ಬೆಂಗಳೂರು | ಏ.​ 10ರಿಂದ ರೈಲುಗಳ ಸಂಚಾರ ಭಾಗಶಃ ರದ್ದು: ಇಲ್ಲಿದೆ ವಿವರ

Date:

Advertisements
  • ಏ. ​10ರಂದು ತಿರುಪತಿಯಿಂದ ಹೊರಡುವ ರೈಲು ರದ್ದುಗೊಳ್ಳುವ ಸಾಧ್ಯತೆ
  • ನಿಲ್ದಾಣದ ಯಾರ್ಡ್​​ ಲೈನ್​-2ರಲ್ಲಿ ಗರ್ಡರ್​​ ಅಳವಡಿಕೆ ಹಿನ್ನಲೆ ರೈಲು ವ್ಯತ್ಯಯ

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಯಾರ್ಡ್​​ನ ಲೈನ್​-2ರಲ್ಲಿ ಗರ್ಡರ್​​ನ ಅಳವಡಿಕೆಗೆ ಸಂಬಂಧಿಸಿದಂತೆ, ಲೈನ್​ ಬ್ಲಾಕ್​ ಮತ್ತು ಪವರ್​ ಬ್ಲಾಕ್​ ಕಾಮಗಾರಿ ಆರಂಭವಾಗುವುದರಿಂದ ಏ.​ 10ರಿಂದ ಕೆಲವು ರೈಲು ಭಾಗಶಃ ರದ್ದು, ಕೆಲವು ರೈಲು ಮಾರ್ಗ ಬದಲಾವಣೆ ಹಾಗೂ ಕೆಲವು ರೈಲುಗಳನ್ನು ರೀ ಶೆಡ್ಯೂಲ್​ ಮಾಡಲಾಗುತ್ತದೆ ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.

ರದ್ದುಗೊಳ್ಳಬಹುದಾದ ರೈಲುಗಳು

  • (ರೈಲು ಸಂಖ್ಯೆ 16220) ಚಾಮರಾಜನಗರ ಡೈಲಿ ಎಕ್ಸ್‌ಪ್ರೆಸ್ ಏ. ​10ರಂದು ತಿರುಪತಿಯಿಂದ ಹೊರಡುವ ರೈಲು ವೈಟ್‌ಫೀಲ್ಡ್ – ಚಾಮರಾಜನಗರ ನಡುವೆ ರದ್ದುಗೊಳ್ಳುವ ಸಾಧ್ಯತೆ ಇದೆ.
  • (ರೈಲು ಸಂಖ್ಯೆ 16594) ನಾಂದೇಡ್ – ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ಏ.10 ರಂದು ನಾಂದೇಡ್‌ನಿಂದ ಹೊರಡುವ ರೈಲು ಯಲಹಂಕ-ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳ್ಳಲಿದೆ.
  • (ರೈಲು ಸಂಖ್ಯೆ 06532) ದೇವನಹಳ್ಳಿ – ಕೆಎಸ್‌ಆರ್ ಬೆಂಗಳೂರು ವಿಶೇಷ ಮೆಮು ರೈಲು ಏ. 10ರಂದು ದೇವನಹಳ್ಳಿಯಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್-ಕೆಎಸ್‌ಆರ್ ಬೆಂಗಳೂರು ನಡುವೆ ರದ್ದುಗೊಳ್ಳಬಹುದು.
  • (ರೈಲು ಸಂಖ್ಯೆ 06531) ಕೆಎಸ್‌ಆರ್ ಬೆಂಗಳೂರು-ದೇವನಹಳ್ಳಿ ಮೆಮು ವಿಶೇಷ ರೈಲು ಕೆಎಸ್‌ಆರ್ ಬೆಂಗಳೂರಿನಿಂದ ಏ.11 ರಂದು ಹೊರಡಲಿದ್ದು, ಕೆಎಸ್‌ಆರ್-ಬೆಂಗಳೂರು ಕಂಟೋನ್ಮೆಂಟ್ ನಡುವೆ ಭಾಗಶಃ ರದ್ದಾಗಲಿದೆ.
  • (ರೈಲು ಸಂಖ್ಯೆ 12678) ಎರ್ನಾಕುಲಂ – ಕೆಎಸ್‌ಆರ್ ಬೆಂಗಳೂರು ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಎರ್ನಾಕುಲಂನಿಂದ ಏ. 10ರಂದು ಹೊರಡುತ್ತದೆ. ಈ ರೈಲು ಬೈಯ್ಯಪ್ಪನಹಳ್ಳಿ-ಕೆಎಸ್‌ಆರ್ ಬೆಂಗಳೂರು ನಡುವಿನ ಸಂಚಾರ ರದ್ದಾಗಬಹದು. ಈ ರೈಲು ಬೈಯ್ಯಪ್ಪನಹಳ್ಳಿಯಲ್ಲಿ ಕೊನೆಗೊಳ್ಳುತ್ತದೆ.
  • (ರೈಲು ಸಂಖ್ಯೆ 12677) ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಏ. 11ರಂದು ಕೆಎಸ್‌ಆರ್-ಬೈಯ್ಯಪ್ಪನಹಳ್ಳಿ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಬೆಳಗ್ಗೆ 6.10 ಕ್ಕೆ ಹೊರಡುತ್ತದೆ.
  • (ರೈಲು ಸಂಖ್ಯೆ 01772) ಮಾರಿಕುಪ್ಪಂ-ಕೆಎಸ್‌ಆರ್ ಬೆಂಗಳೂರು ವಿಶೇಷ್ ಮೆಮು ಏ.11 ರಂದು ಮಾರಿಕುಪ್ಪಂನಿಂದ ಹೊರಡುತ್ತದೆ. ಕೆಎಸ್​ಆರ್​​ ಬೆಂಗಳೂರು ಮತ್ತು ಬೆಂಗಳೂರು- ಬೆಂಗಳೂರು ಕಂಟೋನ್ಮೆಂಟ್‌ ನಡುವೆ ಭಾಗಶಃ ರದ್ದಾಗಲಿದೆ.
  • (ರೈಲು ಸಂಖ್ಯೆ 06396) ಕೆಎಸ್‌ಆರ್ ಬೆಂಗಳೂರು-ಮಾರಿಕುಪ್ಪಂ ವಿಶೇಷ ಮೆಮು ಏ. 11 ರಂದು ಕೆಎಸ್‌ಆರ್ ಬೆಂಗಳೂರಿನಿಂದ ಹೊರಡಲಿದ್ದು, ಕೆಎಸ್‌ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ಅದು ನಿಗದಿತ ಸಮಯದಲ್ಲಿ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಡಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ.

ರೈಲುಗಳ ಮಾರ್ಗ ಬದಲಾವಣೆ

  • ಮೈಸೂರು – ಎಂಜಿಆರ್ ಚೆನ್ನೈ ಸೆಂಟ್ರಲ್ ಕಾವೇರಿ ಡೈಲಿ ಎಕ್ಸ್‌ಪ್ರೆಸ್ ಏ. 10 ರಂದು ಮೈಸೂರಿನಿಂದ ಹೊರಡುತ್ತದೆ. ಇದು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಬಾಣಸವಾಡಿ, ಬೈಯ್ಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರದ ಮೂಲಕ ಸಂಚರಿಸುತ್ತದೆ. ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆ ಇರುವುದಿಲ್ಲ.
  • ಎಂಜಿಆರ್ ಚೆನ್ನೈ ಸೆಂಟ್ರಲ್ ಏ. 10 ರಂದು ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಹೊರಡುವ ಮೈಸೂರು ಕಾವೇರಿ ಡೈಲಿ ಎಕ್ಸ್‌ಪ್ರೆಸ್ ಅನ್ನು ಕೃಷ್ಣರಾಜಪುರಂ, ಬೈಯ್ಯಪ್ಪನಹಳ್ಳಿ, ಬಾಣಸವಾಡಿ, ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ಮಾರ್ಗವಾಗಿ ಸಂಚರಿಸುತ್ತದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್‌ನಲ್ಲಿ ನಿಲುಗಡೆ ಇರುವುದಿಲ್ಲ.
  • ಕೆಎಸ್‌ಆರ್ ಬೆಂಗಳೂರು – ನಾಂದೇಡ್ ಡೈಲಿ ಎಕ್ಸ್‌ಪ್ರೆಸ್ ಏ. 10ರಂದು ಕೆಎಸ್‌ಆರ್ ಬೆಂಗಳೂರಿನಿಂದ ಹೊರಡುವ ಸಮಯವನ್ನು 85 ನಿಮಿಷಗಳ ಕಾಲ ಮುಂದಕ್ಕೆ ಹಾಕಲಾಗಿದೆ. ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಲೊಟ್ಟೆಗೊಲ್ಲಹಳ್ಳಿ ಮತ್ತು ಯಲಹಂಕ ಮೂಲಕ ಮಾರ್ಗವಾಗಿ ಸಂಚರಿಸುತ್ತದೆ. ಬೆಂಗಳೂರು ಕಂಟೋನ್ಮೆಂಟ್​​ನಲ್ಲಿ ನಿಲುಗಡೆ ಇರುವುದಿಲ್ಲ.
  • ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಮೈಸೂರು ವಿಶೇಷ ಎಕ್ಸ್‌ಪ್ರೆಸ್ ಏ. 10 ರಂದು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಹೊರಟು ಬಾಣಸವಾಡಿ, ಹೆಬ್ಬಾಳ, ಯಶವಂತಪುರ ಮತ್ತು ಕೆಎಸ್​ಆರ್​ ಬೆಂಗಳೂರು ಮಾರ್ಗವಾಗಿ ಸಂಚರಿಸುತ್ತದೆ. ಬೆಂಗಳೂರು ಕಂಟೋನ್ಮೆಂಟ್​​ನಲ್ಲಿ ನಿಲುಗಡೆ ಇರುವುದಿಲ್ಲ.
  • (ರೈಲು ಸಂಖ್ಯೆ 16521) ಬಂಗಾರಪೇಟೆ – ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ಏ. 10 ರಂದು ಬಂಗಾರಪೇಟೆಯಿಂದ ಹೊರಟು ಕೃಷ್ಣರಾಜಪುರಂ, ಬೈಯ್ಯಪ್ಪನಹಳ್ಳಿ, ಬಾಣಸವಾಡಿ, ಹೆಬ್ಬಾಳ, ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್​​ನಲ್ಲಿ ನಿಲುಗಡೆ ಇರುವುದಿಲ್ಲ.

ರಿ ಶೇಡ್ಯೂಲಿಂಗ್​

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಅಕಾಲಿಕ ಮಳೆ : ಸಿಡಿಲು ಬಡಿದು ಐವರು ಸಾವು

ಮೈಲಾಡುತುರೈ–ಮೈಸೂರು ಡೈಲಿ ಎಕ್ಸ್‌ಪ್ರೆಸ್, ಏ. 10ರಂದು ಮೈಲಾಡುತುರೈಯಿಂದ ಹೊರಡುವ ಸಮಯವನ್ನು 90 ನಿಮಿಷಗಳ ಕಾಲ ಮುಂದಕ್ಕೆ ಹಾಕಲಾಗಿದೆ. ಎಂಜಿಆರ್ ಚೆನ್ನೈ ಸೆಂಟ್ರಲ್ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್, ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಏ. 10ರಂದು ಹೊರಡಲಿದ್ದು, ದಕ್ಷಿಣ ರೈಲ್ವೆ ಮಾರ್ಗದಲ್ಲಿ 120 ನಿಮಿಷಗಳ ಕಾಲ ನಿಧಾನವಾಗಲಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X