ದಂಪತಿಗೆ ಕನ್ನಡ ನಟ ನಾಗಭೂಷಣ್​ ಕಾರು ಡಿಕ್ಕಿ: ಮಹಿಳೆ ಮೃತ್ಯು

Date:

  • ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಶನಿವಾರ ರಾತ್ರಿ ನಡೆದ ಘಟನೆ
  • ರಾತ್ರಿ ವಾಕಿಂಗ್‌ ಮಾಡುತ್ತಿದ್ದ ದಂಪತಿಗಳ ಪೈಕಿ ಪ್ರೇಮಾ ಮೃತ್ಯು ; ನಟ ಪೊಲೀಸ್ ವಶಕ್ಕೆ

ಸ್ಯಾಂಡಲ್‌ವುಡ್‌ ನಟ ನಾಗಭೂಷಣ ಅವರು ಸಂಚರಿಸುತ್ತಿದ್ದ ಕಾರು ದಂಪತಿಗೆ ಡಿಕ್ಕಿಯಾಗಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಸೆ.30ರ ಶನಿವಾರ ರಾತ್ರಿ ದಂಪತಿಯು ನಡೆದುಕೊಂಡು ಹೋಗುವಾಗ ನಾಗಭೂಷಣ ಅವರ ಕಾರು ಡಿಕ್ಕಿಯಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್​ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸು​ ದಾಖಲಿಸಲಾಗಿದ್ದು, ಘಟನೆಗೆ ಕಾರಣನಾಗಿರುವ ಹಿನ್ನೆಲೆಯಲ್ಲಿ ನಟ ನಾಗಭೂಷಣ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೃಷ್ಣ (58) ಹಾಗೂ ಅವರ ಪತ್ನಿ ಪ್ರೇಮಾ (48) ಅವರು ರಾತ್ರಿ ವಾಕಿಂಗ್‌ ಮಾಡುವಾಗ ನಟ ನಾಗಭೂಷಣ ಅವರು ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿದೆ. ಮೊದಲು ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ನಂತರ ಫುಟ್‌ಪಾತ್‌ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ಕೃಷ್ಣ ಅವರನ್ನು ಬನ್ನೇರುಘಟ್ಟದಲ್ಲಿರುವ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ನಡುವೆ ನಾಗಭೂಷನ್ ಕಾರು ಚಲಾಯಿಸುವಾಗ ಮದ್ಯ ಸೇವನೆ ಮಾಡಿರುವ ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿದ್ದು, ನಟ ಮದ್ಯ ಸೇವಿಸಿರಲಿಲ್ಲ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರೇಮಾ ಮತ್ತು ಕೃಷ್ಣ ದಂಪತಿಯ ಪುತ್ರ ಪಾರ್ಥ ಕೆ. ಅವರು ದೂರು ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತರಿಗೆ ಮೀಸಲಿರುವ ಹಣ ಗ್ಯಾರಂಟಿಗಳಿಗೆ ಬಳಕೆಯಾದರೆ ಸರ್ಕಾರದ ವಿರುದ್ಧ ಹೋರಾಟ: ದಲಿತ ಸಂಘರ್ಷ ಸಮಿತಿ ಎಚ್ಚರಿಕೆ

ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು...

ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಅದು ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ...

ಶಿರೂರು ಗುಡ್ಡ ಕುಸಿತ | ನೊಂದ ಕುಟುಂಬಗಳ ಜತೆ ಸರಕಾರ ನಿಲ್ಲಬೇಕು: ಎಚ್‌ ಡಿ ಕುಮಾರಸ್ವಾಮಿ

ರಾಜ್ಯ ಸರಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು...

ನಮ್ಮ ಬಗ್ಗೆಯೂ ತನಿಖೆ ಮಾಡಿ, ಆದರೆ ಮೊದಲು ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ಬಿ ವೈ ವಿಜಯೇಂದ್ರ

ಮುಖ್ಯಮಂತ್ರಿಗಳೇ ನೀವು ಅಹಿಂದ ಹೆಸರು ಹೇಳಿ ಅಧಿಕಾರಕ್ಕೆ ಬಂದವರು. ವಾಲ್ಮೀಕಿ ನಿಗಮದಲ್ಲಿ...