ಬಿಜೆಪಿಯ ದ್ವೇಷ ರಾಜಕೀಯಕ್ಕೆ ರಾಜ್ಯದ ಜನರಿಂದ ತಕ್ಕ ಉತ್ತರ: ಬಿ ಕೆ ಹರಿಪ್ರಸಾದ್

Date:

  • ರಾಜ್ಯದ ಹಿಂದುಳಿದ ವರ್ಗಗಳ ಜನರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ
  • ಧರ್ಮದ ಹೆಸರಿನಲ್ಲಿ ಮೋಸ ಮಾಡುವ ಪ್ರಯತ್ನ ಹೆಚ್ಚು ದಿನ ಮುಂದುವರಿಯಲ್ಲ

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭಾರಿ ಬಹುಮತ ನೀಡುವ ಮೂಲಕ ಜನರು ರಾಹುಲ್‌ ಗಾಂಧಿಯವರ ವಿರುದ್ಧದ ಬಿಜೆಪಿಯ ಷಡ್ಯಂತ್ರ ಮತ್ತು ದ್ವೇಷ ರಾಜಕೀಯಕ್ಕೆ ಸರಿಯಾದ ಉತ್ತರ ನೀಡಿದ್ದಾರೆ ಎಂದು ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್‌ ತಿಳಿಸಿದ್ದಾರೆ.

ಕಾಂಗ್ರೆಸ್‌ ಗೆಲುವು ಕುರಿತು ಪ್ರತಿಕ್ರಿಯಿಸಿರುವ ಅವರು, “ರಾಜ್ಯದ ಮತದಾರರು ಈ ಚುನಾವಣೆಯಲ್ಲಿ ಭ್ರಷ್ಟ, ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿದ್ದಾರೆ” ಎಂದು ಹೇಳಿದ್ದಾರೆ.

“ಕೋಲಾರದಲ್ಲಿ ಲೋಕಸಭಾ ಚುನಾವಣೆ ವೇಳೆ ರಾಹುಲ್‌ ಗಾಂಧಿ ಅವರ ಭಾಷಣವನ್ನು ಮುಂದಿಟ್ಟುಕೊಂಡು ಷಡ್ಯಂತ್ರ ರೂಪಿಸಿ, ಅವರ ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಪ್ರಯತ್ನ ಬಿಜೆಪಿ ನಾಯಕರು ಮಾಡಿದ್ದರು. ಈಗ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಜೆಪಿಯ ನಕಲಿ ಹಿಂದುಳಿದ ವರ್ಗಗಳ ನಾಯಕರು ರಾಜ್ಯದ ಹಿಂದುಳಿದ ವರ್ಗಗಳ ಜನರಿಗೆ ಮೋಸ ಮಾಡಲು ಹೊರಟಿದ್ದರು. ಈ ಚುನಾವಣೆಯಲ್ಲಿ ಕರ್ನಾಟಕದ ಹಿಂದುಳಿದ ವರ್ಗಗಳ ಜನರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಧರ್ಮದ ಹೆಸರಿನಲ್ಲಿ ಮೋಸ ಮಾಡುವ ಪ್ರಯತ್ನ ಹೆಚ್ಚು ದಿನ ಮುಂದುವರಿಯುವುದಿಲ್ಲ ಎಂಬ ಸಂದೇಶವನ್ನು ಈ ಫಲಿತಾಂಶದ ಮೂಲಕ ರವಾನಿಸಿದ್ದಾರೆ” ಎಂದಿದ್ದಾರೆ.

“2019ರಲ್ಲಿ ಆಪರೇಷನ್‌ ಕಮಲ ನಡೆಸಿ ಕಾಂಗ್ರೆಸ್‌, ಜೆಡಿಎಸ್‌ ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದ್ದ ಬಿಜೆಪಿ, ಆರಂಭದ ದಿನಗಳಿಂದಲೂ ಮತೀಯ ಗೂಂಡಾಗಿರಿಗೆ ಪ್ರಚೋದನೆ ನೀಡುತ್ತಾ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿತ್ತು. ಭ್ರಷ್ಟಾಚಾರ, ದುರಾಡಳಿತ ಮೇರೆ ಮೀರಿತ್ತು. 40% ಭ್ರಷ್ಟಾಚಾರದ ಸರ್ಕಾರ ಎಂಬ ಹಣೆಪಟ್ಟಿ ಅಂಟಿಸಿಕೊಂಡಿದ್ದ ಬಿಜೆಪಿ ಸರ್ಕಾರವನ್ನು ಜನರು ಅಧಿಕಾರದಿಂದ ಕಿತ್ತೊಗೆದಿದ್ದಾರೆ” ಎಂದು ಹೇಳಿದ್ದಾರೆ.

ಬಿಜೆಪಿ ಅಧಿಕಾರದಲ್ಲಿ ಮುಂದುವರಿದಿದ್ದರೆ ರಾಜ್ಯವು ಇನ್ನೂ ಹಿನ್ನಡೆ ಅನುಭವಿಸುವ ಅಪಾಯವಿತ್ತು. ಅದನ್ನು ಅರಿತ ಮತದಾರರು ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿದ್ದಾರೆ. ರೋಡ್‌ ಶೋ, ಪ್ರಚಾರದ ಹೆಸರಿನಲ್ಲಿ ಕರ್ನಾಟಕದ ಜನರನ್ನು ಮತ್ತೆ ವಂಚಿಸುವ ಬಿಜೆಪಿ ನಾಯಕರ ಪ್ರಯತ್ನ ವಿಫಲವಾಗಿದೆ. ರಾಜ್ಯದ ಉದ್ದಗಲಕ್ಕೆ ಜನರು ಬದಲಾವಣೆಯ ಪರ ಮತ ಚಲಾಯಿಸಿರುವುದೇ ಇದಕ್ಕೆ ಸಾಕ್ಷಿ” ಎಂದಿದ್ದಾರೆ.

“ರಾಜ್ಯದ ಜನರು ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್‌ ನೀಡಿದ ಗ್ಯಾರಂಟಿಗಳಲ್ಲಿ ನಂಬಿಕೆ ಇರಿಸಿದ್ದು, ಸ್ವಚ್ಛ ಮತ್ತು ಭ್ರಷ್ಟಾಚಾರರಹಿತ ಆಡಳಿತವನ್ನು ನಮ್ಮ ಪಕ್ಷ ನೀಡಲಿದೆ ಎಂಬ ವಿಶ್ವಾಸವನ್ನು ಹೊಂದಿದ್ದಾರೆ. ನಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿರುವುದಕ್ಕಾಗಿ ರಾಜ್ಯದ ಸಮಸ್ತ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ

ಪ್ರಧಾನಿ ಮೋದಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು...

ಮಣಿಪುರ| 47 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸುವಂತೆ ಕಾಂಗ್ರೆಸ್ ಒತ್ತಾಯ

ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು...

ಜನ ಹಸಿವಿನಿಂದ ಬಳಲುತ್ತಿಲ್ಲ ಎಂದಾದರೆ 83ಕೋಟಿ ಜನರಿಗೆ ಆಹಾರ ಧಾನ್ಯ ಪೂರೈಕೆ ಯಾಕಾಗಿ? : ಪರಕಾಲ ಪ್ರಭಾಕರ

"ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಸಿವಿನಿಂದ ಜನರು ಕಂಗಾಲಾಗಿದ್ದಾರೆ. ಆದರೆ ಜನರ...

ನೇಹಾ ಕೊಲೆ ಪ್ರಕರಣ | ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ನೀಚತನ: ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕಿಡಿ

ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ವಿವಿಧ ಮಠಾಧೀಶರು ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ...