ನೆರೆ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ತುಷಾರ್ ಗಿರಿನಾಥ್

Date:

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ನೆರೆ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಪೂರ್ವ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಇಂದು ನಗರದ ವಿವಿಧ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕೇಂದ್ರೀಯ ವಿಹಾರ್ ಪ್ರದೇಶಕ್ಕೆ ರಕ್ಷಣೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

2024ರ ಪ್ರವಾಹದ ಬಳಿಕ ಯಲಹಂಕ ಕೆರೆಯ ವೆಂಕಟಾಲ ಕೆರೆಯ ಕೋಡಿಯಿಂದ ಜಕ್ಕೂರು ಕೆರೆಯವರೆಗೆ 2.7 ಕಿ.ಮೀ ಉದ್ದದ 35 ಮೀ. ಅಗಲದ ರಾಜಕಾಲುವೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ 1.5 ಕಿ.ಮೀ ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಭಾಗದಲ್ಲಿ ಕಚ್ಚಾ ಡ್ರೈನ್ ನಿರ್ಮಿಸಲಾಗಿದೆ. ಇದರಿಂದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ಪ್ರದೇಶದಲ್ಲಿ ಪ್ರವಾಹ ಸಮಸ್ಯೆ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ.

ಟಾಟಾ ನಗರದಲ್ಲಿ ನೀರುಗಾಲುವೆ ನಿರ್ಮಾಣ:

ದೊಡ್ಡಬೊಮ್ಮಸಂದ್ರ ಕೆರೆಯಿಂದ ಟಾಟಾ ನಗರವರೆಗೆ 900 ಮೀಟರ್ ಉದ್ದದ 20 ಅಡಿ ಅಗಲದ ನೀರುಗಾಲುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮಳೆಗಾಲಕ್ಕೂ ಮುನ್ನವೇ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಹೆಬ್ಬಾಳ ಕೆರೆ ಅಭಿವೃದ್ಧಿ:

192 ಎಕರೆ ವ್ಯಾಪ್ತಿಯ ಹೆಬ್ಬಾಳ ಕೆರೆಯಲ್ಲಿ 15.90 ಕೋಟಿ ರೂ. ವೆಚ್ಚದ ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಒತ್ತುವರಿಯಿಂದ ತೆರವುಗೊಳಿಸಿದ 16 ಎಕರೆ ಪ್ರದೇಶದಲ್ಲಿ ವೆಟ್‌ಲ್ಯಾಂಡ್ ನಿರ್ಮಾಣ, ಇನ್‌ಲೆಟ್ ವ್ಯವಸ್ಥೆ ಹಾಗೂ ಹೂಳೆತ್ತುವ ಕಾರ್ಯಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಹೆಬ್ಬಾಳ ಜಂಕ್ಷನ್‌ನಲ್ಲಿ ವಾಟರ್ ಲಾಗಿಂಗ್ ನಿವಾರಣೆ:

ಹೆಬ್ಬಾಳ ಜಂಕ್ಷನ್‌ನಲ್ಲಿ ನೀರು ನಿಲ್ಲುವ ಸಮಸ್ಯೆ ತಪ್ಪಿಸಲು ಗ್ರೇಟಿಂಗ್ ಸರಿಪಡಿಸುವುದು, ಲೆವೆಲ್ ಕರೆಕ್ಷನ್, ಪೈಪ್ ಕಲ್ವರ್ಟ್ ಅಳವಡಿಕೆ ಹಾಗೂ ಶೋಲ್ಡರ್ ಡ್ರೈನ್ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ದೇಶನ ನೀಡಿದರು.

ಮಾನ್ಯತಾ ಟೆಕ್ ಪಾರ್ಕ್ ಬಳಿ ಕಾಲುವೆ ನಿರ್ಮಾಣ:

ವೀರಣ್ಣಪಾಳ್ಯ ಸರ್ವೀಸ್ ರಸ್ತೆಯಿಂದ ಹೆಬ್ಬಾಳ ವ್ಯಾಲಿವರೆಗೆ 1.2 ಕಿ.ಮೀ ಉದ್ದದ ಮಾನವ ನಿರ್ಮಿತ ಕಾಲುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಬಾಕಿ ಭಾಗದ ಆರ್‌ಸಿಸಿ ಕಾಮಗಾರಿಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ನಾಗವಾರ ಜಂಕ್ಷನ್‌ನಲ್ಲಿ 715 ಮೀಟರ್ ಕಾಮಗಾರಿಯಲ್ಲಿ ಬಾಕಿ ಇರುವ 70 ಮೀಟರ್ ಕೆಲಸವನ್ನು 15 ದಿನಗಳಲ್ಲಿ ಪೂರ್ಣಗೊಳಿಸಿ ಮಳೆಗಾಲಕ್ಕೂ ಮುನ್ನ ಕಾಂಕ್ರೀಟ್ ಕಾಮಗಾರಿ ಮುಗಿಸುವಂತೆ ಸೂಚಿಸಿದರು.

ಜಲಮಂಡಳಿಯ ಸ್ಯಾನಿಟರಿ ಡ್ರೈನ್ ಕ್ಲಿಯರ್ ಮಾಡಿ, ಪಂಪಿಂಗ್ ವ್ಯವಸ್ಥೆ ಹಾಗೂ ಡ್ರೈನ್ ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್, ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೊಮಿನ್, ಮುಖ್ಯ ಅಭಿಯಂತರ ರಾಘವೇಂದ್ರ ಪ್ರಸಾದ್, ರಾಜೇಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...