ರಾಜಸ್ಥಾನದ ಶಾಸಕನಾದ ಬೆಂಗಳೂರಿನ ಬಟ್ಟೆ ವ್ಯಾಪಾರಿ

Date:

Advertisements

ಬೆಂಗಳೂರಿನಲ್ಲಿ ವಾಸವಿರುವ ಬಟ್ಟೆ ವ್ಯಾಪಾರಿಯೊಬ್ಬರು ರಾಜಸ್ಥಾನ ರಾಜ್ಯದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ರಾಜಾಜಿನಗರದಲ್ಲಿ ವಾಸವಿರುವ ಲಾಡುಲಾಲ ಪಿಟ್ಲಿಯಾ ಚಿಕ್ಕಪೇಟೆಯಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದಾರೆ. ರಾಜಸ್ಥಾನ ರಾಜ್ಯದ ಸಹಾರಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ 52 ವರ್ಷದ ಲಾಡುಲಾಲ ಅವರು ಡಿ.3 ರಂದು ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 54,684 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಪಿಟ್ಲಿಯಾ ಅವರು ರಾಜಾಜಿನಗರ 2ನೇ ಬ್ಲಾಕ್‌ನ ಜುಗನಹಳ್ಳಿಯಲ್ಲಿ ವಾಸವಾಗಿದ್ದಾರೆ. ಅವರಿಗೆ ಅಲ್ಲಿ ಮನೆ ಇದೆ. ಅವರ ಮಕ್ಕಳು ಚಿಕ್ಕಪೇಟೆಯಲ್ಲಿ ನಡೆಸುತ್ತಿದ್ದಾರೆ. ಚುನಾವಣೆ ಪ್ರಯುಕ್ತ ಕೆಲ ತಿಂಗಳ ಹಿಂದೆ ರಾಜಸ್ಥಾನಕ್ಕೆ ತೆರಳಿದ್ದರು. ಮೊದಲೆಲ್ಲ ಇಲ್ಲಿಯೆ ಇರುತ್ತಿದ್ದ ಅವರು ರಾಜಕಾರಣ ಪ್ರವೇಶಿಸಿದ ನಂತರ ಹೆಚ್ಚಾಗಿ ರಾಜಸ್ಥಾನಕ್ಕೆ ತೆರಳುತ್ತಿದ್ದರು.

ಈ ಸುದ್ದಿ ಓದಿದ್ದೀರಾ? 2022 ರಲ್ಲಿ ದೇಶದಲ್ಲಿ 28,522 ಕೊಲೆ ಪ್ರಕರಣಗಳು ದಾಖಲು

ರಾಜಸ್ಥಾನದ ನೂತನ ಮಂತ್ರಿ ಮಂಡಳ ರಚನೆಯಾದ ನಂತರ ಬೆಂಗಳೂರಿಗೆ ಬರುವ ಸಾಧ್ಯತೆಯಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

2018 ರ ರಾಜಸ್ಥಾನ ಚುನಾವಣೆಯಲ್ಲಿ ಪಿಟ್ಲಿಯಾ ಅವರು ಸಹಾರಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋತಿದ್ದರು. ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿತ್ ಪ್ರಕಾರ, ಬೆಂಗಳೂರಿನಲ್ಲಿ ಪಿಟ್ಲಿಯಾ ಅವರ ಹೆಸರಿನಲ್ಲಿ ಹಲವಾರು ಬ್ಯಾಂಕ್ ಖಾತೆಗಳಿದ್ದು, ಚಿಕ್ಕಪೇಟೆಯಲ್ಲಿ ಪ್ರಮುಖ ಖಾತೆ ಹೊಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 7 ಕೋಟಿ 12ಲಕ್ಷ ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ನಕ್ಸಲರು ಶರಣಾದಾಗ ನಕ್ಸಲ್ ಮುಕ್ತ ರಾಜ್ಯ ಎಂದು ಬಿರುದು...

ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ...

ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ...

ಕಾಫ್‌ ಸಿರಪ್ ದುರಂತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ದಿನೇಶ್‌ ಗುಂಡೂರಾವ್‌

ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಪ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ...

Download Eedina App Android / iOS

X