ದೇವನಹಳ್ಳಿ ರೈತ ಹೋರಾಟ ಹಣಿಯಲು ಷಡ್ಯಂತ್ರ: ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಆರೋಪ

Date:

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ದೇವನಹಳ್ಳಿ ಭೂ ಸ್ವಾಧೀನ ಬೆಂಬಲಿಸಿ ರೈತರು ಸುದ್ದಿಗೋಷ್ಠಿ ನಡೆಸಿದ್ದನ್ನು ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಖಂಡಿಸಿದೆ.

- Advertisement -

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ, “ಇಂದು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಮುಖಂಡರು ಬಹುಪಾಲು ಕಾಂಗ್ರೆಸ್‌ ಸರ್ಕಾರಕ್ಕೆ ಸೇರಿದವರಾಗಿದ್ದಾರೆ. ಅವರೆಲ್ಲ ಭೂವ್ಯವಹಾರಗಳಲ್ಲಿ ತೊಡಗಿಕೊಂಡಿರುವ ಪ್ರಭಾವಿಗಳೂ ಕೂಡ ಆಗಿರುತ್ತಾರೆ” ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ವಾಸ್ತವದಲ್ಲಿ ‘ದೇವನಹಳ್ಳಿ ಚನ್ನರಾಯಪಟ್ಟಣ ರೈತ ಸಮಿತಿ’ ಹೆಸರಿನ ಯಾವುದೇ ಸಮಿತಿ ಇದುವರೆಗೂ ಚಾಲ್ತಿಯಲ್ಲಿ ಇಲ್ಲ. ಈಗಾಗಲೇ ಇಲ್ಲಿನ ಕೆಲ ರೈತರ ಜಮೀನುಗಳಿಗೆ ಕರಾರು ಒಪ್ಪಂದ ಮಾಡಿಕೊಳ್ಳುವ ಮೂಲಕ ಹಣ ಮಾಡಲು ಇವರೆಲ್ಲ ಹೊರಟಿದ್ದಾರೆ” ಎಂದು ದೂರಿದೆ.

“ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಸುಮಾರು 1,200 ದಿನಗಳಿಂದ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ಭೂಸ್ವಾಧೀನವನ್ನು ವಿರೋಧಿಸಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ವಿಚಾರಗಳಿಗೆ ವಿರುದ್ಧವಾಗಿ ಹೇಳಿಕೆಗಳನ್ನು ನೀಡಿರುವುದು ಗಮನಕ್ಕೆ ಬಂದಿದೆ. ಬುಹುಪಾಲು ರೈತರು ಭೂಮಿ ಕೊಡಲು ಸಿದ್ದರಿದ್ದೇವೆ ಎಂದು ಹೇಳಿಕೊಂಡಿರುತ್ತಾರೆ. ಇದು ಸುಳ್ಳು” ಎಂದು ಸಮಿತಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ದೇವನಹಳ್ಳಿ ಭೂ ಸ್ವಾಧೀನ | ಎಕರೆಗೆ ₹3 ಕೋಟಿ ಕೊಟ್ಟರೆ ಜಮೀನು ಕೊಡಲು ಸಿದ್ಧ: ಭೂಸ್ವಾಧೀನ ಬೆಂಬಲ ಸಮಿತಿ

“ಜನಪರ ಸಂಘಟನೆಗಳ ಬೆಂಬಲದೊಂದಿಗೆ ‘ದೇವನಹಳ್ಳಿ ಚಲೋ’ ಯಶಸ್ಸಿನ ನಂತರ ದಿನಾಂಕ 04-07-2025ರಂದು ರೈತ ನಿಯೋಗದೊಂದಿಗೆ ನಡೆಸಿದ ಸಭೆಯಲ್ಲಿ ರೈತಪರವಾದ ನಿರ್ಣಯವನ್ನು ತಗೆದುಕೊಳ್ಳಲು 10 ದಿನಗಳ ಗಡುವು ಕೇಳಿರುವ ಹಿನ್ನೆಲೆಯಲ್ಲಿ ಮತ್ತು ಇಡೀ ದೇವನಹಳ್ಳಿ ರೈತರ ಗೆಲುವನ್ನು ಕಾಯುತ್ತಿರುವ ಸಂದರ್ಭದಲ್ಲಿ ಅವರೆಲ್ಲರನ್ನೂ ದಾರಿತಪ್ಪಿಸಲು ಮತ್ತು ಗೊಂದಲ ಮೂಡಿಸಲು ಮಾಡಿರಬಹುದಾದ ಕುತಂತ್ರವಾಗಿದೆ” ಎಂದು ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಆರೋಪಿಸಿದೆ.

“ಇದರ ಹಿಂದೆ ಬಂಡವಾಳ ಶಾಹಿಗಳ ಹಿತಾಸಕ್ತಿ ಕಾಯಲು ಉಸ್ತುವಾರಿ ಮಂತ್ರಿಗಳು ಮತ್ತು ಕೈಗಾರಿಕಾ ಸಚಿವರ ಕುಮ್ಮಕ್ಕು ಕೂಡ ಇರುವುದನ್ನು ಅಲ್ಲಗಳೆಯುವಂತಿಲ್ಲ. ವಾಸ್ತವದಲ್ಲಿ 75% ಗಿಂತ ಹೆಚ್ಚು ರೈತರು ಪ್ರಾಣ ಬಿಟ್ಟರೂ ಭೂಮಿ ಕೊಡುವುದಿಲ್ಲ ಎಂಬ ನಿಲುವಿನೊಂದಿಗೆ ಈಗಾಗಲೇ ಕೆಐಎಡಿಬಿಗೆ ದಾಖಲೆಗಳ ಸಮೇತ ಆಕ್ಷೇಪಣೆ ಸಲ್ಲಿಸಿದ್ದಾರೆ. ಇಂದಿಗೂ ಅವರೆಲ್ಲರೂ ಒಗ್ಗಟ್ಟಾಗಿಯೇಇದ್ದಾರೆ. ಈ ಹಿನ್ನಲೆಯಲ್ಲಿ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಇಂದು ನಡೆದ ಪತ್ರಿಕಾಗೋಷ್ಠಿ ರೈತ ವಿರೋಧಿಯಾಗಿದೆ” ಎಂದು ಟೀಕಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕರ್ತವ್ಯನಿರತ ಸಂಚಾರ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ; ಬಂಧನ

ಬೆಂಗಳೂರಿನ ಬಾಣಸವಾಡಿ ಸಂಚಾರ ಠಾಣೆಯ ಪೇದೆಯೊಬ್ಬರು ನೋ ಪಾರ್ಕಿಂಗ್‌ನಲ್ಲಿ ಕಾರು ನಿಲ್ಲಿಸಿದಕ್ಕೆ...

ಮತಗಟ್ಟೆಯಲ್ಲೆ ಕುಳಿತು ಕರಪತ್ರ ಹಂಚುತ್ತಿರುವ ಬಿಜೆಪಿ ಕಾರ್ಯಕರ್ತರು: ಎಎಪಿ ಆರೋಪ

ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಎಂ ಕೃಷ್ಣಪ್ಪ...

ಬೆಂಗಳೂರು| ಹೆಬ್ಬಗೋಡಿಯ ಎಬಿನೈಜರ್​ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ

ಹೆಬ್ಬಗೋಡಿ ಪೊಲೀಸ್‌ ಠಾಣೆಗೆ ಶಾಲಾ ಆಡಳಿತ ಮಂಡಳಿ ಮಾಹಿತಿ ಕಳೆದ ಕೆಲ ತಿಂಗಳ‌...

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಬದಲಾವಣೆ ಬಯಸಿರುವ ಕ್ಷೇತ್ರಗಳಲ್ಲಿ ಪಾರಮ್ಯ ಮೆರೆಯುವುದೇ ಕಾಂಗ್ರೆಸ್?

ರಾಜ್ಯದ ಎರಡನೇ ಅತಿ ಶ್ರೀಮಂತ ರಾಜಕಾರಣಿಯನ್ನು ಹೊಂದಿರುವ, ಕ್ಷೇತ್ರ ಬದಲಾಯಿಸಿ ಅದೃಷ್ಟ...