ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಅವರ ಸಹೋದರ ಸಂಜಯ್ ಖೇಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿದೆ. ಜಿಲ್ಲೆಯ ಹಳ್ಳಿಖೇಡ್ ಬಳಿ ಕಾರು ಪಲ್ಟಿಯಾಗಿದ್ದು, ಸಂಜಯ್ ಖೇಣಿ ಅವರಿಗೆ ಗಾಯಗಳಾಗಿವೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳು ಸಂಜಯ್ ಖೇಣಿ ಅವರನ್ನು ಬೀದರ್‌ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಮತದಾನ ಆರಂಭ; ಹಲವೆಡೆ ಕೈಕೊಟ್ಟ ಇವಿಎಂ
ರಾಜ್ಯಾದ್ಯಂತ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾನವೂ ನಡೆಯುತ್ತಿದೆ. ಈ ಮಧ್ಯೆ ಬುಧವಾರ ಬೆಳಗಿನ ಜಾವ ಸಂಜಯ್ ಖೇಣಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಕುಟುಂಬಸ್ಥರು ಆತಂಕಗೊಂಡಿದ್ದಾರೆ.