ಬಳ್ಳಾರಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನ; ಸರ್ವಾಧ್ಯಕ್ಷರಾಗಿ ಸಿ.ಜಿ.ಹಂಪಣ್ಣ ಆಯ್ಕೆ

Date:

ಕನ್ನಡ ಸಾಹಿತ್ಯ ಪರಿಷತ್ತಿನ ಅಖಂಡ ಬಳ್ಳಾರಿ ಜಿಲ್ಲಾ ಘಟಕದ ವತಿಯಿಂದ ನಗರದ ಕನ್ನಡ ಭವನದಲ್ಲಿ ಅಕ್ಟೋಬರ್ 18ರಂದು ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಬಳ್ಳಾರಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ, ಸಾಹಿತಿ ಚೇಳ್ಳಗುರ್ಕಿಯ ಸಿ.ಜಿ. ಹಂಪಣ್ಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

- Advertisement -

ಸಭೆಯಲ್ಲಿ ಹಿರಿಯ ಪತ್ರಕರ್ತ, ಸಾಹಿತಿ, ಚಲನಚಿತ್ರ ಕಥೆಗಾರ, ನಿರ್ಮಾಪಕ ಹಾಗೂ ನಿರ್ದೇಶಕ ಸಿ.ಜಿ. ಹಂಪಣ್ಣ, ಹರಪನಹಳ್ಳಿಯ ಸಾಹಿತಿ ರಾಮನಮಲಿ, ಪತ್ರಕರ್ತ ಹಾಗೂ ಕವಿ ಪಿ.ಆರ್. ವೆಂಕಟೇಶ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಚೋರನೂರು ಟಿ. ಕೊಟ್ರಪ್ಪ ಅವರ ಹೆಸರುಗಳನ್ನು ಸದಸ್ಯರು ಪ್ರಸ್ತಾಪಿಸಿದರು. ಅಂತಿಮವಾಗಿ ಸಿ.ಜಿ.ಹಂಪಣ್ಣ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಸಮ್ಮೇಳನವನ್ನು ನವೆಂಬರ್ 14 ಮತ್ತು 15ರಂದು ಎರಡು ದಿನಗಳ ಕಾಲ ಬಳ್ಳಾರಿಯಲ್ಲಿ ನಡೆಸಲು ಸಭೆ ತೀರ್ಮಾನಿಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ.ಕೆ. ಶಿವಲಿಂಗಪ್ಪ ಹಂದಿಹಾಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿ.ಜಿ.ಹಂಪಣ್ಣ ಪರಿಚಯ

ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ಬಳ್ಳಾರಿ ಜಿಲ್ಲೆಯ ಚೇಳ್ಳಗುರ್ಕಿಯಲ್ಲಿ 1938ರ ಆಗಸ್ಟ್ 27ರಂದು ಜನಿಸಿದ ಸಿ.ಜಿ. ಹಂಪಣ್ಣ ಅವರು 1958ರಲ್ಲಿ ಮದ್ರಾಸ್ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಸುಮಾರು 66 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಅವರು ಸಾಹಿತ್ಯ ರಚನೆ, ಚಲನಚಿತ್ರ ನಿರ್ಮಾಣ, ವಿತರಣೆ ಹಾಗೂ ಪ್ರದರ್ಶನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ.

ಬೆಂಗಳೂರಿನ ‘ಮಲೆನಾಡು’ ಮಾಸಪತ್ರಿಕೆಯ ಸಹಸಂಪಾದಕರಾಗಿ, ‘ಸಂಯುಕ್ತ ಕರ್ನಾಟಕ’ದ ಉಪಸಂಪಾದಕರಾಗಿ ಹಾಗೂ ‘ಈ ನಮ್ಮ ಕನ್ನಡನಾಡು’ ಪತ್ರಿಕೆಯ ಹಿರಿಯ ಉಪಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಅನೇಕ ಯುವ ಪತ್ರಕರ್ತರಿಗೆ ಮಾರ್ಗದರ್ಶಕರಾಗಿಯೂ ಗುರುಗಳಾಗಿಯೂ ಕಾರ್ಯನಿರ್ವಹಿಸಿದ್ದಾರೆ. ‘ಬಳ್ಳಾರಿ ಜಿಲ್ಲಾ ಸಮಾಚಾರ’, ‘ಚಿತ್ರಸುಧಾ’, ‘ವಿಜಯನಗರ ಎಕ್ಸ್‌ಪ್ರೆಸ್’ ಮತ್ತು ‘ಕನ್ನಡ ಸಿಂಧೂರ’ ಪತ್ರಿಕೆಗಳನ್ನು ಸ್ವತಂತ್ರವಾಗಿ ನಡೆಸಿದ್ದಾರೆ.

‘ಕನ್ನಡ ನಾಡು ಸೊಬಗಿನ ಬೀಡು’, ‘ಪ್ರೇಮಪಾಶ’, ‘ದಾರಿದೀಪ’, ‘ವಿಧಿವಿಲಾಸ’, ‘ನಂದನವನ’, ‘ಕಾಣಿಕೆ’, ‘ಒಡೆಯಿತು ಒಲವಿನ ಕನ್ನಡಿ’ ಹಾಗೂ ‘ದೈವ ಸಂಕಲ್ಪ’ ಸೇರಿದಂತೆ ಹತ್ತೊಂಬತ್ತಕ್ಕೂ ಹೆಚ್ಚು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. 2011ರಲ್ಲಿ ‘ನೆನಪಿನಂಗಳ’ (ಆತ್ಮಕಥೆ–1) ಮತ್ತು ‘ಸವಿ ನೆನಪು’ (ಆತ್ಮಕಥೆ–2) ಎಂಬ ಆತ್ಮಕಥನ ಸೇರಿದಂತೆ 19ಕ್ಕೂ ಅಧಿಕ ಕೃತಿಗಳನ್ನು ಪ್ರಕಟಿಸಿದ್ದಾರೆ. ಅವರ ಸಾಧನೆ ಹಾಗೂ ಸೇವೆಯನ್ನು ಗುರುತಿಸಿ ‘ಉಡುಗೊರೆ’, ‘ಶ್ರಮಜೀವಿ’, ‘ಸವಿಜೇನು’ ಮತ್ತು ‘ಗಡಿನಾಡ ಕನ್ನಡಿಗ’ ಸೇರಿದಂತೆ ಅಭಿನಂದನಾ ಗ್ರಂಥಗಳನ್ನು ಸಮರ್ಪಿಸಲಾಗಿದೆ.

ಇದನ್ನೂ ಓದಿ : ಅವಳ ಕಣ್ಣೋಟ | ‘ಪ್ರೇಮದ ಊರಲಿ’ ಶೀಲದ ಟೆಸ್ಟ್!

ಕರ್ನಾಟಕ ಸರ್ಕಾರದ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂಡೂರು ವಿರಕ್ತ ಮಠದ ‘ಬಸವ ಬೆಳಗು’ ಪ್ರಶಸ್ತಿ, ಇಳಕಲ್ ಮಠದ ‘ಮಹಾಂತ ಶ್ರೀ’ ಪ್ರಶಸ್ತಿ, ‘ಬಸವಸಿರಿ’ ಪ್ರಶಸ್ತಿ, ಬೆಂಗಳೂರು ಕರ್ನಾಟಕ ಪತ್ರಕರ್ತರ ಸಂಘದ ‘ಹೂಗಾರ ಪ್ರಶಸ್ತಿ’, ‘ಶ್ರೀಕೃಷ್ಣದೇವರಾಯ ಪ್ರಶಸ್ತಿ’, ಹೊಸಪೇಟೆಯ ಸಂಗೀತ ಭಾರತಿ ಸಂಸ್ಥೆಯ ‘ಶಂಕರ-ಭಾರ್ಗವ ಪ್ರಶಸ್ತಿ’ ಹಾಗೂ ‘ಡಾ. ಡಿ.ವಿ. ಗುಂಡಪ್ಪ ಪ್ರಶಸ್ತಿ’ ಸೇರಿದಂತೆ ಹಲವು ಗೌರವಗಳಿಗೆ ಸಿ.ಜಿ. ಹಂಪಣ್ಣ ಅವರು ಪಾತ್ರರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...

CJP ನಾಯಕರ ನ್ಯಾಯಾಂಗ ಬಂಧನ ವಿಸ್ತರಣೆಗೆ ಪೊಲೀಸರ ಮನವಿ; ಮ್ಯಾಜಿಸ್ಟ್ರೇಟ್ ಮುಂದೆ ಹಾಜರು

CJP ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಸೋಮವಾರ...

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ: ಮೊದಲ ದಿನವೇ 4 ಚಿನ್ನ ಸೇರಿ 11 ಪದಕಗಳ ಸಾಧನೆ!

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತ ಭರ್ಜರಿ...