ಬೀದರ್ ದಕ್ಷಿಣ ಕ್ಷೇತ್ರ | ‘ತೆನೆ’ ಕೋಟೆ ಭೇದಿಸಲು ಕೈ-ಕಮಲ ಗುದ್ದಾಟ

Date:

ಬೀದರ್ ಜಿಲ್ಲೆಯಲ್ಲಿ 2008 ರಿಂದ ಅಸ್ತಿತ್ವಕ್ಕೆ ಬಂದ ಬೀದರ್ ದಕ್ಷಿಣ ಕ್ಷೇತ್ರ ಹಲವು ವಿಭಿನ್ನತೆಯನ್ನು ಹೊಂದಿದೆ. ಬೀದರ್ ತಾಲೂಕು ಹಾಗೂ ಹುಮನಾಬಾದ್ ತಾಲೂಕಿನ ಗ್ರಾಮಗಳನ್ನು ಒಳಗೊಂಡಿರುವ ಕ್ಷೇತ್ರವಿದು. ಇದೂವರೆಗೂ ಮೂರು ಚುನಾವಣೆಗಳನ್ನು ಕ್ಷೇತ್ರ ಕಂಡಿದೆ. 2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಬಂಡೆಪ್ಪ ಖಾಶೆಂಪೂರ್ ಗೆಲ್ಲುವ ಕಂಡಿದ್ದರು.‌ 2013ರಲ್ಲಿ ಕರ್ನಾಟಕ ಮಕ್ಕಳ ಪಕ್ಷದ ಅಭ್ಯರ್ಥಿ ಅಶೋಕ್ ಖೇಣಿ ಗೆಲುವು ಸಾಧಿಸಿದ್ದರು. 2018ರಲ್ಲಿ ಬಂಡೆಪ್ಪ ಖಾಶೆಂಪೂರ್ ಜೆಡಿಎಸ್‌ನಿಂದ ಎರಡನೇ ಬಾರಿಗೆ ಗೆದ್ದಿದ್ದರು.

ಮೂರು ಸಾರ್ವತ್ರಿಕ ಚುನಾವಣೆಯಲ್ಲಿ ಎರಡು ಸಲ ಜೆಡಿಎಸ್ ಒಮ್ಮೆ ಕರ್ನಾಟಕ ಮಕ್ಕಳ ಪಕ್ಷ ಗೆದ್ದಿದೆ. ಪ್ರತಿಸಲವೂ ರಾಷ್ಟ್ರೀಯ ಪಕ್ಷಗಳು ಪೈಪೋಟಿ ಒಡ್ಡಿದರೂ ಮತದಾರರು ಮಾತ್ರ ಇಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಮಣೆ ಹಾಕಿಲ್ಲ. ಸದ್ಯ ಬೀದರ್ ದಕ್ಷಿಣ ಕ್ಷೇತ್ರ ‘ತೆನೆ’ ಭದ್ರಕೋಟೆ ಎಂದು ಬಿಂಬಿಸಿಕೊಂಡಿದೆ. 2008 ಹಾಗೂ 2018ರಲ್ಲಿ ಜೆಡಿಎಸ್ ವಿರುದ್ಧ ಸೆಣೆಸಾಡಿದ ಬಿಜೆಪಿಗೆ ಗೆಲ್ಲಲು ಆಗಲಿಲ್ಲ. 2013ರಲ್ಲಿ ಕರ್ನಾಟಕ ಮಕ್ಕಳ ಪಕ್ಷದಿಂದ ಸ್ಪರ್ಧಿಸಿದ ಅಶೋಕ್ ಖೇಣಿ ಜೆಡಿಎಸ್ ಹಾಗೂ ಕೆಜೆಪಿ ಸೋಲಿಸಿ ಮೊದಲ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ್ದರು. 2018ರಲ್ಲಿ ಕಾಂಗ್ರೆಸ್ ಸೇರಿ ಸ್ಪರ್ಧಿಸಿದ ಅಶೋಕ್ ಖೇಣಿ ಮೂರನೇ ಸ್ಥಾನಕ್ಕೆ ಕುಸಿದಿದ್ದರು. ಇಲ್ಲಿಯ ಮೂರು ಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತೃಪ್ತಿ ಕಂಡಿದೆ.

ಜೆಡಿಎಸ್ ಗೆದ್ದಾಗೊಮ್ಮೆ ಸಮ್ಮಿಶ್ರ ಸರ್ಕಾರ

ಈ ಕ್ಷೇತ್ರದ ವಿಶೇಷವೆಂದರೆ, ಇಲ್ಲಿ ಜೆಡಿಎಸ್‌ ಜಯಗಳಿಸಿದ ಎರಡು ಬಾರಿಯೂ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. 2008-2018ರಲ್ಲಿ ಗೆದ್ದ ಜೆಡಿಎಸ್‌ನ ಬಂಡೆಪ್ಪ ಖಾಶೆಂಪುರ ಎರಡು ಬಾರಿಯೂ ಸಚಿವರಾಗಿದ್ದರು. 2004ರಲ್ಲಿ ಬೀದರ್ ಉತ್ತರ ಕ್ಷೇತ್ರದಿಂದ ಪಕ್ಷೇತರರಾಗಿ ಮೊದಲ ಬಾರಿಗೆ ಶಾಸಕರಾದ ಬಂಡೆಪ್ಪ ಖಾಶೆಂಪೂರ್, 2008ರಲ್ಲಿ ಕ್ಷೇತ್ರ ಮರುವಿಂಗಡಣೆ ನಂತರ ಬೀದರ್ ದಕ್ಷಿಣದಿಂದ ಸ್ಪರ್ದಿಸುತ್ತಿದ್ದಾರೆ. ಇದೀಗ 2023ರಲ್ಲಿ ನಾಲ್ಕನೇ ಬಾರಿಗೆ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಬಹುಕೋನ ಸ್ಪರ್ಧೆಯಲ್ಲಿ ಜಿದ್ದಾಜಿದ್ದಿ

ಪ್ರತಿಬಾರಿಯ ಚುನಾವಣೆಯಲ್ಲಿ ಎರಡು-ಮೂರು ಪಕ್ಷಗಳ ನಡುವೆ ನೇರ-ತ್ರಿಕೋನ ಸ್ಪರ್ಧೆ ಇಲ್ಲಿ ಸಾಮಾನ್ಯವಾಗಿತ್ತು. ಆದರೀಗ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಸಾವಾಲೊಡ್ಡಿ ಎಎಪಿ, ಕರ್ನಾಟಕ ರಾಜ್ಯ ಪ್ರಗತಿ ಪಕ್ಷ, ಬಿಎಸ್‌ಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಬಾರಿ ಕ್ಷೇತ್ರ ಹೈ ವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟು ಗಮನ ಸೆಳೆಯುತ್ತಿದೆ.

ಜೆಡಿಎಸ್‌ನಿಂದ ಹಾಲಿ ಶಾಸಕ ಬಂಡೆಪ್ಪ ಖಾಶೆಂಪೂರ್, ಬಿಜೆಪಿಯಿಂದ ಡಾ. ಶೈಲೇಂದ್ರ ಬೆಲ್ದಾಳೆ, ಕಾಂಗ್ರೆಸ್‌ನಿಂದ ಅಶೋಕ್ ಖೇಣಿ ಕಣದಲ್ಲಿದ್ದಾರೆ. ಕಾಂಗ್ರೆಸ್ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಧರ್ಮಸಿಂಗ್ ಅಳಿಯ ಚಂದ್ರಾಸಿಂಗ್ ಕಾಂಗ್ರೆಸ್‌ ವಿರುದ್ಧ ಬಂಡಾಯವೆದ್ದು ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. ಕಳೆದ ಬಾರಿ ಹುಮನಾಬಾದ್ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ಮೇರಾಜುದ್ದೀನ್ ಪಟೇಲ್ ಸಹೋದರ ನಸೀಮುದ್ದೀನ್ ಪಟೇಲ್ ಈ ಬಾರಿ ಎಎಪಿ ಅಭ್ಯರ್ಥಿಯಾಗಿ ಈ ಕ್ಷೇತ್ರಕ್ಕೆ ಬಂದಿದ್ದಾರೆ. ಕರ್ನಾಟಕ ರಾಜ್ಯ ಪ್ರಗತಿ ಪಕ್ಷದಿಂದ ಭೀಮಾಶಂಕರ ಪೋಲೀಸ್ ಪಾಟೀಲ್ ಕಣಕ್ಕಿಳಿದಿದ್ದಾರೆ. ಈ ಎಲ್ಲರ ಸ್ಪರ್ಧೆಯ ಕಾರಣ ಕ್ಷೇತ್ರದಲ್ಲಿ ಬಹುಕೋನ ಸ್ಫರ್ಧೆ ಏರ್ಪಟ್ಟಿದೆ.

ಮೂರು ಬಾರಿ ಶಾಸಕರಾದ ಬಂಡೆಪ್ಪ ಖಾಶೆಂಪೂರ್ ನಾಲ್ಕನೇ ಬಾರಿ ಗೆಲುವಿಗಾಗಿ ಕಸರತ್ತು ನಡೆಸಿದರೆ, ಎರಡನೇ ಬಾರಿಗೆ ವಿಧಾನಸಭೆಗೆ ಪ್ರವೇಶಿಸಲು ಅಶೋಕ್ ಖೇಣಿ ಇನ್ನಿಲ್ಲದ ಶ್ರಮ ಹಾಕುತ್ತಿದ್ದಾರೆ.‌ ಒಮ್ಮೆ ಕೆಜೆಪಿ, ಬಿಜೆಪಿಯಿಂದ ಸ್ಪರ್ಧಿಸಿ ಎರಡು ಬಾರಿ ಸತತ ಸೋಲುಂಡ ಡಾ. ಶೈಲೇಂದ್ರ ಬೆಲ್ದಾಳೆ ಅನುಕಂಪದ ಅಲೆಯಿಂದ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಕಾಂಗ್ರೆಸ್ ಮೇಲೆ ಸಿಟ್ಟಾದ ಚಂದ್ರಾಸಿಂಗ್ ಪಕ್ಷೇತರರಾಗಿ ಬಿರುಸಿನ ಪ್ರಚಾರ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ. ಎಎಪಿ ಹಾಗೂ ಪಕ್ಷೇತರ ಅಭ್ಯರ್ಥಿಯಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಸಾಂಪ್ರದಾಯಿಕ ಮತಗಳು ವಿಭಜನೆಯಾಗುವ ಭೀತಿ ಎದುರಾಗಿದೆ. ಇತ್ತ, ಕರ್ನಾಟಕ ರಾಜ್ಯ ಪ್ರಗತಿ ಪಕ್ಷದಿಂದಾಗಿ ಬಿಜೆಪಿಗೆ ಹಿನ್ನಡೆ ಆಗುವ ಸಾಧ್ಯತೆಯಿದೆ.

ಫಲಿಸುವುದೇ ರಾಷ್ಟ್ರೀಯ ಪಕ್ಷಗಳ ಕನಸು

ಪ್ರತಿ ಚುನಾವಣೆಯಲ್ಲಿ ಬದಲಾವಣೆ ಬಯಸುವ ಮತದಾರರು ಈ ಬಾರಿ ರಾಷ್ಟ್ರೀಯ ಪಕ್ಷಗಳಿಗೆ ಮಣೆ ಹಾಕುವರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.‌ ಬಂಡೆಪ್ಪ ಖಾಶೆಂಪೂರ್ ಭಾರೀ ಪ್ರಚಾರದಲ್ಲಿದ್ದಾರೆ. ಶತಾಯಗತಾಯ ಈ ಬಾರಿ ಕಮಲ ಅರಳಿಸಲು ಬಿ.ಎಸ್ ವಿಜಯೇಂದ್ರ, ಎನ್ ರವಿಕುಮಾರ್ ಅವರು ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. ಮೊದಲ ಬಾರಿಗೆ ಕಾಂಗ್ರೆಸ್ ಗೆಲ್ಲಿಸಲು ಖೇಣಿ ಪರವಾಗಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಭಾಲ್ಕಿ ಕ್ಷೇತ್ರ | ‘ಕೈ’ ಭ್ರದಕೋಟೆಯಲ್ಲಿ ‘ಕಮಲ’ ಕಮಾಲ್; ದಾಯಾದಿಗಳ ಕಾಳಗ

ರಾಷ್ಟ್ರೀಯ ಪಕ್ಷಗಳಿಗೆ ಕ್ಷೇತ್ರ ತೆಕ್ಕೆಗೆ ತೆಗೆದುಕೊಳ್ಳುವ ಪ್ರತಿಷ್ಠೆಯಾದರೆ ಜೆಡಿಎಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ಸವಾಲಿವೆ. ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಚಂದ್ರಾಸಿಂಗ್ ಎಲ್ಲರಿಗೂ ಸೆಡ್ಡು ಹೊಡೆದು ಗೆಲ್ಲುವ ತವಕದಲ್ಲಿದ್ದಾರೆ. ಬೀದರ್ ದಕ್ಷಿಣ ಕ್ಷೇತ್ರದ ರೋಚಕ ಗೆಲುವು ಯಾರ ಪಾಲಾಗುತ್ತದೆ ಎಂಬುದು ರಾಜಕೀಯ ವಿಶ್ಲೇಷಕರಿಗೂ ನಿಲುಕದ ಲೆಕ್ಕಾಚಾರ.

ಕ್ಷೇತ್ರದ ಜಾತಿವಾರು ಮತಬಲ

ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಮತಪ್ರಾಬಲ್ಯ ಹೆಚ್ಚಾಗಿದ್ದರೂ ಲಿಂಗಾಯತ ಹಾಗೂ ಪರಿಶಿಷ್ಟ ಜಾತಿ, ಕುರುಬ, ಟೋಕರಿ ಕೋಲಿ ಸೇರಿದಂತೆ ಇತರೆ ಸಮುದಾಯದ ಮತಗಳು ನಿರ್ಣಾಯಕ ಪಾತ್ರವಹಿಸುತ್ತವೆ. ಕ್ಷೇತ್ರದಲ್ಲಿ 101920 ಪುರುಷರು, 94700 ಮಹಿಳೆಯರು ಹಾಗೂ 3 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 196623 ಮತದಾರರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಕವಿ, ಪತ್ರಕರ್ತ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬಂದ್ | ಚಿಕ್ಕಬಳ್ಳಾಪುರ: ತಲೆ ಬೋಳಿಸಿಕೊಂಡು ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿಯೊಬ್ಬರು ತಲೆ ಬೊಳಿಸಿಕೊಂಡು...

ಬೆಳಗಾವಿ | ಆಪರೇಷನ್ ಹಸ್ತದ ಬಗ್ಗೆ ಲಕ್ಷ್ಮಣ್ ಸವದಿ ಮಾರ್ಮಿಕ ಹೇಳಿಕೆ

ಬಹಳಷ್ಟು ಮಂದಿ ಜೆಡಿಎಸ್‌-ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರುಲು ಸಿದ್ದರಾಗಿದ್ದಾರೆ. ಎಲ್ಲದಕ್ಕೂ ಕಾಲ...

ಚಾಮರಾಜನಗರ | ಚೈನ್ನೈ ಮೂಲದ ವೈದ್ಯೆ ಅನುಮಾನಾಸ್ಪದ ಸಾವು

ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆ ಡಾ. ಸಿಂಧುಜಾ (28) ಅನುಮಾನಾಸ್ಪವಾಗಿ...

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ...