ಬೀದರ್ | ಹೊರಗಿನ ಅಭ್ಯರ್ಥಿಗಳಿಗೆ ಅವಕಾಶ ನೀಡಬಾರದು: ಶಾಸಕ ಬಂಡೆಪ್ಪ ಖಾಶೆಂಪುರ್

Date:

Advertisements

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಚೆನ್ನಾಗಿರೋ ಕ್ರಿಕೆಟ್ ಪಿಚ್, ಚೆನ್ನಾಗಿ ಬ್ಯಾಟಿಂಗ್ ಮಾಡಬಹುದೆಂದು ಭಾವಿಸಿ ಹೊರಗಿನ ಅಭ್ಯರ್ಥಿಗಳು ಎಂಟ್ರಿ ಕೊಟ್ಟಿದ್ದಾರೆ. ಕ್ಷೇತ್ರದ ಜನರು ಹೊರಗಿನವರಿಗೆ ಜಬರ್ದಸ್ತ್ ಬೌಲಿಂಗ್ ಮಾಡಿ, ಬೋಲ್ಡ್ ಔಟ್ ಮಾಡಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ, ಜೆಡಿಎಸ್ ಅಭ್ಯರ್ಥಿ ಬಂಡೆಪ್ಪ ಖಾಶೆಂಪುರ್ ಮನವಿ ಮಾಡಿದರು.

ಬೀದರ್ ದಕ್ಷಿಣ ಕ್ಷೇತ್ರದ ನಿಜಾಂಪುರ, ಹಜ್ಜರಗಿ, ಕಮಲಾಪೂರ, ಕೋಳಾರ ಕೆ ಸೇರಿದಂತೆ ಹಲವೆಡೆ  ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, “ಏನೋ ಆಸೆಯಿಂದ ಹೊರಗಿನವ್ರು ನಮ್ಮ ಕ್ಷೇತ್ರಕ್ಕೆ ಬಂದಿದ್ದಾರೆ. ಅವ್ರು ಯಾರೂ ಕೂಡ ಸದಾಕಾಲವೂ ಕ್ಷೇತ್ರದಲ್ಲಿ ಉಳಿದುಕೊಂಡು ಕೆಲಸ ಮಾಡುವವರಲ್ಲ. ಅಂತವರಿಗೆ ತಾವು ಅವಕಾಶ ನೀಡಬಾರದು” ಎಂದರು.

“ನಾನು ಇದೇ ಕ್ಷೇತ್ರದ ಅಭ್ಯರ್ಥಿಯಾಗಿದ್ದೇನೆ. ಸದಾಕಾಲವೂ ನಿಮ್ಮ ಕೈಗೆ ಸಿಗುವವನಾಗಿದ್ದೇನೆ. ಯಾವ ಸಮಯದಲ್ಲಿ ಬಂದರೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದೇನೆ. ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇನೆ. ಕ್ಷೇತ್ರದ ಒಳಗೆ ಹೊರಗೆ ವಿಧಾನಸಭಾ, ವಿಧಾನಸೌಧದ ಹೊರಗೆ ಒಳಗೆ ಮಹತ್ವದ ವಿಷಯಗಳ ಬಗ್ಗೆ ಧ್ವನಿ ಎತ್ತುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದೇನೆ. ಕ್ಷೇತ್ರದ ಜನರು ನನಗೆ ಆಶೀರ್ವಾದ ಮಾಡಬೇಕು” ಎಂದು ಕೋರಿದರು.

Advertisements

ಈ ಸುದ್ದಿ ಓದಿದ್ದೀರಾ? ರೈತರ ಹಿತಾಸಕ್ತಿಗಾಗಿ ಚುನಾವಣೆಗೆ ಸ್ಪರ್ಧಿಸಿದ್ದೇನೆ: ದರ್ಶನ್ ಪುಟ್ಟಣ್ಣಯ್ಯ

“ಚುನಾವಣೆ ಮುಂದಿರುವಾಗ ಬಂದು ಬಣ್ಣಬಣ್ಣದ ಮಾತನಾಡಿ ಚುನಾವಣೆ ಮುಗಿದ ಬಳಿಕ ಮರಳಿ ನೋಡದಂತ ಜನರಿಗೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರು ತಕ್ಕ ಪಾಠ ಕಲಿಸಬೇಕು. ಈ ಬಾರಿ ಎಲ್ಲರೂ ಜೆಡಿಎಸ್ ಪಕ್ಷವನ್ನು ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸಬೇಕು” ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಚುನಾವಣಾ ಪ್ರಚಾರದ ವೇಳೆ ಮನವಿ ಮಾಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X