ಬೆಳಗಾವಿ | ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ; ಕಾರ್ಯಕರ್ತರು ಪೊಲೀಸರ ವಶಕ್ಕೆ

Date:

ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಕಾರ್ಯಕರ್ತರನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ಕೊಗನೊಳ್ಳಿ ಹೊರವಲಯದಲ್ಲಿ ಶಿವಸೇನೆ ಕಾರ್ಯಕರ್ತರು ಕರ್ನಾಟಕದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಸೇರಬೇಕೆಂದು ಘೋಷಣೆ ಕೂಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಶಿವಸೇನೆ ಉದ್ಧವ್ ಠಾಕ್ರೆ ಬಣದ ಕೊಲ್ಲಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಮಹಾರಾಷ್ಟ್ರದ ಗಡಿಯಲ್ಲೇ, ಪೊಲೀಸರು ಪಡೆದಿದ್ದಾರೆ. ವಶಕ್ಕೆ ಪಡೆದು ಕಾಗಲ್‌ಗೆ ಕರೆದೊಯ್ದಿದ್ದಾರೆ.

ಉದ್ಧವ್ ಠಾಕ್ರೆ ಶಿವಸೇನೆ ಬಣ ಇಂದು (ನ.01) ಬೆಳಗಾವಿ ಚಲೋಗೆ ಕರೆ ನೀಡಿತ್ತು. ಮಹಾರಾಷ್ಟ್ರದ ನಾಯಕರಿಗೆ ಬೆಳಗಾವಿ ಜಿಲ್ಲೆಗೆ ಪ್ರವೇಶವಿಲ್ಲವೆಂದು ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಅದಾಗ್ಯೂ, ಬೆಳಗಾವಿಯ ಮರಾಠಾ ಭವನ ಬಳಿ ಎಂಇಎಸ್ ಕಾರ್ಯಕರ್ತರು ಕರಾಳ ದಿನ ಆಚರಣೆಗೆ ಸಿದ್ಧತೆ ನಡೆಸಿದ್ದರು.

ಆ ಕಾರ್ಯಕ್ರಮಕ್ಕೆ ಭಾಗಿಯಾಗಲು ಮಹಾರಾಷ್ಟ್ರದ ಶಿವಸೇನೆ ಮತ್ತು ಎಂಇಎಸ್‌ ಕಾರ್ಯಕರ್ತರು ಬೆಳಗಾವಿ ಪ್ರವೇಶಿಸಲು ಮುಂದಾಗಿದ್ದರು. ಅವರೆಲ್ಲರನ್ನೂ ಕೊಗನೊಳ್ಳಿ ಟೋಲ್‌ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...