ಕನಕಪುರ ಕಾಂಗ್ರೆಸ್ ಮುಖಂಡ ನಂಜೇಶ್‌ ಹತ್ಯೆ: ಆರೋಪಿ ಶ್ರೀನಿವಾಸ್‌ಗೆ ಪೊಲೀಸ್ ಗುಂಡೇಟು

Date:

ಕನಕಪುರ ತಾಲ್ಲೂಕಿನ ಸಾತನೂರಿನಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದ ಅಚ್ಚಲು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಹೊಂಗಾಣಿದೊಡ್ಡಿಯ ಎನ್. ನಂಜೇಶ್ (46) ಕೊಲೆ ಪ್ರಕರಣದ ಆರೋಪಿ ಶ್ರೀನಿವಾಸ್‌ ಕಾಲಿಗೆ ಕನಕಪುರ ಟೌನ್ ಇನ್‌ಸ್ಪೆಕ್ಟರ್ ಅನಂತರಾಮು ನೇತೃತ್ವದ ತಂಡ ಸೋಮವಾರ ಬೆಳಿಗ್ಗೆ ಗುಂಡು ಹಾರಿಸಿ ಬಂಧಿಸಿದೆ.

- Advertisement -

ಘಟನೆಯಲ್ಲಿ ಠಾಣೆಯ ಕಾನ್‌ಸ್ಟೆಬಲ್ ರಮೇಶ್‌ಗೆ ಗಾಯಗೊಂಡಿದ್ದಾರೆ. ಆರೋಪಿ ಶ್ರೀನಿವಾಸ್‌ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ದಯಾನಂದ ಸಾಗರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ರಮೇಶ್ ಅವರನ್ನು ಸಹ ಅದೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಶನಿವಾರ ರಾತ್ರಿ ಸಾತನೂರಿನ ಆರ್.ಕೆ. ಡಾಬಾ ಎದುರು ನಂಜೇಶ್ ಅವರನ್ನು ನಾಲ್ವರು ಸಹಚರರೊಂದಿಗೆ ಕೊಲೆ ಮಾಡಿದ್ದ ಶ್ರೀನಿವಾಸ್, ತಾಲ್ಲೂಕಿನ ಗಬ್ಬಾಡಿಯಲ್ಲಿ ತಲೆ ಮರೆಸಿಕೊಂಡಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ, ಅನಂತರಾಮು ನೇತೃತ್ವದ ತಂಡ ಆರೋಪಿಯನ್ನು ಬಂಧಿಸಲು ಬೆಳಿಗ್ಗೆ 6 ಗಂಟೆ ಸುಮಾರಿಗೆ ಸ್ಥಳಕ್ಕೆ ತೆರಳಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?

ಈ ವೇಳೆ ಶ್ರೀನಿವಾಸ್ ಕಾನ್‌ಸ್ಟೆಬಲ್ ರಮೇಶ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ. ಎಚ್ಚರಿಕೆ ಲೆಕ್ಕಿಸದೆ ತಪ್ಪಿಸಿಕೊಳ್ಳಲು ಮುಂದಾದಾಗ ಅನಂತರಾಮು ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದರು. ನಂತರ, ಆರೋಪಿಯನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿವಾದಿತ ನಿವೇಶನದ ಕಾರಣಕ್ಕೆ ಹೊಂಗಾಣಿದೊಡ್ಡಿಯಲ್ಲಿ ಮೂರು ದಿನದ ಹಿಂದೆ ಶ್ರೀನಿವಾಸ್ ಮತ್ತು ನಂಜೇಶ್ ನಡುವೆ ಜಗಳವಾಗಿತ್ತು. ಇದೇ ದ್ವೇಷಕ್ಕೆ ಶ್ರೀನಿವಾಸ್ ನಾಲ್ವರು ಯುವಕರೊಂದಿಗೆ ಸೇರಿಕೊಂಡು ನಂಜೇಶ್ ಅವರನ್ನು ಕೊಲೆ ಮಾಡಿದ್ದ. ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೂಮಿ ಉಳಿಸಲು ಯುವಪಡೆ ಏಳಲಿ: ಬಿಡದಿ ಹೋರಾಟಕ್ಕೆ ‘ಜೆನ್ ಝೀ’ಗಳ ಸಾಥ್ ಕೋರಿದ ದೇವನೂರು

ರಾಮನಗರ ಜಿಲ್ಲೆಯ ಬಿಡದಿ ಭಾಗದಲ್ಲಿ ಕೈಗಾರಿಕಾ ಪ್ರದೇಶ ವಿಸ್ತರಣೆಗಾಗಿ ಫಲವತ್ತಾದ ಕೃಷಿ...

ಹೊಸಕೋಟೆ | ಸಬ್ಸಿಡಿ ಲೋನ್ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ, ಮಹಿಳೆ ವಿರುದ್ಧ ದೂರು

ಸಬ್ಸಿಡಿ ಲೋನ್ ಮಾಡಿಸಿಕೊಡುತ್ತೇವೆ ಎಂದು ಆಮಿಷ ತೋರಿಸಿ ಗ್ರಾಹಕರ ಆಧಾರ್, ಫೋಟೋ...

ದೊಡ್ಡಬಳ್ಳಾಪುರ | ನೈತಿಕ ಪೊಲೀಸ್‌ಗಿರಿ: ಉದ್ಯಮಿ ಮೇಲೆ ಹಲ್ಲೆ ನಡೆಸಿದ್ದ 12 ಜನರ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ...