ಬಿಜೆಪಿಯ ದ್ವೇಷ ರಾಜಕೀಯಕ್ಕೆ ರಾಜ್ಯದ ಜನರಿಂದ ತಕ್ಕ ಉತ್ತರ: ಬಿ ಕೆ ಹರಿಪ್ರಸಾದ್

Date:

  • ರಾಜ್ಯದ ಹಿಂದುಳಿದ ವರ್ಗಗಳ ಜನರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ
  • ಧರ್ಮದ ಹೆಸರಿನಲ್ಲಿ ಮೋಸ ಮಾಡುವ ಪ್ರಯತ್ನ ಹೆಚ್ಚು ದಿನ ಮುಂದುವರಿಯಲ್ಲ

ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭಾರಿ ಬಹುಮತ ನೀಡುವ ಮೂಲಕ ಜನರು ರಾಹುಲ್‌ ಗಾಂಧಿಯವರ ವಿರುದ್ಧದ ಬಿಜೆಪಿಯ ಷಡ್ಯಂತ್ರ ಮತ್ತು ದ್ವೇಷ ರಾಜಕೀಯಕ್ಕೆ ಸರಿಯಾದ ಉತ್ತರ ನೀಡಿದ್ದಾರೆ ಎಂದು ವಿಧಾನ ಪರಿಷತ್‌ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್‌ ತಿಳಿಸಿದ್ದಾರೆ.

- Advertisement -

ಕಾಂಗ್ರೆಸ್‌ ಗೆಲುವು ಕುರಿತು ಪ್ರತಿಕ್ರಿಯಿಸಿರುವ ಅವರು, “ರಾಜ್ಯದ ಮತದಾರರು ಈ ಚುನಾವಣೆಯಲ್ಲಿ ಭ್ರಷ್ಟ, ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

“ಕೋಲಾರದಲ್ಲಿ ಲೋಕಸಭಾ ಚುನಾವಣೆ ವೇಳೆ ರಾಹುಲ್‌ ಗಾಂಧಿ ಅವರ ಭಾಷಣವನ್ನು ಮುಂದಿಟ್ಟುಕೊಂಡು ಷಡ್ಯಂತ್ರ ರೂಪಿಸಿ, ಅವರ ಸಂಸದ ಸ್ಥಾನದಿಂದ ಅನರ್ಹಗೊಳಿಸುವ ಪ್ರಯತ್ನ ಬಿಜೆಪಿ ನಾಯಕರು ಮಾಡಿದ್ದರು. ಈಗ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ” ಎಂದರು.

“ಬಿಜೆಪಿಯ ನಕಲಿ ಹಿಂದುಳಿದ ವರ್ಗಗಳ ನಾಯಕರು ರಾಜ್ಯದ ಹಿಂದುಳಿದ ವರ್ಗಗಳ ಜನರಿಗೆ ಮೋಸ ಮಾಡಲು ಹೊರಟಿದ್ದರು. ಈ ಚುನಾವಣೆಯಲ್ಲಿ ಕರ್ನಾಟಕದ ಹಿಂದುಳಿದ ವರ್ಗಗಳ ಜನರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಧರ್ಮದ ಹೆಸರಿನಲ್ಲಿ ಮೋಸ ಮಾಡುವ ಪ್ರಯತ್ನ ಹೆಚ್ಚು ದಿನ ಮುಂದುವರಿಯುವುದಿಲ್ಲ ಎಂಬ ಸಂದೇಶವನ್ನು ಈ ಫಲಿತಾಂಶದ ಮೂಲಕ ರವಾನಿಸಿದ್ದಾರೆ” ಎಂದಿದ್ದಾರೆ.

“2019ರಲ್ಲಿ ಆಪರೇಷನ್‌ ಕಮಲ ನಡೆಸಿ ಕಾಂಗ್ರೆಸ್‌, ಜೆಡಿಎಸ್‌ ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದ್ದ ಬಿಜೆಪಿ, ಆರಂಭದ ದಿನಗಳಿಂದಲೂ ಮತೀಯ ಗೂಂಡಾಗಿರಿಗೆ ಪ್ರಚೋದನೆ ನೀಡುತ್ತಾ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿತ್ತು. ಭ್ರಷ್ಟಾಚಾರ, ದುರಾಡಳಿತ ಮೇರೆ ಮೀರಿತ್ತು. 40% ಭ್ರಷ್ಟಾಚಾರದ ಸರ್ಕಾರ ಎಂಬ ಹಣೆಪಟ್ಟಿ ಅಂಟಿಸಿಕೊಂಡಿದ್ದ ಬಿಜೆಪಿ ಸರ್ಕಾರವನ್ನು ಜನರು ಅಧಿಕಾರದಿಂದ ಕಿತ್ತೊಗೆದಿದ್ದಾರೆ” ಎಂದು ಹೇಳಿದ್ದಾರೆ.

ಬಿಜೆಪಿ ಅಧಿಕಾರದಲ್ಲಿ ಮುಂದುವರಿದಿದ್ದರೆ ರಾಜ್ಯವು ಇನ್ನೂ ಹಿನ್ನಡೆ ಅನುಭವಿಸುವ ಅಪಾಯವಿತ್ತು. ಅದನ್ನು ಅರಿತ ಮತದಾರರು ಬಿಜೆಪಿಯನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿದ್ದಾರೆ. ರೋಡ್‌ ಶೋ, ಪ್ರಚಾರದ ಹೆಸರಿನಲ್ಲಿ ಕರ್ನಾಟಕದ ಜನರನ್ನು ಮತ್ತೆ ವಂಚಿಸುವ ಬಿಜೆಪಿ ನಾಯಕರ ಪ್ರಯತ್ನ ವಿಫಲವಾಗಿದೆ. ರಾಜ್ಯದ ಉದ್ದಗಲಕ್ಕೆ ಜನರು ಬದಲಾವಣೆಯ ಪರ ಮತ ಚಲಾಯಿಸಿರುವುದೇ ಇದಕ್ಕೆ ಸಾಕ್ಷಿ” ಎಂದಿದ್ದಾರೆ.

“ರಾಜ್ಯದ ಜನರು ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್‌ ನೀಡಿದ ಗ್ಯಾರಂಟಿಗಳಲ್ಲಿ ನಂಬಿಕೆ ಇರಿಸಿದ್ದು, ಸ್ವಚ್ಛ ಮತ್ತು ಭ್ರಷ್ಟಾಚಾರರಹಿತ ಆಡಳಿತವನ್ನು ನಮ್ಮ ಪಕ್ಷ ನೀಡಲಿದೆ ಎಂಬ ವಿಶ್ವಾಸವನ್ನು ಹೊಂದಿದ್ದಾರೆ. ನಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿರುವುದಕ್ಕಾಗಿ ರಾಜ್ಯದ ಸಮಸ್ತ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ 2027: ಸಣ್ಣ ಪಕ್ಷಗಳೊಂದಿಗೆ ಮೈತ್ರಿಗೆ ಅಖಿಲೇಶ್ ಚಿಂತನೆ; ಒಬಿಸಿ ಮತಗಳ ಕ್ರೋಢೀಕರಣಕ್ಕೆ ತಂತ್ರ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಭರ್ಜರಿ ಸಿದ್ಧತೆ...

ಶೇ. 80ರಷ್ಟು ಸಿದ್ಧವಾದ ಪಂಜಾಬ್ ಕಾಂಗ್ರೆಸ್ ಪ್ರಣಾಳಿಕೆ: ಮಹಿಳಾ ಕಲ್ಯಾಣ ಯೋಜನೆಗಳಿಗೆ ಒತ್ತು

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು...

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎಲ್ಲಾ 14 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಪಡಿಸಿದ ದೆಹಲಿ ನ್ಯಾಯಾಲಯ

ದೇಶಾದ್ಯಂತ ವೈದ್ಯಕೀಯ ಆಕಾಂಕ್ಷಿಗಳಲ್ಲಿ ಭಾರಿ ಆತಂಕ ಮೂಡಿಸಿದ್ದ 2026ರ ನೀಟ್-ಯುಜಿ ಪ್ರಶ್ನೆಪತ್ರಿಕೆ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’ ಯಾರು?

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು'...