ಬಿಜೆಪಿಯ ‘ಜನತಾ ಪ್ರಣಾಳಿಕೆ’ಯನ್ನು ಜನರೇ ಅನುಷ್ಠಾನಕ್ಕೆ ತರಬೇಕು ಹೊರತು ಸರ್ಕಾರವಲ್ಲ: ಸಿದ್ದರಾಮಯ್ಯ ಲೇವಡಿ

Date:

  • ಇಂದಿರಾ ಕ್ಯಾಂಟೀನ್ ಮುಚ್ಚಿ, ಅಟಲ್ ಆಹಾರ ಕೇಂದ್ರ ಪ್ರಾರಂಭಿಸುವುದು ಹಾಸ್ಯಾಸ್ಪದ
  • ನಮ್ಮ ಕಾಲದ ಮನೆಗಳನ್ನು ಪೂರ್ಣಗೊಳಿಸಿ ಅದನ್ನೇ ಸಾಧನೆ ಎಂದು ಹೇಳಿಕೊಳ್ಳುತ್ತಿದೆ

ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ ‘ಜನತಾ ಪ್ರಣಾಳಿಕೆ’ ಎಂದು ಕರೆದಿರುವುದು ಅರ್ಥಪೂರ್ಣ. ಈ ಪ್ರಣಾಳಿಕೆಯನ್ನು ಜನತೆಯೇ ಅನುಷ್ಠಾನಕ್ಕೆ ತರಬೇಕೇ ಹೊರತು ಸರ್ಕಾರ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಬಿಜೆಪಿ ಪ್ರಣಾಳಿಕೆ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, “ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಅನ್ನ, ಅಭಯ, ಅಕ್ಷರ, ಅಭಿವೃದ್ಧಿ ಹಾಗೂ ಆದಾಯಗಳ ಭರವಸೆಗಳನ್ನು ನೀಡಿದೆ. ಕಳೆದ ಮೂರೂವರೆ ವರ್ಷಗಳ ಅವಧಿಯ ರಾಜ್ಯದ ಬಿಜೆಪಿ ಸರ್ಕಾರ ಈ ಐದು ಭರವಸೆಗಳನ್ನು ಜನರಿಂದ ಕಸಿದುಕೊಂಡಿದೆ” ಎಂದಿದ್ದಾರೆ.

“ಪಡಿತರ ಚೀಟಿ ಮೂಲಕ ನೀಡಲಾಗುತ್ತಿದ್ದ 7 ಕಿಲೋ ಅಕ್ಕಿಯನ್ನು ಐದು ಕಿಲೋಗಳಿಗೆ ಇಳಿಸಿ ಅನ್ನವನ್ನು ಕಸಿದುಕೊಂಡಿದೆ. ರಾಜ್ಯದಲ್ಲಿ 10.12 ಲಕ್ಷ ಮಕ್ಕಳು ಶಾಲೆ ತೊರೆಯುವಂತೆ ಮಾಡುವ ಮೂಲಕ ಅಕ್ಷರವನ್ನು ಕಸಿದುಕೊಂಡಿದೆ. ಕೊರೊನಾ ರೋಗ ನಿರ್ವಹಣೆಯಲ್ಲಿನ ನಿರ್ಲಕ್ಷ ಮತ್ತು ಭ್ರಷ್ಟಾಚಾರದಿಂದಾಗಿ ಜನತೆಯ ಆರೋಗ್ಯ ಕಸಿದುಕೊಂಡಿದೆ. ಸರ್ಕಾರದ ಪ್ರತಿ ಇಲಾಖೆಯಲ್ಲಿಯೂ 40% ಕಮಿಷನ್ ಹಾವಳಿಯ ಮೂಲಕ ಅಭಿವೃದ್ಧಿ ಕಸಿದುಕೊಂಡಿದೆ” ಎಂದು ಟೀಕಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಜ್ಯದ ಗೃಹಸಚಿವರ ಅದಕ್ಷತೆ ಮತ್ತು ಭ್ರಷ್ಟತೆಯಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗಿರುವುದು ಮಾತ್ರವಲ್ಲ, ರೌಡಿ-ಗೂಂಡಾಗಳೆಲ್ಲ ಮುಕ್ತವಾಗಿ ಓಡಾಡಲು ಸ್ವಾತಂತ್ರ್ಯ ಪಡೆದಿರುವ ಕಾರಣ ಜನತೆಯ ಭದ್ರತೆಯ ಅಭಯವನ್ನೂ ಕಸಿದುಕೊಂಡಿದೆ. ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ₹410 ರಿಂದ  ₹1105ಕ್ಕೆ ಏರಿಸಿರುವ ಮತ್ತು ಅಡುಗೆ ಅನಿಲದ ಮೇಲಿನ ಸಬ್ಸಿಡಿ ರದ್ದುಪಡಿಸಿರುವ  ಬಿಜೆಪಿ ಈಗ ಅಡುಗೆ ಅನಿಲದ ಮೂರು ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುವುದಾಗಿ ಭರವಸೆ ನೀಡುವ ಮೂಲಕ ರಾಜ್ಯದ ಜನರ ಕಿವಿಗೆ ಹೂ ಇಟ್ಟಿದೆ” ಎಂದು ಕಿಡಿ ಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

“ಕಾಂಗ್ರೆಸ್ ಪಕ್ಷ ತನ್ನ ಅಧಿಕಾರವಧಿಯಲ್ಲಿ ರಾಜ್ಯದಾದ್ಯಂತ ಪ್ರಾರಂಭಿಸಿದ್ದ 600 ಇಂದಿರಾ ಕ್ಯಾಂಟೀನ್‌ಗಳನ್ನು ರಾಜಕೀಯ ದ್ವೇಷಾಸೂಯೆಯಿಂದ ಮುಚ್ಚಿರುವ ಬಿಜೆಪಿ, ಈಗ ಅಟಲ್ ಆಹಾರ ಕೇಂದ್ರಗಳನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿರುವುದೇ  ಹಾಸ್ಯಾಸ್ಪದ. ಪಡಿತರ ಚೀಟಿಗಳ ಮೂಲಕ ನೀಡಲಾಗುತ್ತಿದ್ದ ಏಳು ಕಿಲೋ ಉಚಿತ ಅಕ್ಕಿಯನ್ನು ಐದು ಕಿಲೋಗಳಿಗೆ ಇಳಿಸಿದ್ದ ಬಿಜೆಪಿ ಐದು ಕಿಲೋ ಸಿರಿಧಾನ್ಯ ಕೊಡುತ್ತೇವೆ ಎಂದು ಹೇಳಿರುವುದು ಇನ್ನೊಂದು ವಿಪರ್ಯಾಸ” ಎಂದು ಕುಟುಕಿದ್ದಾರೆ.

“ಹತ್ತು ಲಕ್ಷ ನಿವೇಶನಗಳನ್ನು ವಿತರಿಸುವ ಭರವಸೆ ನೀಡಿರುವ ಇದೇ ಬಿಜೆಪಿ ಕಳೆದ ಮೂರೂವರೆ ವರ್ಷಗಳ ಅವಧಿಯಲ್ಲಿ ಒಂದೇ ಒಂದು ಹೊಸಮನೆ ನಿರ್ಮಿಸಿಲ್ಲ. ಕಾಂಗ್ರೆಸ್ ಪಕ್ಷ ತನ್ನ ಅಧಿಕಾರವಧಿಯ ಐದು ವರ್ಷಗಳಲ್ಲಿ ಹದಿನೈದು ಲಕ್ಷ ಮನೆಗಳನ್ನು ನಿರ್ಮಾಣ ಮಾಡಿತ್ತು. ಬಿಜೆಪಿ ಸರ್ಕಾರ ನಿರ್ಮಾಣ ಹಂತದಲ್ಲಿದ್ದ ನಮ್ಮ ಕಾಲದ ಮನೆಗಳನ್ನು ಪೂರ್ಣಗೊಳಿಸಿ ಅದನ್ನೇ ಸಾಧನೆ ಎಂದು ಹೇಳಿಕೊಳ್ಳುತ್ತಿದೆ” ಎಂದು ಹರಿಹಾಯ್ದಿದ್ದಾರೆ.

“ಸಣ್ಣ ಕೈಗಾರಿಕೆಗಳು ಮತ್ತು ಐಟಿಐಗಳ ನಡುವೆ ಒಪ್ಪಂದ ಮಾಡಿಕೊಂಡು ಯುವ ಪ್ರತಿಭೆಗಳಿಗೆ ಶಿಕ್ಷಣ ಮತ್ತು ಉದ್ಯೋಗದ ಅವಕಾಶ ಕಲ್ಪಿಸುವ ‘ಸಮನ್ವಯ’ ಯೋಜನೆಯ ಭರವಸೆಯನ್ನು ಬಿಜೆಪಿ ನೀಡಿದೆ. 2019-2022ರ ನಡುವಿನ ಅವಧಿಯಲ್ಲಿ ನಿರುದ್ಯೋಗದ ಪ್ರಮಾಣ ಶೇ. 22.9ರಷ್ಟು ಹೆಚ್ಚಾಗಿದೆ. 2021ರ ಅವಧಿಯಲ್ಲಿ ರಾಜ್ಯದಲ್ಲಿ ನಿರುದ್ಯೋಗದ ಕಾರಣದಿಂದಾಗಿ 1,129 ಯುವಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಕಳೆದ ಮೂರು ವರ್ಷಗಳಲ್ಲಿ 1258 ಕಂಪೆನಿಗಳು ರಾಜ್ಯದಲ್ಲಿ ಮುಚ್ಚಿ 60,000 ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಸಾರ್ವಜನಿಕ ಕ್ಷೇತ್ರದ 13 ಉದ್ಯಮಗಳು ಮುಚ್ಚಿವೆ. ಈ ಅನಾಹುತಗಳಿಗೆಲ್ಲ ಕಾರಣವಾದ ಬಿಜೆಪಿ ಈಗ ಸಮನ್ವಯ ಎಂಬ ಹೊಸ ಯೋಜನೆಯ ಭರವಸೆ ನೀಡಿದರೆ ನಂಬುವವರು ಯಾರು” ಎಂದು ಪ್ರಶ್ನಿಸಿದ್ದಾರೆ.

“ಐಎಎಸ್/ ಕೆಎಎಸ್/ ಬ್ಯಾಂಕಿಂಗ್/ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳ ಪರೀಕ್ಷಾ ತಯಾರಿಯ ಕೋಚಿಂಗ್ ಪಡೆಯಲು ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದೆ. ಕಳೆದ ಮೂರೂವರೆ ವರ್ಷಗಳಲ್ಲಿ ಪಿಎಸ್‌ಐ, ಕೆಪಿಟಿಸಿಎಲ್ ನೇಮಕಾತಿ ಸೇರಿದಂತೆ ಉದ್ಯೋಗ ನೇಮಕಾತಿಯ ಎಲ್ಲ ನಿರ್ಧಾರಗಳು ಅಂತಿಮವಾಗಿ ಲಂಚ/ ಕಮಿಷನ್ ಪಡೆದಿರುವ ಹಗರಣಗಳಾಗಿವೆ” ಎಂದು ಟೀಕಿಸಿದ್ದಾರೆ.

“ಮುನ್ಸಿಪಲ್ ಕಾರ್ಪೋರೇಷನ್ ವ್ಯಾಪ್ತಿಯಲ್ಲಿ 400 ‘ನಮ್ಮ ಕ್ಲಿನಿಕ್’ಗಳನ್ನು ತೆರೆಯಲಾಗುವುದು ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಈ ಯೋಜನೆಯನ್ನು 2022-23ರ ಬಜೆಟ್ ನಲ್ಲಿ ಬಿಜೆಪಿ ಸರ್ಕಾರ ಘೋಷಿಸಿದ್ದರೂ ಈವರೆಗೆ ನೂರು  ‘ನಮ್ಮ ಕ್ಲಿನಿಕ್‌’ಗಳನ್ನೂ ತೆರೆದಿಲ್ಲ” ಎಂದು ಬಿಜೆಪಿ ಪ್ರಣಾಳಿಕೆ ಬಗ್ಗೆ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...