ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ | ಮ್ಯಾಜಿಸ್ಟ್ರೇಟ್ ತನಿಖಾ ವರದಿ ಒಪ್ಪಿಕೊಂಡ ಸರ್ಕಾರ

Date:

  • 2023ರ ಜನವರಿ ತಿಂಗಳಲ್ಲಿ ಮ್ಯಾಜಿಸ್ಟ್ರೇಟ್ ತನ್ನ ವರದಿ ನೀಡಿದಾಗ ಕಾಂಗ್ರೆಸ್‌ ವಿರೋಧಿಸಿತ್ತು
  • ಮ್ಯಾಜಿಸ್ಟ್ರೇಟ್ ವರದಿಯನ್ನು ಸರ್ಕಾರ ಒಪ್ಪಿಕೊಂಡಿದ್ದು ಸರಿಯಾದ ಕ್ರಮ: ಬೊಮ್ಮಾಯಿ

ರಾಜ್ಯಾದ್ಯಂತ ಭಾರೀ ಚರ್ಚೆಯನ್ನು ಹುಟ್ಟು ಹಾಕಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖಾ ವರದಿಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.

- Advertisement -

ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರ ವಿರುದ್ಧ ಅವಹೇಳನಕಾರಿಯಾಗಿ ಬರೆಯಲಾಗಿದೆ ಎಂದು ಗಲಭೆ ಉಂಟಾಗಿತ್ತು. ಈ ಗಲಭೆಯಲ್ಲಿ ಗೊಲೀಬಾರ್ ನಡೆದು, ಮೂವರು ಬಲಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ನಡೆದಿದ್ದ ದಾಳಿ ಬಳಿಕ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಕಿಡಿಗೇಡಿಗಳು ಮುಂದಾಗಿದ್ದರು. ಗುಂಪು ನಿಯಂತ್ರಣಕ್ಕೆ ಪೊಲೀಸರು ಮಾಡಿದ ಗೋಲಿಬಾರ್‌ನಲ್ಲಿ ಮೂವರು ಸಾವನ್ನಪ್ಪಿದ್ದರು. ಪೊಲೀಸ್ ಗುಂಡು ಹಾರಿಸಿದ ಪರಿಣಾಮ ಯಾಸಿನ್ ಪಾಷಾ, ವಾಜಿದ್ ಖಾನ್, ಶೇಕ್ ಸಿದ್ದಿಕ್ ಮೃತಪಟ್ಟಿದ್ದರು.

ಅಂದು ಕಾಂಗ್ರೆಸ್‌ ಕಿಡಿ

ಗಲಭೆ ನಿಯಂತ್ರಣ ಮಾಡಲು ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಅಂದು ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಆರೋಪ ಮಾಡಿತ್ತು. ಅಲ್ಲದೆ, ಒಂದು ಸಮುದಾಯವನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಈ ಹಿನ್ನೆಲೆಯಲ್ಲಿ ಗಲಭೆ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಬಿಜೆಪಿ ಸರ್ಕಾರ ವಹಿಸಿತ್ತು.

ಪೊಲೀಸರ ಗೋಲಿಬಾರ್ ಕ್ರಮ ಸರಿಯಿದೆ ಎಂದ ವರದಿ

ಘಟನೆಯ ಬಗ್ಗೆ ಸಂಪೂರ್ಣವಾದ ತನಿಖೆ ನಡೆಸಿ 2023ರ ಜನವರಿ ತಿಂಗಳಲ್ಲಿ ಮ್ಯಾಜಿಸ್ಟ್ರೇಟ್ ತನ್ನ ವರದಿ ನೀಡಿತ್ತು. ಈ ವರದಿಯಲ್ಲಿ ಪೊಲೀಸರ ಗೋಲಿಬಾರ್ ಕ್ರಮ ಸರಿಯಿದೆ ಎಂದು ಹೇಳಲಾಗುತ್ತು. ಅಂದು ಪೋಲಿಸರು ಗೋಲಿಬಾರ್ ಮಾಡಿರದಿದ್ದರೆ ಇಡೀ ಠಾಣೆಗೆ ಬೆಂಕಿ ಹಚ್ಚುತ್ತಿದ್ದರು. ಸ್ವಯಂ ರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿ ಕಾಪಾಡಲು ಗೋಲಿಬಾರ್ ನಡೆದಿದೆ ಎಂದು ರಿಪೋರ್ಟ್ ನಲ್ಲಿ ಉಲ್ಲೇಖ ಮಾಡಲಾಗಿದೆ.

ಆದರೆ, ಈ ವರದಿಯನ್ನು ಕಾಂಗ್ರೆಸ್ ಆಗ ಒಪ್ಪಿರಲಿಲ್ಲ. ಚುನಾವಣಾ ಸಮಯದಲ್ಲಿ ಮುಸ್ಲಿಂ ಸಮುದಾಯವನ್ನು ಟಾರ್ಗೆಟ್ ಮಾಡಡಲಾಗಿದೆ ಎಂದು ಟೀಕಿಸಿತ್ತು. ಆದರೆ ಇದೀಗ ಅಧಿಕಾರಕ್ಕೆ ಬಂದ ಬಳಿಕ ಇದೇ ವರದಿಯನ್ನು ಕಾಂಗ್ರೆಸ್ ಸರ್ಕಾರ ಒಪ್ಪಿಕೊಂಡಿದೆ.

ಸರ್ಕಾರದ ಕ್ರಮ ಸರಿಯಾಗಿದೆ: ಬೊಮ್ಮಾಯಿ

“ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಸಂದರ್ಭದಲ್ಲಿ ಹಿಂದಿನ ಸರ್ಕಾರ ನೇಮಿಸಿದ್ದ ಮ್ಯಾಜಿಸ್ಟ್ರೇಟ್ ಪೊಲೀಸರು ತೆಗೆದುಕೊಂಡ ಕ್ರಮ ಸರಿಯಾಗಿದೆ ಎಂದು ನೀಡಿದ್ದ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ತಾಗಿ ಒಪ್ಪಿಕೊಂಡಿದ್ದು ಸರಿಯಾದ ಕ್ರಮವಾಗಿದ್ದು, ತಮ್ಮ ಸರ್ಕಾರದ ತೀರ್ಮಾನ ಸರಿಯಾಗಿತ್ತು” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಡಿಜೆ ಹಳ್ಳಿ ಹಳ್ಳಿ ಗಲಭೆ ವಿಚಾರದಲ್ಲಿ ನೇಮಿಸಿದ್ದ ಅಧಿಕಾರಿಯ ರಿಪೋರ್ಟ್ ಬಂದಿದೆ. ರಾಜ್ಯ ಸರ್ಕಾರ ಯಥಾವತ್ತಾಗಿ ವರದಿ ಒಪ್ಪಿಕೊಂಡಿದೆ. ಇದು ಸರಿಯಾದ ಕ್ರಮ. ಹಿಂಸೆ, ಪೊಲೀಸರ ಮೇಲೆ ದಾಳಿ, ಕಾನೂನು ಸುವ್ಯವಸ್ಥೆ ಕಾಪಾಡಲು ತೆಗೆದುಕೊಂಡ ಕ್ರಮವಾಗಿದೆ” ಎಂದಿದ್ದಾರೆ.

ಒಂದು ಸಮುದಾಯವನ್ನು ಟಾರ್ಗೆಟ್ ಮಾಡಿದ್ದರು ಎಂದು ಕಾಂಗ್ರೆಸ್‌ನವರು ಮಾಡಿರುವ ಆರೋಪದ‌ ಕುರಿತು ಕೇಳಿದ ಪ್ರಶ್ನೆಗೆ “ಎಲ್ಲ ವಿಚಾರಗಳು ಮಾಧ್ಯಮದಲ್ಲಿ ಲೈವ್ ಆಗಿ ನೋಡಿದ್ದಾರೆ. ಯಾವುದೇ ಸಮುದಾಯ ಟಾರ್ಗೆಟ್ ಮಾಡುವ ಕೆಲಸ ಮಾಡಿಲ್ಲ. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ರೆಕಾರ್ಡ್ಸ್ ಸುಟ್ಟು ಹಾಕುವ ಕೆಲಸ ಮಾಡಿದ್ದರು. ಅವರದ್ದೇ ಪಕ್ಷದ ಶಾಸಕನ ರಕ್ಷಣೆಗೆ ಬರಲಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...