ಬೆಳಗಾವಿ ಜಿಲ್ಲೆಯಲ್ಲಿ ಬಾಲಕಿಯನ್ನು ಪುಸಲಾಯಿಸಿ, ನಗರದ ಹೊರವಲಯದ ಪ್ರದೇಶಕ್ಕೆ ಕರೆದೊಯ್ದ ಮೂವರು ಬಾಲಕರು, ಪಾರ್ಟಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆ ಮೇ 6ರಂದು ನಡೆದಿದ್ದು, ಸೋಮವಾರ ಬಾಲಕಿಯ ಪಾಲಕರು ಠಾಣೆಗೆ ದೂರು ನೀಡಿದ್ದಾರೆ.
ಈ ಮೂವರು ಬಾಲಕರ ಪೈಕಿ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು, ಬಾಲಮಂದಿರಕ್ಕೆ ಸೇರಿಸಿದ್ದಾರೆ. ಇನ್ನೊಬ್ಬನಿಗಾಗಿ ಹುಡುಕಾಟ ನಡೆದಿದೆ.
ವಿದ್ಯಾರ್ಥಿನಿ ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಗರು ಕೆಲಸ ಮಾಡಿಕೊಂಡಿದ್ದರು. ಪರಿಚಯ ಮಾಡಿಕೊಂಡು, ಪ್ರೇಮ ಬೆಳೆಸಿಕೊಂಡಿದ್ದರು. ಮೇ 6ರಂದು ನಗರ ಹೊರವಲಯದ ಪ್ರದೇಶಕ್ಕೆ ಹೋಗಿ ಎಲ್ಲರೂ ಪಾರ್ಟಿ ಮಾಡಿದ್ದರು. ನಂತರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಮೇ 12ಕ್ಕೆ ಬಾಲಕಿಯ ಪಾಲಕರಿಗೆ ಅನುಮಾನ ಬಂದಿದ್ದರಿಂದ ದೂರು ದಾಖಲಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.