ಬೆಂಗಳೂರು | ಫ್ರೀಡಂ ಪಾರ್ಕ್ ಸಮಗ್ರ ಅಭಿವೃದ್ಧಿಗೆ ಬಿಬಿಎಂಪಿ ಆಯುಕ್ತ ರಾಜೇಂದ್ರ ಚೋಳನ್ ಸೂಚನೆ

Date:

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್) ವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅಧಿಕಾರಿಗಳಿಗೆ ನಿರ್ದೇಶಿಸಿದರು.

- Advertisement -

ಇಂದು ಬೆಳಿಗ್ಗೆ ನಗರದ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್)ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪಾರ್ಕ್‌ನಲ್ಲಿ ವಿದ್ಯುತ್ ಸಂಪರ್ಕ, ಕುಡಿಯುವ ನೀರಿನ ವ್ಯವಸ್ಥೆ, ವಾಯುವಿಹಾರಿಗಳ ನಡಿಗೆಗೆ ಸುಗಮ ಮಾರ್ಗ, ಸೂಕ್ತ ಭದ್ರತಾ ವ್ಯವಸ್ಥೆ ಸೇರಿದಂತೆ ಸಮಗ್ರ ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ನಗರದ ಹೃದಯ ಭಾಗದಲ್ಲಿರುವ ಸ್ವಾತಂತ್ರ್ಯ ಉದ್ಯಾನವನದಲ್ಲಿ ವಾಯುವಿಹಾರಕ್ಕೆ ಆಗಮಿಸುವ ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳ ನಡಿಗೆಗೆ ಸುಗಮವಾಗುವಂತೆ ಗುಣಮಟ್ಟದ ವಾಕಿಂಗ್‌ ಪಾತ್‌ ನಿರ್ಮಿಸಬೇಕು. ಮಕ್ಕಳ ಆಟೋಟಕ್ಕಾಗಿ ಆಟದ ಉಪಕರಣಗಳೊಂದಿಗೆ ಕಿಡ್ಸ್ ಪಾರ್ಕ್ ನಿರ್ಮಿಸಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು ಮತ್ತು ಉದ್ಯಾನವನದಲ್ಲಿ ಸ್ವಚ್ಛತೆ ಕಾಪಾಡಬೇಕು” ಎಂದು ತಿಳಿಸಿದರು.

ಹೆಚ್ಚು ಸಸಿಗಳನ್ನು ನೆಟ್ಟು ಅವುಗಳ ಸರಿಯಾದ ಪೋಷಣೆಗೆ ಕ್ರಮ ವಹಿಸಲು ಹಾಗೂ ಒಣಗಿದ ಹಾಗೂ ಅಪಾಯಕಾರಿ ಮರ ಮತ್ತು ರೆಂಬೆ ಕೊಂಬೆಗಳನ್ನು ತೆರವುಗೊಳಿಸಲು ಸೂಚಿಸಿದ ಅವರು, ಬಹುಮಹಡಿ ವಾಹನ ನಿಲುಗಡೆ ಕಟ್ಟಡದ ಮೇಲ್ಭಾಗದ ಸ್ಥಳವನ್ನು ವಾಣಿಜ್ಯ ಉದ್ದೇಶ ಬಳಸಿಕೊಳ್ಳಲು ಕ್ರಮ ವಹಿಸುವಂತೆ ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು | ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಸ್ಥಳ ಪರಿಶೀಲನೆ ಸಂದರ್ಭದಲ್ಲಿ ನಿರ್ಮಾಣ ಹಂತದಲ್ಲಿರುವ ಕೆಲವು ಕಟ್ಟಡಗಳ ತ್ಯಾಜ್ಯ, ಕಬ್ಬಿಣ, ಜಲ್ಲಿಕಲ್ಲು, ಮರಳು ಇತರೆ ವಸ್ತುಗಳನ್ನು ರಸ್ತೆಯಲ್ಲಿ ಹಾಕಿದ್ದು ಇದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿರುವ ಕಾರಣ ಅದನ್ನು ಕೂಡಲೇ ತೆರವುಗೊಳಿಸಲು ಹಾಗೂ ಕಟ್ಟಡ ಮಾಲೀಕರಿಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾತಂತ್ರ್ಯ ಉದ್ಯಾನವನದ ಅಕ್ಕ ಪಕ್ಕದಲ್ಲಿನ ರಸ್ತೆಗಳನ್ನು ಪರಿಶೀಲಿಸಿ, ರಸ್ತೆಬದಿಯಲ್ಲಿ ಎಳನೀರು ಮಾರಾಟ ಮಾಡುತ್ತಿರುವವರ ತೆಂಗಿನ ಚಿಪ್ಪುಗಳನ್ನು ಅಲ್ಲಿಯೇ ಬಿಡದೆ, ವಿಲೇವಾರಿ ಮಾಡಲು ಕ್ರಮ ವಹಿಸಲು ಸೂಚಿಸಿದರು. ಜೊತೆಗೆ ಪಾದಚಾರಿ ಮಾರ್ಗಗಳ ಸರಿಯಾದ ನಿರ್ವಹಣೆಗಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಅಭಿವೃದ್ಧಿ ಅಪರ ಆಯುಕ್ತ ದಲ್ಜಿತ್ ಕುಮಾರ್, ಜಂಟಿ ಆಯುಕ್ತ ರಂಗನಾಥ್ ಮತ್ತು ಹೇಮಂತ್ ಶರಣ್, ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್ ಮತ್ತು ಸುಗುಣಾ, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇತರ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಣರಣ ಬಿಸಿಲಿಗೆ ಬೆಂಗಳೂರು ತತ್ತರ; 35.2 ಡಿಗ್ರಿ ಸೆಲ್ಸಿಯಸ್ ತಾಪಮಾನ

ಸಿಲಿಕಾನ್ ಸಿಟಿ ಬೆಂಗಳೂರು ಏಪ್ರಿಲ್ ಆರಂಭದಲ್ಲೇ ತೀವ್ರ ಬಿಸಿಲಿನ ತಾಪಕ್ಕೆ ತತ್ತರಿಸಿದ್ದು,...

ಮಧ್ಯಪ್ರಾಚ್ಯದ ಬಿಕ್ಕಟ್ಟು | ಮಸಾಲೆ-ದಿನಸಿ ವ್ಯಾಪಾರಕ್ಕೂ ಭಾರಿ ಆಘಾತ  

ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಪರಿಣಾಮ ಈಗ ರಾಜಧಾನಿ ಬೆಂಗಳೂರಿನಲ್ಲಿ ಮಸಾಲೆ ಹಾಗೂ ದಿನಸಿ...

ಪ್ರಗತಿಪರ ಹೈನುಗಾರ ಮಹಿಳೆಯರ ಸಮಾವೇಶ: ಮಹಿಳೆಯರು ಹೇಳಿದ್ದಿಷ್ಟು!

ಗ್ರಾಮೀಣ ಭಾರತದ ಹಳ್ಳಿಗಳಲ್ಲಿ, ಸೂರ್ಯೋದಯದ ಮೊದಲೇ ಎದ್ದು ಹಸುಗಳ ಬಳಿ ಹೋಗುವ...

ಕೋಗಿಲು ಪ್ರಕರಣ | ಬೂಟಾಟಿಕೆ ಬಿಟ್ಟು ಮಾನವ ಧರ್ಮ ಪಾಲಿಸಿ : ಬಿ ಟಿ ಲಲಿತಾ ನಾಯಕ್ ಆಗ್ರಹ

“ಬೂಟಾಟಿಕೆ ಬಿಟ್ಟು ಮಾನವ ಧರ್ಮ ಪಾಲಿಸಿ. ಭಾಷೆ ಮತ್ತು ಧರ್ಮ ನೋಡಬೇಡಿ....