ಬೊಮ್ಮಾಯಿಗೆ ಮುಂದಿನ 5 ವರ್ಷಗಳ ಕಾಲ ಮತ್ತೆ ಸಿಎಂ ಅವಕಾಶ: ಜೆ ಪಿ ನಡ್ಡಾ

Date:

  • ಬೊಮ್ಮಾಯಿ ಅವರಿಗೆ ಕಡಿಮೆ ಸಮಯ ಸಿಕ್ಕಿದೆ ಎಂದ ಸುದೀಪ್‌
  • ʼಬೊಮ್ಮಾಯಿ ಸರ್ಕಾರದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗಿದೆʼ

ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ನಾಮಪತ್ರ ಕೇವಲ ಶಾಸಕ ಸ್ಥಾನಕ್ಕೆ ಮಾತ್ರವಲ್ಲ, ಮುಂದಿನ ಐದು ವರ್ಷಗಳ ಕಾಲ ಮತ್ತೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹೇಳಿದರು.

ಬುಧವಾರ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬೊಮ್ಮಾಯಿ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಬೃಹತ್ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.

“ಬೊಮ್ಮಾಯಿ ಅವರು ಬಡವರಿಗೆ 12 ಸಾವಿರ ಮನೆ ನಿರ್ಮಾಣ ಹಾಗೂ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಸುದೀಪ್ ಅವರು ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯ ಮೆಚ್ಚಿದ್ದಾರೆ. ಅಲ್ಲದೇ ಬೊಮ್ಮಾಯಿ ಅವರಿಗೆ ಕಡಿಮೆ ಸಮಯ ಸಿಕ್ಕಿದೆ ಇನ್ನಷ್ಟು ಸಮಯ ಬೇಕಿದೆ ಎಂದೂ ಸುದೀಪ್‌ ಬಯಕೆ ವ್ಯಕ್ತಪಡಿಸಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾಂಗ್ರೆಸ್ ಅಂದ್ರೆ ಕಮಿಷನ್, ಕರಪ್ಷನ್

ಕಾಂಗ್ರೆಸ್ ಅಂದ್ರೆ ಕರಪ್ಷನ್, ಕಮಿಷನ್, ಕ್ರಿಮಿನಲೈಸೇಷನ್. ಕಾಂಗ್ರೆಸ್ ನಾಯಕರು ನಾಯಕರಲ್ಲ. ಅವರು ಎಟಿಎಂ ಮಷಿನ್ ನಡೆಸೋ ಜನರು. ಎಟಿಎಂ ಅಂದರೆ ಆಟೋಮ್ಯಾಟಿಕ್ ಟ್ರಾನ್ಸಫರ್ ಆಫ್ ಮನಿ. ಕಾಂಗ್ರೆಸ್ ಅವರನ್ನು ಇಲ್ಲಿ ಕೂರಿಸಿದರೆ ಮೋದಿ ಅವರು ರಾಜ್ಯಕ್ಕೆ ಕಳಿಸಿದ ಹಣವನ್ನು ಇವರು ಡೆಲ್ಲಿ ಕಾಂಗ್ರೆಸ್‌ಗೆ ಕಳುಹಿಸುತ್ತಾರೆ. ಇಂತಹ ಸರ್ಕಾರ ನಿಮಗೆ ಬೇಕಾ? ಮೋದಿ ಕಳಿಸೋ ಹಣ ರಾಜ್ಯದ ಅಭಿವೃದ್ಧಿಗೆ ಸದ್ಬಳಕೆ ಆಗಬೇಕು ಅಂದರೆ ನೀವು ಬಿಜೆಪಿಗೆ ಮತ ಹಾಕಿ” ಎಂದು ಜೆ ಪಿ ನಡ್ಡಾ ಹೇಳಿದರು.

ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಚಲನಚಿತ್ರ ನಟ ಸುದೀಪ್, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಚಾಮರಾಜನಗರದಲ್ಲಿ ವಾಟಾಳ್‌ ಸ್ಪರ್ಧೆ; ಸೋಮಣ್ಣಗೆ ಮತ್ತೊಂದು ಸವಾಲು!

ರಾಜ್ಯದಲ್ಲಿ ಶಾಂತ ವಾತಾವರಣ ಇದೆ

“ಬಿಜೆಪಿ ಸರ್ಕಾರ ಪಿಎಫ್ಐ ಬ್ಯಾನ್ ಮಾಡಿದೆ. ಸಿದ್ದರಾಮಯ್ಯ ಪಿಎಫ್ಐ ಬ್ಯಾನ್ ಮಾಡಿದ್ದನ್ನು ಹಿಂಪಡೆಯುತ್ತೇವೆ ಎಂದು ಹೇಳುತ್ತಿದ್ದಾರೆ. ಪಿಎಫ್ಐ ಬ್ಯಾನ್ ಮುಂದುವರೆಯಬೇಕು ಅಂದರೆ ಕಮಲದ ಗುರುತಿಗೆ ಮತ ನೀಡಿ. ಬೊಮ್ಮಾಯಿ ಸರ್ಕಾರದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗಿದೆ. ಇಂದು ರಾಜ್ಯದಲ್ಲಿನ ಅನೇಕ ಕ್ರಿಮಿನಲ್‌ಗಳು ಜೈಲಿನಲ್ಲಿದ್ದಾರೆ. ರಾಜ್ಯದಲ್ಲಿ ಶಾಂತಿ ಮತ್ತು ವಿಕಾಸಕ್ಕಾಗಿ ಕಮಲಕ್ಕೆ ಮತ ಹಾಕಬೇಕು. ಬೊಮ್ಮಾಯಿ ಅವರನ್ನು ನೀವು ಈಗಾಗಲೇ ಗೆಲ್ಲಿಸಿದ್ದೀರಿ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಮಸ್ಲಿಮರನ್ನು ಒಬಿಸಿಗೆ ಸೇರಿಸಿದ್ದು ನಾಲ್ವಡಿ ಕೃಷ್ಣರಾಜ ಒಡೆಯರ್‌: ಮೋದಿಗೆ ದ್ವಾರಕಾನಾಥ್ ಇತಿಹಾಸ ಪಾಠ

"ಒಬಿಸಿಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುವ ಸಂಚನ್ನು ಮೋದಿ ರೂಪಿಸಿದ್ದಾರೆ, ಮಂಡಲ್‌ ಆಯೋಗ...

ಹಾಸನದ ‘ಪೆನ್‌ಡ್ರೈವ್’ ನಮಗೂ ತಲುಪಿದೆ; ಎಸ್ಐಟಿ ರಚಿಸಲು ಸಿಎಂಗೆ ಮನವಿ: ಮಹಿಳಾ ಆಯೋಗ

ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಸುದ್ದಿ ಮಾಡುತ್ತಿರುವ ಹಾಸನದ ಪೆನ್‌ಡ್ರೈವ್‌ ಬಗ್ಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...