ಬಸವಣ್ಣ, ಕುವೆಂಪು ಅವರ ನಾಡಿಗೆ ಮೋದಿಯ ಆಶೀರ್ವಾದ ಅಗತ್ಯವಿಲ್ಲ: ಪ್ರಿಯಾಂಕಾ ಗಾಂಧಿ

Date:

Advertisements
  • ತಿ.ನರಸೀಪುರ ತಾಲ್ಲೂಕಿನ ಹೆಳವರಹುಂಡಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆ‌
  • ನಂದಿನಿ ಸಹಕಾರಿ ಸಂಸ್ಥೆಯನ್ನು ನಾಶ ಮಾಡಲು ಕೇಂದ್ರ ಪ್ರಯತ್ನಿಸುತ್ತಿದೆ

ರಾಜ್ಯದ ಜನತೆ ಮತ ಹಾಕದಿದ್ದರೆ ನರೇಂದ್ರ ಮೋದಿ ಅವರ ಆಶೀರ್ವಾದ ಕರ್ನಾಟಕಕ್ಕೆ ಸಿಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಅಹಂಕಾರದ ಮಾತುಗಳನ್ನು ಆಡಿದ್ದಾರೆ. ಬಸವಣ್ಣ, ಕುವೆಂಪು ಅವರ ನಾಡಿದು. ಅವರ ಆಶೀರ್ವಾದವಿರುವಾಗ ಮೋದಿ ಅವರ ಆಶೀರ್ವಾದ ಬೇಕಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತಿರುಗೇಟು ನೀಡಿದರು.

ಮೈಸೂರು ಜಿಲ್ಲೆಗೆ ಇದೇ ಮೊದಲ ಬಾರಿ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ಅವರು ತಿ.ನರಸೀಪುರ ತಾಲ್ಲೂಕಿನ ಹೆಳವರಹುಂಡಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

“ಪೊಲೀಸ್, ಇಂಜಿನಿಯರ್ ಸೇರಿದಂತೆ ನೇಮಕಾತಿ ಅಕ್ರಮಗಳು ನಡೆದರೂ ಯಾವುದೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಲಿಲ್ಲ. ಕಾರಣ ಇವರೆಲ್ಲರೂ ಬಿಜೆಪಿ ಜತೆ ಕೈ ಜೋಡಿಸಿದ್ದರು. ಬಿಜೆಪಿ ಶಾಸಕರ ಪುತ್ರನ ಬಳಿ 8 ಕೋಟಿ ಲಂಚದ ಹಣ ಸಿಕ್ಕಿ ಬಿದ್ದ ವಿಚಾರ ನಿಮಗೆಲ್ಲ ಗೊತ್ತಿದೆ. ಆತನ ವಿಚಾರಣೆ ನಡೆಸುವ ಬದಲು, ಶಾಸಕರು ತಲೆ ಮರೆಸಿಕೊಂಡರು. ಈ ಸರ್ಕಾರ ಕೋವಿಡ್ ಪರಿಸ್ಥಿತಿಯನ್ನೂ ಬಿಡಲಿಲ್ಲ, ಮಕ್ಕಳು ತಿನ್ನುವ ಮೊಟ್ಟೆಯನ್ನು ಬಿಡಲಿಲ್ಲ, ಎಲ್ಲದರಲ್ಲೂ ಲೂಟಿ ಮಾಡಿದರು. ಈ ಸರ್ಕಾರ 40% ಕಮಿಷನ್ ಮೂಲಕ 1.50 ಲಕ್ಷ ಕೋಟಿ ಹಣವನ್ನು ಲೂಟಿ ಮಾಡಿದೆ” ಎಂದು ವಾಗ್ದಾಳಿ ನಡೆಸಿದರು.

Advertisements

“ಜನರ ಸಂಕಷ್ಟಗಳಿಗೆ ಸ್ಪಂದಿಸುವ, ಜನರ ದನಿಯಾಗುವ ಸರ್ಕಾರವಿರಬೇಕು. ದೇಶದ ವಿಕಾಸ ಮಾಡುವುದು ಹಾಗೂ ಜನ ಸಂಸ್ಕೃತಿ ಕಾಪಾಡುವುದು ಸರ್ಕಾರದ ಧರ್ಮ. ಆದರೆ, ಅಪ್ರಾಮಾಣಿಕವಾದ ಸರ್ಕಾರ ಆಳುತ್ತಿದೆ. ಅದಕ್ಕೆ ಜನರ ಕಷ್ಟಗಳು ಬೇಕಿಲ್ಲ. ಲೂಟಿ ಹೊಡೆಯುವುದೇ ಅದರ ಗುರಿ” ಎಂದು ಟೀಕಿಸಿದರು.

“ಕರ್ನಾಟಕದ ಧ್ವಜ ನಮ್ಮ ಹೆಮ್ಮೆಯ ಪ್ರತೀಕವಾಗಿದ್ದು, ಸರ್ಕಾರ ಇದನ್ನು ಅಧಿಕೃತಗೊಳಿಸಲಿಲ್ಲ. ಪದೇ ಪದೆ ನಾಯಕರ ಬದಲಾವಣೆ, ಮಂತ್ರಿ ಮಂಡಲ ವಿಸ್ತರಣೆ ಮಾಡಲಿಲ್ಲ. ಸರ್ಕಾರ ಯಂತ್ರಗಳು ದುರ್ಬಲವಾಯಿತು. ಬಹಳ ಬೇಸರದ ಸಂಗತಿ ಎಂದರೆ 40% ಸರ್ಕಾರ ರಾಜ್ಯದ ಜನರನ್ನು ಲೂಟಿ ಮಾಡಿದೆ. ನಾಚಿಕೆ ಬಿಟ್ಟು ನಿರ್ಲಜ್ಜತೆಯಿಂದ ರಾಜ್ಯ ಲೂಟಿ ಮಾಡಿದೆ. ಗುತ್ತಿಗೆದಾರರು ಕಮಿಷನ್ ನೀಡಲಾಗದೇ ಆತ್ಮಹತ್ಯೆ ಮಾಡಿಕೊಂಡರು” ಎಂದರು.

ಈ ಸುದ್ದಿ ಓದಿದ್ದೀರಾ?ಈದಿನ.ಕಾಮ್ ಸಮೀಕ್ಷೆ-5: ಸರ್ಕಾರದ ಯೋಜನೆಗಳ ʼಫಲʼ ಬಿಜೆಪಿಗೆ ಸಿಗದು; ಕಾಂಗ್ರೆಸ್‌ನ ಗ್ಯಾರಂಟಿಗಳಿಗೆ ಇನ್ನೂ ಇಲ್ಲ ಗ್ಯಾರಂಟಿ

“ರಾಜ್ಯ ಸರ್ಕಾರದಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ಖಾಲಿ ಇದ್ದರೂ ನೀವು ನಿರುದ್ಯೋಗಿಗಳಿದ್ದು, ಇದರ ಅರ್ಥವೇನು? ನಿಮ್ಮ ಉದ್ಯೋಗಗಳನ್ನು ನೀಡುತ್ತಿಲ್ಲ. ಸರ್ಕಾರ ಎಷ್ಟು ಭರವಸೆಗಳನ್ನು ನೀಡಿದ್ದರೋ ಅಷ್ಟನ್ನು ಮುರಿದಿದ್ದಾರೆ. ಬಿಜೆಪಿ ನಮ್ಮ ಕರ್ನಾಟಕಕ್ಕೆ ನಮ್ಮ ವಚನ ಎಂಬ ಪ್ರಣಾಳಿಕೆ ಕೊಟ್ಟಿದ್ದಾರೆ. ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಬಿಜೆಪಿ ನಿಮ್ಮ ಹತ್ತಿರ ಇದೆಯಾ ಉತ್ತರ ಎಂದು ಕೇಳುತ್ತಿದೆ” ಎಂದರು.

“ನಂದಿನಿ ಕರ್ನಾಟಕದ ಹೆಮ್ಮೆಯಾಗಿದ್ದು, ಈ ಸಹಕಾರಿ ಸಂಸ್ಥೆಯನ್ನು ನಾಶ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಮೊದಲು 99 ಲಕ್ಷ ಲೀಟರ್ ಹಾಲು ರಾಜ್ಯದಲ್ಲಿ ಉತ್ಪಾದನೆ ಆಗುತ್ತಿತ್ತು. ಆದರೆ ಇಂದು 70 ಲಕ್ಷ ಲೀಟರ್ ಮಾತ್ರ ಹಾಲು ಉತ್ಪಾದನೆಯಾಗುತ್ತಿದೆ. ಉದ್ದೇಶಪೂರ್ವಕವಾಗಿ ಹಾಲಿನ ಉತ್ಪಾದನೆ ಕಡಿಮೆ ಮಾಡಿದ್ದಾರೆ. ಗುಜರಾತಿನ ಸಹಕಾರಿ ಸಂಸ್ಥೆ ಅಮೂಲ್ ಅನ್ನು ರಾಜ್ಯಕ್ಕೆ ಪರಿಚಯಿಸುವ, ವಿಲೀನಗೊಳಿಸುವ ಷಡ್ಯಂತ್ರ ರೂಪಿಸಿದ್ದಾರೆ” ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X