ಸೋಲುವ ಭೀತಿಯಿಂದ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಪತ್ರ ಸೃಷ್ಟಿಸಿದ ಬಿಜೆಪಿ: ಡಿ‌ ಕೆ ಶಿವಕುಮಾರ್

Date:

ಬಿಜೆಪಿ ಅವರಿಗೆ ಮಾಡಲು ಕೆಲಸ ಇಲ್ಲ. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಸಿದ್ದರಾಮಯ್ಯ ಅವರ ಹೆಸರಲ್ಲಿ ನನ್ನ ವಿರುದ್ಧ ನಕಲಿ ಪತ್ರ ಬರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳು ಈ ನಕಲಿ ಪತ್ರದ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದರು.

“ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಯಾಕೆ ಪತ್ರ ಬರೆಯುತ್ತಾರೆ? ಅವರು ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಮೊನ್ನೆಯಷ್ಟೇ ನಾವಿಬ್ಬರೂ ಸೇರಿ ಅಭಿಪ್ರಾಯ ಹಂಚಿಕೊಂಡಿದ್ದೇವೆ. ಈಗಲೂ ನಾವು ಮಾಡುತ್ತಿದ್ದೇವೆ. ಅವರಿಗೆ ಜನರ ಬಳಿ ಪ್ರಚಾರಕ್ಕೆ ಸಮಯ ಸಿಗುತ್ತಿಲ್ಲ. ಇನ್ನು ಈ ರೀತಿ ದೂರಲು ಎಲ್ಲಿ ಸಾಧ್ಯ? ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ” ಎಂದು ಕಿಡಿಕಾರಿದರು.

“ಬಿಜೆಪಿಯಲ್ಲಿರುವ ಆಂತರಿಕ ಹುಳುಕು ಮುಚ್ಚಿಕೊಳ್ಳಲು ಈ ರೀತಿ ಪ್ರಯತ್ನ ಮಾಡುತ್ತಿದ್ದಾರೆ. ಮೋದಿ ಅವರು ಬಂದು ಬೀದಿ ಬೀದಿ ಅಲೆದಾಡಿದರು. ಮೋದಿ ಅವರು ಬಂದು ರೋಡ್ ಶೋ ಮಾಡಿದರು. ಅವರ ಜತೆ ಒಬ್ಬ ರಾಜ್ಯ ನಾಯಕನೂ ಇರಲಿಲ್ಲ. ಕನಿಷ್ಠ ಪಕ್ಷ ಆಯಾ ಕ್ಷೇತ್ರದ ಅಭ್ಯರ್ಥಿಯನ್ನಾದರೂ ಜತೆಯಲ್ಲಿ ಇಟ್ಟುಕೊಂಡು ರೋಡ್ ಶೋ ಮಾಡಬಾರದೇ?” ಎಂದರು.

ನೀವು ಸಿದ್ದರಾಮಯ್ಯ ಅವರು ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದೀರಾ ಎಂಬ ಪ್ರಶ್ನೆಗೆ, “ಚಾಮುಂಡಿ ತಾಯಿ ನಾಡಿನ ದೇವತೆ. ಎಲ್ಲರೂ ಸುಭಿಕ್ಷವಾಗಿರಲಿ ಎಂದು ನಾನು ಹಾಗೂ ಸಿದ್ದರಾಮಯ್ಯ ಅವರು ಚಾಮುಂಡಿ ದೇವತೆಯಲ್ಲಿ ಪ್ರಾರ್ಥನೆ ಮಾಡಿ ಆಶೀರ್ವಾದ ಪಡೆಯಲು ಹೋಗುತ್ತಿದ್ದೇವೆ” ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದಿನಿಂದ ಭಾರತದಲ್ಲಿನ ಅಫ್ಘಾನಿಸ್ತಾನ ರಾಯಭಾರ ಕಚೇರಿ ಕಾರ್ಯಾಚರಣೆ ಸ್ಥಗಿತ

ಭಾರತ ಸರ್ಕಾರವು ಸರಿಯಾದ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ ರಾಯಭಾರ ಕಚೇರಿ 'ಸಾಕಷ್ಟು...

ಗಾಂಜಾ ಮಾರಾಟ ಆರೋಪ; ಮಾಜಿ ಸಚಿವ ಮುನಿರತ್ನ ವಿರುದ್ಧ ದೂರು

ಬೆಂಗಳೂರಿನ ಆರ್‌ಆರ್‌ ನಗರದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆರ್‌ಆರ್‌ ನಗರದ...

ಕಾವೇರಿ ವಿವಾದ | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್‌

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು...

ಕೋಲಾರ | ಅನರ್ಹರಿಗೆ ಭೂಮಿ ಮಂಜೂರು ಪ್ರಕರಣ; ಕಾಂಗ್ರೆಸ್‌ ಶಾಸಕನ ವಿರುದ್ಧ ತನಿಖೆಗೆ ಆದೇಶ

ಸರ್ಕಾರಿ ಭೂಮಿಯನ್ನು ಮೃತರೂ ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಮಾಲೂರು ಕಾಂಗ್ರೆಸ್‌...