ಬೆಂಗಳೂರು | ಯುವ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ‘ಮತದಾನದ ಹಬ್ಬ’

Date:

Advertisements
  • ಯುವಸಮೂಹವನ್ನು ಮತಗಟ್ಟೆಯತ್ತ ಸೆಳೆಯಲು ‘ಮತದಾನದ ಹಬ್ಬ’ ಸಹಕಾರಿ
  • ಯುವಸಮೂಹವೇ ವಿಧಾನಸಭಾ ಚುನಾವಣೆಯ ರಾಯಭಾರಿಗಳು

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನಲೆ, ಯುವ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ‘ಮತದಾನದ ಹಬ್ಬ’ (ಓಟ್ ಫೆಸ್ಟ್) ಹೆಸರಿನ ಕಾರ್ಯಕ್ರಮ ನಡೆಸಿವೆ.

ಈ ವೇಳೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, “ಮತದಾನ ಯಶಸ್ವಿಗೊಳಿಸಲು ಯುವಸಮೂಹವೇ ವಿಧಾನಸಭಾ ಚುನಾವಣೆಯ ರಾಯಭಾರಿಗಳು. ಯುವಸಮೂಹವು ತಮ್ಮ ನೆರೆಹೊರೆಯ ಪ್ರದೇಶದ ಜನರನ್ನು ಮತದಾನಕ್ಕೆ ಪ್ರೇರೇಪಿಸುವ ಮೂಲಕ ಈ ಬಾರಿಯ ಚುನಾವಣೆಯನ್ನು ಯಶಸ್ವಿಗೊಳಿಸಬೇಕು” ಎಂದರು.

“ಮೇ 10ರಂದು ತಪ್ಪದೇ ಎಲ್ಲರೂ ತಮ್ಮ ಮತಗಟ್ಟೆಗೆ ಭೇಟಿ ನೀಡಿ ಮತದಾನ ಮಾಡಬೇಕು. ಜನರಲ್ಲಿ ಮತದಾನದ ಬಗ್ಗೆ ಅರಿವು ಹಾಗೂ ಉತ್ಸಾಹ ಮೂಡಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ. ಈ ಚುನಾವಣೆಯಲ್ಲಿ ಮೊದಲನೇ ಬಾರಿ ಮತದಾನ ಮಾಡುವ ಯುವಜನರ ಸಂಖ್ಯೆ 1 ಲಕ್ಷ ಮೀರಿದೆ. 18 ತುಂಬಿರುವ ಯುವಜನರು ಮೊದಲನೇ ಬಾರಿಗೆ ಮತದಾನ ಮಾಡಲು ಮುಂದೆ ಬರಬೇಕಿದೆ” ಎಂದು ಹೇಳಿದರು.

Advertisements

“ಮತದಾನದ ಬಗ್ಗೆ ಅರಿವು ಮೂಡಿಸಲು ಕಾಲೇಜುಗಳಲ್ಲಿ 4,000 ಎಲೆಕ್ಟೋರಲ್ ಲಿಟ್ರೆಸಿ ಕ್ಲಬ್‌ಗಳನ್ನು ಪ್ರಾರಂಭಿಸಲಾಗಿದೆ. ಕಾಲೇಜುಗಳಿಂದ 18 ತುಂಬಿರುವ ಯುವಜನರ ಪಟ್ಟಿಯನ್ನು ಪಡೆದು ಮತದಾನ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಹಿರಿಯ ನಾಗರಿಕರು, ಅಂಗವಿಕಲರಿಗೆ ಮತಗಟ್ಟೆಗಳಲ್ಲಿ ಮತದಾನ ಮಾಡಲು ವಿಶೇಷ ವ್ಯವಸ್ಥೆ ಮಾಡಲಾಗಿದೆ” ಎಂದರು.

“ವಿಧಾನಸಭಾ ಚುನಾವಣೆಯ ರಾಷ್ಟ್ರೀಯ ರಾಯಭಾರಿಯಾಗಿರುವ ರಾಹುಲ್ ದ್ರಾವಿಡ್ ರವರು ಮತದಾನ ಹಕ್ಕನ್ನು ಚಲಾಯಿಸುವಂತೆ ಪ್ರೋತ್ಸಾಹಿಸುತ್ತಿದ್ದಾರೆ. ಮತದಾನದ ಮೂಲ ಕರ್ತವ್ಯದಲ್ಲಿ ಎಲ್ಲರೂ ಭಾಗವಹಿಸಿ ಪ್ರಜಾಪ್ರಭುತ್ವದ ಹಬ್ಬವನ್ನು ಯಶಸ್ವಿಗೊಳಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರಗಕ್ಕೆ ಕರಗಿದ ಬಿಬಿಎಂಪಿ ಅನುದಾನ

ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾತನಾಡಿ, ”ಬೆಂಗಳೂರು ಜಾಗತಿಕ ನಗರವಾಗಿದ್ದು, ಗರಿಷ್ಠ ಪ್ರಮಾಣದಲ್ಲಿ ಮತದಾನವನ್ನು ದಾಖಲಿಸುವ ಗುರಿಯನ್ನು ಸಾಧಿಸಬೇಕಿದೆ. ನಗರದ ಮತದಾನ ಪ್ರಮಾಣ ಕಡಿಮೆಯಿದ್ದು, ಈ ಬಾರಿಯ ಚುನಾವಣೆಯಲ್ಲಿ ಈ ಪ್ರಮಾಣವನ್ನು ಸುಧಾರಿಸಲು ಹಾಗೂ ಯುವಸಮೂಹವನ್ನು ಮತಗಟ್ಟೆಯತ್ತ ಸೆಳೆಯಲು ಇಂದಿನ ಕಾರ್ಯಕ್ರಮ ಪೂರಕವಾಗಿದೆ” ಎಂದರು.

ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಮತದಾನದ ಬಗ್ಗೆ ಉಪಯುಕ್ತ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಮೂಲಕ ‘ಓಟ್ ಫೆಸ್ಟ್’ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ ದಯಾನಂದ, ಅಪರ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್, ವಿಶೇಷ ಚುನಾವಣಾಧಿಕಾರಿ ಎ.ವಿ.ಸೂರ್ಯಸೇನ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X