ಬಿಜೆಪಿ ರೇಟ್ ಕಾರ್ಡ್ ಬಹಿರಂಗ ಪಡಿಸಿದ್ದು ಅವರ ಪಕ್ಷದವರೇ ಹೊರತು ಕಾಂಗ್ರೆಸ್‌ನವರಲ್ಲ: ಡಿಕೆಶಿ

Date:

Advertisements
  • ರೇಟ್ ಕಾರ್ಡ್ ಜಾಹೀರಾತಿನ ವಿಚಾರದಲ್ಲಿ ಡಿಕಿಶಿಗೆ ನೋಟಿಸ್ ನೀಡದ ಆಯೋಗ
  • ಚುನಾವಣಾ ಆಯೋಗಕ್ಕೆ ಸಮರ್ಪಕ ಮಾಹಿತಿ ನೀಡಿದ್ದೇನೆ ಎಂದ ಶಿವಕುಮಾರ್

ಬಿಜೆಪಿ ಪಕ್ಷದವರೇ ಕೊಟ್ಟಿರುವ ಮಾಹಿತಿಯಂತೆ ರಾಜ್ಯ ಸರ್ಕಾರದ ವಿರುದ್ಧ ರೇಟ್ ಕಾರ್ಡ್ ಜಾಹೀರಾತನ್ನು ನಾವು ಬಿಡುಗಡೆ ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಬಿಡುಗಡೆ ಮಾಡಿರುವ ಜಾಹೀರಾತಿನ ರೇಟ್ ಕಾರ್ಡ್‌ನ ಮಾಹಿತಿಯನ್ನು ಬಿಜೆಪಿ ಪಕ್ಷದವರು ಕೊಟ್ಟಿರುವ ಹೇಳಿಕೆಗಳ ಆಧಾರದಿಂದ ಮಾಡಿದ್ದು ಎಂದು ಹೇಳಿದರು.

ಜಾಹೀರಾತಿನ ವಿಚಾರದಲ್ಲಿ ಚುನಾವಣಾ ಆಯೋಗ ನೀಡಿರುವ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್ ನಾನು ಚುನಾವಣಾ ಆಯೋಗಕ್ಕೆ ಈ ಕುರಿತಂತೆ ಉತ್ತರ ಕೊಟ್ಟಿದ್ದೇನೆ. ಈಗ ಆಧಾರ ಏನು ಅಂತ ಕೇಳಿದ್ದಾರೆ.

Advertisements

ಗೂಳಿಹಟ್ಟಿ ಶೇಖರ್, ಬಸನಗೌಡಪಾಟೀಲ್ ಯತ್ನಾಳ್, ವಿಶ್ವನಾಥ್ ಅವರೇ ರೇಟ್ ಕಾರ್ಡ್ ಕೊಟ್ಟಿದ್ದಾರೆ. ಸಿಎಂ ಹುದ್ದೆಗೆ ಎಷ್ಟು, ಮಂತ್ರಿಗಳಿಗೆಷ್ಟು ಇದೆಲ್ಲಾ ರೇಟ್ ಕಾರ್ಡ್ ಕೊಟ್ಟಿದ್ದು ಬಿಜೆಪಿಯವರೇ ಎಂದರು.

ಈ ಸುದ್ದಿ ಓದಿದ್ದೀರಾ?:ಸಿದ್ದರಾಮಯ್ಯ ಸರ್ಕಾರ ಬಂದರೆ ಕಿಸಾನ್ ಸಮ್ಮಾನ್‌ ಯೋಜನೆ ಸೇರಿ…

ಬಿಜೆಪಿ ನಾಯಕರ ಹೇಳಿಕೆ ಮೇಲೆಯೇ ನಾವೂ ಪ್ರಚಾರ ಮಾಡಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೋಮುಗಲಭೆ ಆಗುತ್ತೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಹೀಗಿರುವಾಗ ಅವರಿಗೂ ನೋಟಿಸ್ ಕೊಡಬೇಕು ಅಲ್ವಾ? ಎಂದು ಅವರು ಪ್ರಶ್ನಿಸಿದರು.

ಚುನಾವಣಾ ಆಯೋಗ ನಮಗೆ ನೋಟಿಸ್ ಕೊಟ್ಟಂತೆ ಅಮಿತ್ ಶಾ, ಜೆಪಿ ನಡ್ಡಾಗೂ ನೋಟಿಸ್ ಕೊಡಬೇಕಲ್ಲವೇ ಎಂದು ಶಿವಕುಮಾರ್ ಕೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X