ಬೀದರ್ | ಕೆಲ ಕಚೇರಿಗಳನ್ನು ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಮನವಿ

Date:

ಕಲ್ಯಾಣ ಕರ್ನಾಟಕದ ಜನರಿಗೆ ಅನುಕೂಲವಾಗಲು ಕೆಲ ಕಚೇರಿಗಳನ್ನು ಕಲಬುರಗಿಗೆ ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಅನಂತರೆಡ್ಡಿ ಅವರ ನೇತೃತ್ವದಲ್ಲಿ ಇಂದು (ಡಿ.15) ಬೀದರ್ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

ಕರ್ನಾಟಕದಲ್ಲಿ ಅತೀ ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕದ ಜನರ ಶ್ರೇಯೋ ಅಭಿವೃದ್ಧಿಗಾಗಿ 371(ಜೆ) ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಐತಿಹಾಸಿಕ ದಾಖಲೆಯಾಗಿದೆ. ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲವೆಂಬ ಗಾದೆ ಈ ಭಾಗದ ಜನರಿಗೆ ಅನ್ವಯವಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬೀದರದಿಂದ ಬೆಂಗಳೂರು 800-850 ಕಿ.ಮೀ. ದೂರವಿದು, ಅದೇ ರೀತಿಯಾಗಿ ಬೆಳಗಾವಿ ಸುವರ್ಣ ಸೌಧ ಸಹ 500-550 ಕಿ.ಮೀ. ಅಂತರದಲ್ಲಿದೆ. ಈ ಕಾರಣಕ್ಕಾಗಿ ದೊಡ್ಡ-‌ ದೊಡ್ಡ ರಾಜ್ಯಗಳನ್ನು ಚಿಕ್ಕದಾಗಿ ಮಾಡಿದರೆ ಅಭಿವೃದ್ಧಿಯಾಗುತ್ತದೆ ಎಂಬ ಕೂಗು ಕೇಳಿ ಬರುತ್ತಿದೆ.

ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಎಂಬ ತಾರತಮ್ಯವೇ ಬೇಡ. ಆದ್ದರಿಂದ, ಆಯಾ ಭಾಗದ ಜನರಿಗೆ ಅನುಕೂಲವಾಗುವಂತೆ ಕೆಲ ಕಚೇರಿಗಳು ಬೆಂಗಳೂರಿನಿಂದ ಆಯಾ ಭಾಗಕ್ಕೆ ಸ್ಥಳಾಂತರಿಸಿದರೆ, ಎಲ್ಲಾ ಭಾಗದ ಜನರು ಎಲ್ಲಾ ಕಡೆಯೂ ಸುತ್ತಲು ಮತ್ತು ಆ ಭಾಗದ ಜನಜೀವನ, ಸಂಸ್ಕೃತಿ, ಸಾಹಿತ್ಯ, ಊಟ, ಉಡುಗೆ ಅರಿಯಲು ಸಹ ಸಾಧ್ಯವಾಗುತ್ತದೆ.

ಹೀಗಾಗಿ, ಕಲ್ಯಾಣ ಕರ್ನಾಟಕದ ಕೇಂದ್ರ ಭಾಗವಾದ ಕಲಬುರಗಿಯಲ್ಲಿ ಕೆಲ ಕಚೇರಿಗಳನ್ನು ಸ್ಥಾಪಿಸಿ, ಈ ಭಾಗದ ಜನರು ಬೆಂಗಳೂರಿಗೆ ಹೋಗುವುದನ್ನು ತಪ್ಪಿಸಬೇಕೆಂದು ಮತ್ತು ಸರ್ಕಾರದ ಆಡಳಿತ ಜನರ ಅನುಕೂಲಕ್ಕೆ ಎಂಬ ಪ್ರಜಾಪ್ರಭುತ್ವದ ಆಶಯವನ್ನು ಸರ್ಕಾರ ಈಡೇರಿಸಬೇಕೆಂದು, ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಬಕ್ಕಪ್ಪಾ ನಾಗೋರಾ, ಡಾ. ಸಿ.ಆನಂದರಾವ, ರಮೇಶ್‌ ಬಿರಾದಾರ, ವಿಶ್ವನಾಥ ಉಪ್ಪೆ, ವಿದ್ಯಾಸಾಗರ, ಕೃಷ್ಣರೆಡ್ಡಿ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...