ಬಿಜೆಪಿ ಖಜಾನೆ ತುಂಬಿದ್ದು, ದುಡ್ಡು ಕೊಟ್ಟು ಜನರನ್ನು ಕರೆತರುತ್ತದೆ: ಮಲ್ಲಿಕಾರ್ಜುನ ಖರ್ಗೆ

Date:

  • ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಖರ್ಗೆ
  • ಬಿಜೆಪಿ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದ ಕಾಂಗ್ರೆಸ್ ಅಧ್ಯಕ್ಷರು

ಬಿಜೆಪಿ ಖಜಾನೆ ತುಂಬಿದೆ. ದುಡ್ಡು ಕೊಟ್ಟು ಜನರನ್ನು ಕರೆಸಿ ಉದೋ ಉದೋ ಅನ್ನುತ್ತಾರೆ. ಬಿಜೆಪಿಯಿಂದ ಕರ್ನಾಟಕಕ್ಕೆ ಕೊಡುಗೆ ಏನು? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, “ಬಿಜೆಪಿಯಿಂದ ಕರ್ನಾಟಕಕ್ಕೆ ಕೊಡುಗೆ ಏನು? ಕರ್ನಾಟಕಕ್ಕೆ ಏನಾದರೂ ದೊಡ್ಡ ಕಾರ್ಖಾನೆ ಮಾಡಿಕೊಟ್ಟಿದ್ದೀರಾ? ದೊಡ್ಡ ಹೂಡಿಕೆ ಏನಾದರೂ ಮಾಡಿದ್ದೀರಾ?” ಎಂದು ಪ್ರಶ್ನಿಸಿದ್ದಾರೆ.

“ರಾಜ್ಯದಲ್ಲಿನ ಅಭಿವೃದ್ಧಿ ಮೈಸೂರು ಮಹಾರಾಜರ ಕಾಲದಲ್ಲಿ, ಜವಾಹರ್ ಲಾಲ್ ನೆಹರು ಕಾಲದಲ್ಲಿ ಆಗಿರುವುದು” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪ್ರತಿಯೊಬ್ಬರಿಗೆ 10 ಕೆಜಿ ಸಣ್ಣ ಅಕ್ಕಿ ಕೊಡುತ್ತೇವೆ, 200 ಯೂನಿಟ್ ಉಚಿತ ವಿದ್ಯುತ್ ಕೊಡುತ್ತೇವೆ, ಉಚಿತ ಬಸ್ ಪಾಸ್ ಕೊಡುತ್ತೇವೆ, ಇದೆಲ್ಲಾ ನಮ್ಮ ಗ್ಯಾರಂಟಿ ಯೋಜನೆ. ನಾವು ಏನು ಹೇಳುತ್ತೇವೋ ಅದನ್ನು ಮಾಡುತ್ತೇವೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನ 50 ಅಭ್ಯರ್ಥಿಗಳ ಮೇಲೆ ಐಟಿ ದಾಳಿ ನಡೆಯಲಿದೆ: ಲಕ್ಷ್ಮಿ ಹೆಬ್ಬಾಳ್ಕರ್

“ಈ ಚುನಾವಣೆ ಮಹತ್ವದ ಚುನಾವಣೆ, ನಾವೆಲ್ಲಾ ಒಗ್ಗಟ್ಟಾಗಿ, ಒಮ್ಮತದಿಂದ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ. ನಾವು ಈ ಪ್ರಯತ್ನ ಮಾಡದೇ ಹೋದರೆ ಮುಂದಿನ ಪೀಳಿಗೆಗೆ ಅನ್ಯಾಯವಾಗಲಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

“ಮುಂದಿನ ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗ, ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಒದಗಿಸುವ, ರಾಜ್ಯವನ್ನು ಮತ್ತೆ ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಕೆಲಸ ಮಾಡಲಿದೆ” ಎಂದು ಭರವಸೆ ನೀಡಿದ್ದಾರೆ.

“ಕಾಂಗ್ರೆಸ್ ಏನು ಮಾಡಿದೆ ಎಂದು ಬಿಜೆಪಿಯವರು ಕೇಳುತ್ತಾರೆ, ಆದರೆ ನಾನು ಅವರನ್ನೇ ಕೇಳುತ್ತೇನೆ, ನೀವು ಏನು ಮಾಡಿದ್ದೀರಿ? 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದಿರಿ, ಆ ಉದ್ಯೋಗಗಳು ಎಲ್ಲಿವೆ? ಸರ್ಕಾರಿ ಹುದ್ದೆಗಳನ್ನು ಏಕೆ ಭರ್ತಿ ಮಾಡಿಲ್ಲ? ನಿರುದ್ಯೋಗ ಯಾಕೆ ತಾಂಡವವಾಡುತ್ತಿದೆ?” ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುರೋಹಿತ ಕೂಡಾ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದೆಂದ ಸರ್ಕಾರಿ ಸಹಾಯವಾಣಿ!

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಭಾರತದ ಪೌರತ್ವ ಪಡೆಯುವವರಿಗೆ ಸ್ಥಳೀಯ...

ಮಮತಾ ಕುರಿತು ಅವಹೇಳನ; ಬಿಜೆಪಿ ಸಂಸದ ದಿಲೀಪ್ ಘೋಷ್ ವಿರುದ್ಧ ಎಫ್‌ಐಆರ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ್ದ...

ಕಾಂಗ್ರೆಸ್ ಬ್ಯಾಂಕ್ ಖಾತೆ ನಿರ್ಬಂಧ ಉಲ್ಲೇಖ; ಕೇಜ್ರಿವಾಲ್ ಬಂಧನದ ಬಗ್ಗೆ ಮತ್ತೆ ಹೇಳಿಕೆ ನೀಡಿದ ಅಮೆರಿಕಾ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಅಮೆರಿಕಾ ಹೇಳಿಕೆ ನೀಡಿದ...