ಪಕ್ಷಾಂತರಿಗಳು ಹಾಗೂ ಬಂಡಾಯ ಅಭ್ಯರ್ಥಿಗಳಿಂದ ಬಿಜೆಪಿಗೆ ನಷ್ಟವಿಲ್ಲ: ಸಿಎಂ ಬೊಮ್ಮಾಯಿ

Date:

  • ಈ ಬಾರಿ ಅಚ್ಚರಿಯ ಫಲಿತಾಂಶವನ್ನು ಬಿಜೆಪಿ ನೀಡಲಿದೆ
  • ಏಪ್ರಿಲ್ 8ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ

ಪಕ್ಷಾಂತರಿಗಳು ಹಾಗೂ ಬಂಡಾಯದ ಅಭ್ಯರ್ಥಿಗಳಿಂದ ಬಿಜೆಪಿ ಗೆ ನಷ್ಟವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ಮೂರು ದಿನಗಳ ಬೆಳವಣಿಗೆ ಗಮನಿಸಿದರೆ ಕೆಲವು ಕ್ಷೇತ್ರದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ ಎಂದರು.

ಏ .8ಕ್ಕೆ ಪಟ್ಟಿ ಬಿಡುಗಡೆ
ವಾಸ್ತವಾಂಶ ಆಧರಿಸಿ ಅಭ್ಯರ್ಥಿ ಆಯ್ಕೆಯಾಗಿದೆ. ಇಂದು ರಾಜ್ಯ ಸಮಿತಿಯ ಸಭೆ ಕರೆಯಲಾಗಿದೆ. ಎರಡು ದಿನಗಳ ಸಭೆ ಬಳಿಕ ಈ ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಲಾಗುವುದು. 8ರ ಸಭೆ ಬಳಿಕ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಂಡಾಯಕ್ಕೆ ತಲೆ ಕೆಡಿಸಿಕೊಳ್ಳಲ್ಲ
ಆಯನೂರು ಮಂಜುನಾಥ್ ಅವರ ಬಂಡಾಯ ಹಾಗೂ ಶಾಸಕರು ಪಕ್ಷಾಂತರದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಈಗ ನಮ್ಮಲ್ಲಿ 125 ಶಾಸಕರಿದ್ದಾರೆ. ಅದರಲ್ಲಿ ಕೆಲವು ಕಡೆ ಇಬ್ಬರು ಆಕಾಂಕ್ಷಿಗಳು ಇದ್ದಾರೆ. ಅಲ್ಲಿ ಸ್ಥಾನ ದೊರೆಯುವುದಿಲ್ಲ ಎಂದು ಕೆಲವರು ಬಿಟ್ಟು ಹೋಗಿದ್ದಾರೆ ಅಷ್ಟೆ. ಇದರಿಂದ ಬಿಜೆಪಿ ಹಾಗೂ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಬಿಜೆಪಿಯಿಂದ ಮತ್ತೆ ಯಾರು ಹೋಗುವುದಿಲ್ಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಬಿಜೆಪಿಗೆ ಟಿಕೆಟ್‌ ಆಕಾಂಕ್ಷಿಗಳ ತಲೆ ಬಿಸಿ; ಅಭ್ಯರ್ಥಿಗಳ ಪಟ್ಟಿ ಶಿಫಾರಸಿಗೆ ಇನ್ನಿಲ್ಲದ ಕಸರತ್ತು

ಸಿದ್ದರಾಮಯ್ಯ ಸಿಎಂ ಆಗುವ ವಿಚಾರದಲ್ಲಿ ನೀಡಿದ್ದ ಹೇಳಿಕೆಗೆ ಬಗ್ಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕರೇನೋ ಅವರ ಆಸೆ ಹೇಳಿಕೊಂಡಿದ್ದಾರೆ. ಆದರೆ ಜನರ ನಾಡಿಮಿಡಿತ ಏನಿದೆಯೋ ಯಾರಿಗೆ ಗೊತ್ತು? ಫಲಿತಾಂಶ ಬಂದ ಮೇಲೆ ಜನರ ಅಭಿಮತ ತಿಳಿಯಲಿದೆ ಎಂದು ಮಾರ್ಮಿಕವಾಗಿ ನುಡಿದರು.

ಮುಂದುವರೆದು ಮಾತನಾಡಿದ ಅವರು, ಸಿದ್ದರಾಯಮಯ್ಯ ಹೇಳಿರುವುದು ಆ ಪಕ್ಷದೊಳಗಿನ ಆಂತರಿಕ ವಿದ್ಯಮಾನಗಳ ಪ್ರತಿಬಿಂಬ. ಏಕೆಂದರೆ ಹೋದಲ್ಲೆಲ್ಲ ಡಿಕೆಶಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎನ್ನುತ್ತಾರೆ. ಮತ್ತೊಂದು ಕಡೆ ಸಿದ್ದರಾಮಯ್ಯ ನಾನೇ ಸಿಎಂ ಹೇಳುತ್ತಾರೆ.

ಆದರೆ ಜನರ ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ. ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿದ್ದಾರೆ. ಆ ಕನಸು ನನಸಾಗುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...