ಬೀದರ್‌ | ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಿ : ಜಿಲ್ಲಾಧಿಕಾರಿ ಗೋವಿಂದರೆಡ್ಡಿ

Date:

Advertisements
ಬೀದರ್ ಜಿಲ್ಲೆಯ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಅಲೆಮಾರಿ ಜನಾಂಗದ ಜನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಕಾನ್ಪರೇನ್ಸ್ ಮೂಲಕ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
“2008 ರಲ್ಲಿ ರದ್ದುಪಡಿಸಲಾದ 25 ಜನ ಗೊಂದಳಿ ಸಮಾಜದ ನಿವೇಶನ ಅರ್ಜಿಯನ್ನು ಪುನಃ ಬೀದರ ನಗರ ಸಭೆಯ ಜಿ-3 ಯೋಜನೆಯಡಿ ಸೇರಿಸುವಂತೆ ನಗರಸಭೆ ಆಯುಕ್ತರಿಗೆ ಪತ್ರ ಬರೆಯಲು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಬೀದರ ತಾಲ್ಲೂಕಿನ ಮನ್ನಳ್ಳಿಯ ದರ್ವೇಶಿ ಕಾಲೋನಿಯಲ್ಲಿ ರಸ್ತೆ ನಿರ್ಮಾಣ ಮಾಡಲು ಕ್ರಮವಹಿಸಬೇಕು ಹಾಗೂ ಹಿಂದೆ ಈ ಸಮಾಜದ ನಿವೇಶನಕ್ಕೆ ಸಂಬಂಧಪಟ್ಟ ಬಾಕಿ ಉಳಿದ ಶೀಘ್ರವೇ ಪೂರ್ಣಗೊಳಿಸಬೇಕು. ಯಾವ ತಾಲ್ಲೂಕಿನಲ್ಲಿ ಅಲೆಮಾರಿ ಜನಾಂಗದವರಿಗೆ ನಿವೇಶನ ನಿರ್ಮಾಣಕ್ಕೆ ಸರ್ಕಾರಿ ಜಮೀನಿನ ಕೊರತೆ ಇದೆಯೋ, ಅಂತಹ ತಾಲ್ಲೂಕಿನಲ್ಲಿ ಖಾಸಗಿ ಜಮೀನು ಖರೀದಿಸಲು ಕ್ರಮವಹಿಸಬೇಕು” ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅಲೆಮಾರಿ ಸಮುದಾಯ ಭವನ ನಿರ್ಮಾಣಕ್ಕೆ ಅಲೆಮಾರಿ ಸಮುದಾಯದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು, ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿಗಳು ನಿಯಮಾನುಸಾರ ಕ್ರಮವಹಿಸಲಾಗುವುದು” ಎಂದು ಭರವಸೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ.ಎಂ, ನಗರಸಭೆ ಆಯುಕ್ತ ಶಿವರಾಜ ರಾಠೋಡ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ ಬಡಿಗೇರ್, ಬಸವಕಲ್ಯಾಣದ ಸಹಾಯಕ ಆಯುಕ್ತರು ಹಾಗೂ ವಿವಿಧ ತಾಲ್ಲೂಕಿನ ತಹಶೀಲ್ದಾರರು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಕರ್ನಾಟಕ ರಾಜ್ಯ ಹಿಂದುಳಿದ ಅಲೆಮಾರಿ ಅರೆ ಅಲೆಮಾರಿ ಒಕ್ಕೂಟದ ಜಿಲ್ಲಾಧ್ಯಕ್ಷ ನಾಗನಾಥ ವಾಕೊಡೆ, ಅಲೆಮಾರಿ ಸಂಘದ ಸದಸ್ಯರು, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವಾಡೆನ್‌ ಬಾಗ್ ತಾಂಡಾಕ್ಕೆ ದೌಡಾಯಿಸಿದ ಡಾ. ಶಿಂಧೆ, ಅಧಿಕಾರಿಗಳು

ʼಈದಿನ.ಕಾಮ್‌ʼ ವರದಿಗೆ ಸ್ಪಂದಿಸಿದ ಪರಾಜಿತ ಅಭ್ಯರ್ಥಿ ಭೀಮಸೇನರಾವ್ ಶಿಂಧೆ‌ ಹಾಗೂ ಅಧಿಕಾರಿಗಳು ಸರಕಾರಕ್ಕೆ...

ಬೀದರ್‌ | ಅನಧಿಕೃತ ಡಿಜಿಟಲ್‌ ಖಾತಾ ಹಂಚಿಕೆ: ಪಿಡಿಒ ಅಮಾನತು

ಅಕ್ರಮವಾಗಿ ಡಿಜಿಟಲ್‌ ಖಾತಾಗಳನ್ನು ಮಾಡಿಕೊಟ್ಟು ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟು...

ಬೀದರ್‌ | ಸಣ್ಣ ಕೈಗಾರಿಕೆಗಳು ಉದ್ಯೋಗ ಸೃಷ್ಠಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ : ಸಚಿವ ಶರಣಬಸಪ್ಪ ದರ್ಶನಾಪೂರ

ದೇಶದಲ್ಲಿ ದೊಡ್ಡ ಕೈಗಾರಿಕೆಗಳಿಗೆ ಒತ್ತು ನೀಡಿದಂತೆ ಸಣ್ಣ ಕೈಗಾರಿಕೆಗಳಿಗೂ ಪ್ರೋತ್ಸಾಹಿಸಬೇಕು. ಜಿಲ್ಲೆಯ ಕಂಪನಿಗಳಲ್ಲಿ...

ಬೀದರ್‌ | ವಸತಿ ರಹಿತ ಅಲೆಮಾರಿ ಸಮುದಾಯಕ್ಕೆ ನಿವೇಶನ ಕಲ್ಪಿಸುವಂತೆ ಒತ್ತಾಯ

ಬೀದರ್ ನಗರದ ನೌಬಾದನ ಆಟೊ ನಗರದಲ್ಲಿ ತಾತ್ಕಾಲಿಕ ಜೋಪಡಿಗಳಲ್ಲಿ ವಾಸಿಸುತ್ತಿರುವ ಅಲೆಮಾರಿ...

Download Eedina App Android / iOS

X