ಸಿಎಂ ಬೊಮ್ಮಾಯಿ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇನೆ: ಬಿಜೆಪಿ ಶಾಸಕ ನೆಹರು ಓಲೇಕಾರ್

Date:

Advertisements
  • ಟಿಕೆಟ್‌ ಕೈ ತಪ್ಪಿದ್ದರಿಂದ ಸಿಎಂ ವಿರುದ್ಧ ಓಲೇಕಾರ್‌ ಆಕ್ರೋಶ
  • ಗವಿಸಿದ್ಧಪ್ಪ ದ್ಯಾಮಣ್ಣವರ ಅವರಿಗೆ ಟಿಕೆಟ್‌ ನೀಡಿದ ಬಿಜೆಪಿ

ಹಾವೇರಿ ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ನೆಹರು ಓಲೇಕಾರ್‌ ಅವರಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ್ದು, ಅಸಮಾಧಾನ ಭುಗಿಲೆದ್ದಿದೆ. ಈ ಬೆನ್ನಲ್ಲೇ, ಮುಖ್ಯಮಂತ್ರಿ ಬೊಮ್ಮಾಯಿ ಮಾಡಿರುವ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುತ್ತೇನೆ ಎಂದು ನೆಹರು ಓಲೇಕಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಏಕವಚನದಲ್ಲೇ ಹರಿಹಾಯ್ದಿರುವ ಓಲೇಕಾರ್, “ಬೊಮ್ಮಾಯಿ ಅವರು ಮಾಡಿರುವ ಹಗರಣಗಳನ್ನು ಬಹಿರಂಗಪಡಿಸುತ್ತೇನೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ನಂತರ ಮತ್ತು ಅದಕ್ಕಿಂತ ಪೂರ್ವದಲ್ಲಿ ಹಲವಾರು ಹಗರಣಗಳನ್ನು ಮಾಡಿದ್ದಾರೆ. ಅವರಲ್ಲಿ ಹಲವಾರು ನ್ಯೂನತೆಗಳಿವೆ. ಮಂದಿನ ದಿನಗಳಲ್ಲಿ ಅವುಗಳನ್ನು ಸಾರ್ವಜನಿಕರ ಗಮನಕ್ಕೆ ತರಲಾಗುವುದು” ಎಂದು ಹೇಳಿದ್ದಾರೆ.

Advertisements

“ಸಂಬಂಧಪಟ್ಟ ಇಲಾಖೆಗೆ ದೂರು ನೀಡಿ, ಹಗರಣಗಳ ಕುರಿತು ತನಿಖೆ ಮಾಡಿಸುವ ಮೂಲಕ ಅವರು ಮಾಡಿರುವ ಘನ ಕಾರ್ಯವನ್ನು ಬೆಳಕಿಗೆ ತರುವ ಕೆಲಸ ಮಾಡುತ್ತೇವೆ” ಎಂದಿದ್ದಾರೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ದೇಶಪೂರ್ವಕವಾಗಿ ಸೇಡು ತೀರಿಸಿಕೊಳ್ಳಲು ನನಗೆ ಟಿಕೆಟ್‌ ತಪ್ಪಿಸಿದ್ದಾರೆ. ಹಿಂದಿನ ಬಾರಿಯೂ ಟಿಕೆಟ್‌ ತಪ್ಪಿಸಲು ಓಡಾಡಿದ್ದರು. ಹಿಂದೆ ಆಗಿರಲಿಲ್ಲ ಹಾಗಾಗಿ ಈ ಬಾರಿ ಮಾಡಿದ್ದಾರೆ. ನನ್ನ ಮುಂದಿನ ರಾಜಕೀಯ ನಿರ್ಧಾರವನ್ನು ಕಾರ್ಯಕರ್ತರ ಜೊತೆಗೆ ಚರ್ಚಿಸಿ ತೆಗೆದುಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಮೂಡಿಗೆರೆ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ರಾಜೀನಾಮೆ

2008ರಲ್ಲಿ ಕ್ಷೇತ್ರ ಮರುವಿಂಗಡಣೆ ಬಳಿಕ ಹಾವೇರಿಯು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿ ಬದಲಾಯಿತು. 2008ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನೆಹರು ಓಲೇಕಾರ್‌ ಶಾಸಕರಾಗಿದ್ದರು. 2013ರಲ್ಲಿ ಕೆಜೆಪಿ ಯಿಂದ ಸ್ಪರ್ಧಿಸಿ ಸೋತಿದ್ದರು. 2018ರ‌ಲ್ಲಿ ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದರು.

ಈ ಬಾರಿ ಬಹುತೇಕ ಕಡೆ ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್‌ ರೈತಪ್ಪಿದ್ದು, ಹಾವೇರಿ ಮೀಸಲು ಕ್ಷೇತ್ರದಿಂದ ಗವಿಸಿದ್ಧಪ್ಪ ದ್ಯಾಮಣ್ಣವರ ಅವರಿಗೆ ಟಿಕೆಟ್‌ ನೀಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X