ಬಳ್ಳಾರಿ | ಮದುವೆಯಾದ ದಿನವೇ ನವ ವಿವಾಹಿತನ ಬರ್ಬರ ಹತ್ಯೆ

Date:

ಮದುವೆಯಾದ ದಿನವೇ ನವವಿವಾಹಿತನೊಬ್ಬ ಹತ್ಯೆಯಾದ ಘಟನೆ ಬಳ್ಳಾರಿ ನಗರದ 29ನೇ ವಾರ್ಡ್‌ನ ಬಟ್ಟಿ ಏರಿಯಾದ ಸಮತಾ ನಗರದಲ್ಲಿ ನಡೆದಿದೆ.

- Advertisement -

ಹತ್ಯೆಯಾದ ಯುವಕನನ್ನು ನಬಿ ರಸೂಲ್ ಎಂದು ಗುರುತಿಸಲಾಗಿದೆ. ಅವರು ಬೋಟಿ ಮಾರ್ಕೆಟ್‌ನಲ್ಲಿ ಕೆಲಸ ಮಾಡುವುದರ ಜೊತೆಗೆ ಗಾರೆ ಕೆಲಸವನ್ನೂ ಮಾಡುತ್ತಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಸುಮಾರು 15 ದಿನಗಳ ಹಿಂದಷ್ಟೇ ವಿಚ್ಛೇದನ ಪಡೆದಿದ್ದ ಯುವತಿಯನ್ನು ನಬಿ ರಸೂಲ್ ಪ್ರಾಣದಂತೆ ಪ್ರೀತಿಸುತ್ತಿದ್ದರು. ಇಬ್ಬರೂ ಜೊತೆಯಾಗಿ ಮನೆಗೆ ಮರಳಿದ ಬಳಿಕ, ಇವರ ಪ್ರೀತಿಯನ್ನು ಒಪ್ಪಿದ ಎರಡೂ ಕುಟುಂಬಸ್ಥರು ಗುರುವಾರವಷ್ಟೇ ಅತ್ಯಂತ ಸಡಗರದಿಂದ ಮದುವೆ ಹಾಗೂ ಆರತಕ್ಷತೆ ಕಾರ್ಯಕ್ರಮವನ್ನು ನೆರವೇರಿಸಿದ್ದರು.

ಆರತಕ್ಷತೆಯ ಸಡಗರ ಮುಗಿಸಿ ರಾತ್ರಿ ಸುಮಾರು 11:30ರ ವೇಳೆಗೆ ನಬಿ ರಸೂಲ್ ಮನೆಯಲ್ಲಿದ್ದಾಗ ಆತನ ಮೊಬೈಲ್‌ಗೆ ಸ್ನೇಹಿತನೊಬ್ಬನಿಂದ ಕರೆ ಬಂದಿದೆ. ಸ್ನೇಹಿತ ಕರೆಯುತ್ತಿದ್ದಾನೆ, ಮಾತನಾಡಿಕೊಂಡು ಬರುತ್ತೇನೆ ಎಂದು ಪತ್ನಿಗೆ ಹೇಳಿ ಮನೆಯಿಂದ ಹೊರಟ ನಬಿ, ಮರಳಿ ಮನೆಗೆ ಬರಲಿಲ್ಲ. ಪತಿಗಾಗಿ ನವವಧು ಹಾಗೂ ಕುಟುಂಬಸ್ಥರು ಆತಂಕದಿಂದ ಕಾಯುತ್ತಿದ್ದಾಗಲೇ ತಡರಾತ್ರಿ 2 ಗಂಟೆಯ ಸುಮಾರಿಗೆ ನಬಿ ಕೊಲೆಯಾದ ಸುದ್ದಿ ಬಂದಿದೆ.

ಮನೆಯಿಂದ ಕೇವಲ 700 ಮೀಟರ್ ದೂರದಲ್ಲಿ ನಬಿ ರಸೂಲ್ ರಕ್ತದ ಮಡುವಿನಲ್ಲಿ ಕೊಲೆಯಾಗಿ ಬಿದ್ದಿರುವುದು ಪತ್ತೆಯಾಗಿದೆ. ಇಡೀ ದಿನ ಸಂತೋಷದಿಂದ ಕಂಗೊಳಿಸುತ್ತಿದ್ದ ಮನೆಯಲ್ಲಿ ಮದುಮಗನ ಕಳೇಬರಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಮದುವೆಗೆ ಹುಡುಗಿಯ ಮನೆಯವರ ವಿರೋಧವಿತ್ತು. ನಬಿ ರಸೂಲ್ ಎರಡೂ ಮನೆಯವರನ್ನು ಒಪ್ಪಿಸಿ ಮದುವೆ ಮಾಡಿಕೊಂಡಿದ್ದರು. ಆದರೂ ಯುವತಿ ಮನೆಯವರ ಅಸಮಾಧಾನ ಹೊಗೆಯಾಡುತ್ತಲೇ ಇತ್ತು. ಇದರಿಂದಾಗಿ ನಬಿ ರಸೂಲ್ ಕೊಲೆ ನಡೆದಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ಆಸ್ತಿ ದಾಖಲೆಗಳು ಭಾರತೀಯ ಪೌರತ್ವಕ್ಕೆ ಪುರಾವೆಯಲ್ಲ: ಕೋಲ್ಕತ್ತಾ ಹೈಕೋರ್ಟ್

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೆಕರ್ ಹಾಗೂ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಘಟನಾ ಸ್ಥಳದ ಮಹಜರು ನಡೆಸಿ ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ತನಿಖೆ ಕೈಗೊಂಡಿದ್ದಾರೆ. ಸದ್ಯ ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ ಬದುಕು!

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು...

ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...