಚಿವರ ಆದೇಶ

ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ಮರುಪಡೆಯಲು, ಕರ್ನಾಟಕ ಅರಣ್ಯ...

ನಮ್ಮ ಸಚಿವರು | ಕರ್ನಾಟಕ – ಕೇರಳಕ್ಕೂ ಇದೆ ಹಲವು ರಾಜಕೀಯ ನಂಟು; ಅದು ಕೆ ಜೆ ಜಾರ್ಜ್‌ಗೂ ಉಂಟು

ಇಂದಿರಾಗಾಂಧಿಯವರ ಕಾಲದಿಂದಲೂ ಕೆ ಜೆ ಜಾರ್ಜ್ ಕಾಂಗ್ರೆಸ್‌ನ ಯುವ ನಾಯಕರಾಗಿದ್ದಾರೆ. 1989...

ನಮ್ಮ ಸಚಿವರು | ಅಂದು ಗೌಡರ ಶಿಷ್ಯ, ಇಂದು ಸಿದ್ದು ಬಂಟ; ಪ್ರಭಾವಿ ರಾಜಕೀಯ ನಾಯಕನಾದ ಟ್ರಾವೆಲ್ಸ್ ಮಾಲೀಕ

ಬೆಂಗಳೂರಿನ ರಾಜಕೀಯದಲ್ಲಿ ಜಮೀರ್ ಅಹ್ಮದ್ ಖಾನ್ ಕೂಡ ಪ್ರಭಾವಿಯಾಗಿದ್ದಾರೆ. 2015ರಲ್ಲಿ ನಡೆದ...

ನಮ್ಮ ಸಚಿವರು | ದಿನೇಶ್ ಗುಂಡೂರಾವ್: ವರ್ಚಸ್ಸಷ್ಟೇ ಸಾಲದು; ಅಭಿವೃದ್ಧಿಗೂ ಬೇಕಿದೆ ಒತ್ತು

ಮುಖ್ಯಮಂತ್ರಿಗಳಾಗಿದ್ದ ತಂದೆ ಆರ್. ಗುಂಡೂರಾವ್ ನೆರಳಿನಲ್ಲಿ ರಾಜಕಾರಣದ ಪಟ್ಟುಗಳನ್ನು ಕರಗತ ಮಾಡಿಕೊಂಡ...

Download Eedina App Android / iOS

X