ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಉಮೇದುವಾರಿಕೆ ಸಲ್ಲಿಸಿ ಗಮನ ಸೆಳೆದ ಅಭ್ಯರ್ಥಿಗಳು

Date:

  • ರಮೇಶ್‌ ಜಾರಕಿಹೊಳಿ, ಮುರುಗೇಶ ನಿರಾಣಿ, ಕೆ ಸುಧಾಕರ್‌ರಿಂದ ನಾಮಪತ್ರ ಸಲ್ಲಿಕೆ
  • ಹಲವೆಡೆ ದೇವರ ಮೋರೆ ಹೋಗಿ, ನಂತರ ನಾಮಪತ್ರ ಸಲ್ಲಿಸುತ್ತಿರುವ ಅಭ್ಯರ್ಥಿಗಳು

ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು (ಏಪ್ರಿಲ್‌ 13) ಅಧಿಸೂಚನೆ ಹೊರಡಿಸಲಾಗಿದ್ದು, ಇಂದಿನಿಂದಲೇ ರಾಜ್ಯದ ಹಲವೆಡೆ ನಾಮಪತ್ರ ಸಲ್ಲಿಕೆ ಕೂಡ ಆರಂಭವಾಗಿದೆ.

- Advertisement -

ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಕೆಲವರು ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ. ಗೋಕಾಕ್‌ ಕ್ಷೇತ್ರದಲ್ಲಿ ಮಾಜಿ ಸಚಿವ, ಶಾಸಕ ರಮೇಶ್‌ ಜಾರಕಿಹೊಳಿ, ಬೀಳಗಿ ಕ್ಷೇತ್ರದಲ್ಲಿ ಮುರುಗೇಶ ನಿರಾಣಿ, ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಕೂಡ ಚಿಕ್ಕಬಳ್ಳಾಪುರದಲ್ಲಿ ಹಾಗೂ ತೇರದಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿದ್ದು ಸವದಿ ಸೇರಿದಂತೆ ರಾಜ್ಯದ ನಾನಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಗುರುವಾರ ಗೋಕಾಕ್ ಪಟ್ಟಣದ ತಹಸೀಲ್ದಾರ್ ಕಚೇರಿಗೆ ತೆರಳಿದ ರಮೇಶ್ ಜಾರಕಿಹೊಳಿ, ಗೋಕಾಕ್ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಗೀತಾ ಕೌಲಗಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಬೀಳಗಿ ವಿಧಾನಸಭಾ ಕ್ಷೇತ್ರದಲ್ಲಿಯೂ ಸಚಿವ ಮುರುಗೇಶ್‌ ನಿರಾಣಿ ನಾಮಪತ್ರ ಸಲ್ಲಿಸಿದ್ದು, ಬೀಳಗಿ ಪಟ್ಟಣದ ತಹಶೀಲ್ದಾರ್‌ ಕಚೇರಿಗೆ ತೆರಳಿ ಬೀಳಗಿ ಕ್ಷೇತ್ರದ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಒಲ್ಲದ ಮನಸ್ಸಿನಲ್ಲೇ ವರುಣಾದೆಡೆಗೆ ಸೋಮಣ್ಣ; ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿ

ಇದಕ್ಕೂ ಮೊದಲು ನಿರಾಣಿ ಅವರು ಬೀಳಗಿ ಪಟ್ಟಣದ ಪ್ರಸಿದ್ಧ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ನಿರಾಣಿ ಜೊತೆಗೆ ಬಾಗಲಕೋಟೆ ಸಂಸದ ಪಿ ಸಿ ಗದ್ದಿಗೌಡರ, ವಿಧಾನ ಪರಿಷತ್ ಶಾಸಕ ಹಣಮಂತ ನಿರಾಣಿ, ಸ್ಥಳೀಯ ಮುಖಂಡರಾದ ಈರಣ್ಣ ಗಿಡ್ಡಪ್ಪಗೋಳ, ಮಲ್ಲಿಕಾರ್ಜುನ ಅಂಗಡಿ, ಬಿ ಜಿ ರೇವಡಿಗಾರ, ಶಂಭೋಜಿ ಸೇರಿದಂತೆ ಇತರರು ಇದ್ದರು.

ಇನ್ನು ತೇರದಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿದ್ದು ಸವದಿ ಕೂಡ ಬನಹಟ್ಟಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಕೂಡ ಚಿಕ್ಕಬಳ್ಳಾಪುರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಇತ್ತ, ರಾಮನಗರ ಜಿಲ್ಲೆಯ ಮಾಗಡಿಯಲ್ಲಿಯೂ ಬಿಜೆಪಿ ಅಭ್ಯರ್ಥಿ ಪ್ರಸಾದ್‌ ಗೌಡ ನಾಮಪತ್ರ ಸಲ್ಲಿಸಿದ್ದಾರೆ. ಮಾಗಡಿ ಕಲ್ಯಾಗೇಟ್ ಗಣೇಶ ದೇವಸ್ಥಾನದಿಂದ ತಾಲೂಕು ಕಚೇರಿವರೆಗೂ ಬೃಹತ್‌ ಜಾಥಾ ನಡೆಸಿದ ಬಳಿಕ ಪ್ರಸಾದ್‌ ಗೌಡ ಉಮೇದುವಾರಿಕೆ ಸಲ್ಲಿಸಿದ್ದು, ಈ ವೇಳೆ ಸಚಿವ ಸಿ ಎನ್‌ ಅಶ್ವತ್ಥ ನಾರಾಯಣ ಕೂಡ ಇದ್ದರು.

ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಸೌತ್ ಎಂಡ್ ಸರ್ಕಲ್ ಬಳಿ ಇರುವ ರಿಟರ್ನಿಂಗ್ ಆಫೀಸ್ ಕಚೇರಿಯಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಜಯನಗರದ ಅಶೋಕ ಪಿಲ್ಲರ್ ಸರ್ಕಲ್ ಬಳಿ ಆತ್ಮೀಯರ ಸಭೆ ನಡೆಸಿ, ರಿಟರ್ನಿಂಗ್ ಆಫೀಸರ್ ಕಚೇರಿಗೆ ಪಾದಯಾತ್ರೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...