ಬಳ್ಳಾರಿ | ಹೊಸ ಮದ್ಯದಂಗಡಿ ಪರವಾನಿಗೆ ನೀಡುವ ನಿರ್ಧಾರ ಹಿಂಪಡೆಯಲು ಆಗ್ರಹ

Date:

Advertisements
  • ಹೊಸದಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಅಬಕಾರಿ ಇಲಾಖೆ ನಿರ್ಧಾರ ಸಮಾಜಘಾತುಕ.
  • ಮದ್ಯ ನಿಷೇಧಕ್ಕೆ ಮಹಿಳಾ ಸಮುದಾಯ ಒತ್ತಾಯಿಸಿದರೆ ಸರ್ಕಾರ ಹೊಸ ಪರವಾನಿಗೆ ನೀಡಲು ಮುಂದಾಗಿದೆ.

ರಾಜ್ಯದಲ್ಲಿ 1000ಕ್ಕೂ ಹೆಚ್ಚು ಹೊಸ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಸರ್ಕಾರದ ಪ್ರಸ್ತಾವನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಎಐಎಂಎಸ್ಎಸ್, ಎಐಡಿವೈಓ ಹಾಗೂ ಎಐಕೆಕೆಎಂಎಸ್ ಕಾರ್ಯಕರ್ತರು ಜಂಟಿಯಾಗಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಐಎಂಎಸ್ಎಸ್ ಜಿಲ್ಲಾಧ್ಯಕ್ಷೆ ಈಶ್ವರಿ ಮಾತನಾಡಿ, “ರಾಜ್ಯದಲ್ಲಿ ಹೊಸದಾಗಿ ಸಾವಿರಕ್ಕೂ ಹೆಚ್ಚು ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಅಬಕಾರಿ ಇಲಾಖೆಯ ನಿರ್ಧಾರ ಸಮಾಜಘಾತುಕವಾಗಿದೆ ಈಗಾಗಲೇ ಮದ್ಯಪಾನ ದುಶ್ಚಟದಿಂದಾಗಿ ಲಕ್ಷಾಂತರ ಕುಟುಂಬಗಳು ಬೀದಿಪಾಲಾಗಿವೆ. ಒಂದೆಡೆ ಬೆಲೆ ಏರಿಕೆ, ಬಡತನ, ನಿರುದ್ಯೋಗದಿಂದ ಜೀವನ ತತ್ತರಿಸುತ್ತಿದ್ದರೆ ಇನ್ನೊಂದೆಡೆ ನೈತಿಕ ಮೌಲ್ಯ ಕುಸಿಯುತ್ತಿದೆ. ಹೆಣ್ಣು ಮಕ್ಕಳ ಮೇಲಿನ ಅಪರಾಧಗಳ ಹೆಚ್ಚಳಕ್ಕೆ ಮದ್ಯಪಾನವೂ ಒಂದು ಮುಖ್ಯ ಕಾರಣ ಎಂದು ವರದಿಗಳು ಸಾಬೀತುಪಡಿಸುತ್ತಲೇ ಇವೆ. ಆದರೂ ಸರ್ಕಾರ ಇಂಥ ನಿರ್ಧಾರ ಕೈಗೆತ್ತಿಗೊಂಡಿರುವುದು ಸಮಂಜಸವಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

“ಕೌಟುಂಬಿಕ ದೌರ್ಜನ್ಯಗಳು ಕ್ರೂರ ರೂಪ ಪಡೆದುಕೊಳ್ಳುತ್ತಿವೆ. ಹೆಣ್ಣು ಮಕ್ಕಳು ಬೆವರು ಸುರಿಸಿ ದುಡಿದ ಹಣವನ್ನು ಗಂಡಂದಿರು ಕುಡಿತಕ್ಕಾಗಿ ಹೊಡೆದು ಬಡಿದು ಕಸಿದುಕೊಳ್ಳುವುದು ಈಗಲೂ ಮನೆ ಮನೆಯ ಕಥೆಯಾಗಿದೆ. ಇದರಿಂದಾಗಿ ಎಷ್ಟೋ ಹೆಣ್ಣುಮಕ್ಕಳು ಪುಟ್ಟ ಮಕ್ಕಳನ್ನು ಒಡಲಲ್ಲಿ ಇಟ್ಟುಕೊಂಡು ಹೊಟ್ಟೆಗೆ ಹಿಟ್ಟಿಲ್ಲದೆ ಉಪವಾಸ ಮಲಗುವಂತಾಗುತ್ತಿದೆ. ಮಹಿಳೆಯರ ಸಬಲೀಕರಣ ಮಾಡುತ್ತೇವೆ ಎಂದು ಘಂಟಾಘೋಷವಾಗಿ ಹೇಳುತ್ತಿರುವ ರಾಜ್ಯ ಸರ್ಕಾರ ಈಗ ಅದೇ ಮಹಿಳೆಯರ ಮೇಲೆ ಕ್ರೂರ ಅಪರಾಧಗಳಿಗೆ ಕಾರಣವಾಗುತ್ತಿದೆ. ಸಂಪೂರ್ಣ ಮದ್ಯ ನಿಷೇಧಕ್ಕಾಗಿ ಮಹಿಳಾ ಸಮುದಾಯ ಕೇಳಿಕೊಳ್ಳುತ್ತಿದ್ದರೆ ಸರ್ಕಾರ ಮಾತ್ರ ಇನ್ನೂ ಹೆಚ್ಚು ಪರವಾನಗಿ ಕೊಡುತ್ತಿದೆ. ಇದು ಯಾವುದೇ ಸರ್ಕಾರಗಳ ನೈಜ ಮುಖವಾಡ ಎಂದು ಮಹಿಳಾ ಸಮುದಾಯ ಅರ್ಥ ಮಾಡಿಕೊಂಡು ಒಕ್ಕೊರಲಿನಿಂದ ಇದರ ವಿರುದ್ಧ ಬೀದಿಗಿಳಿಯಬೇಕು” ಎಂದು ಕರೆ ನೀಡಿದರು

ಎಐಡಿವೈಓ ನ ಜಿಲ್ಲಾಧ್ಯಕ್ಷ ಎ.ಪಂಪಾಪತಿ, ಎಐಕೆಕೆಎಂಎಸ್ ನ ಜಿಲ್ಲಾಧ್ಯಕ್ಷ ಗೋವಿಂದ ಹಾಗೂ ಎಐಎಂಎಸ್ಎಸ್ ನ ಜಿಲ್ಲಾ ಕಾರ್ಯದರ್ಶಿ ವಿಜಯಲಕ್ಷ್ಮಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ವಿಶೇಷ | ಪಠ್ಯಪುಸ್ತಕ ಪರಿಷ್ಕರಣೆಯ ನಡೆ ಗೊಂದಲದ ಗೂಡು- ತಜ್ಞರ ಆಕ್ರೋಶ

ಪ್ರತಿಭಟನೆಯಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಜಗದೀಶ್,ರಾಜ ,ವಿದ್ಯಾ, ಗಿರಿಜಾ,ನಿಂಗರಾಜ್ ಸೇರಿದಂತೆ ಯುವ ಜನರು, ರೈತರು, ಹಲವಾರು ಬಡಾವಣೆಯ ಹೆಣ್ಣು ಮಕ್ಕಳು ಪ್ರತಿಭಟನೆಗೆ ಧ್ವನಿಗೂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X