ದ್ವಿತೀಯ ಪಿಯು ಫಲಿತಾಂಶ | ಅನುತ್ತೀರ್ಣ ವಿದ್ಯಾರ್ಥಿ ಆತ್ಮಹತ್ಯೆ

Date:

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣಳಾದ ಕಾರಣದಿಂದಾಗಿ ಮನನೊಂದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಮೃತ ಯುವತಿಯನ್ನು ಜೆಎಸ್‌ಎಸ್ ಮಹಿಳಾ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವಿಜಯಲಕ್ಷ್ಮಿ (18) ಎಂದು ಗುರುತಿಸಲಾಗಿದೆ. ಆಕೆ ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ತಿಳಿದು ಬಂದಿದೆ. ಚಾಮರಾಜನಗರದ ಹಾಸ್ಟೆಲ್‌ನಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ.

ಮಾ.9ರಿಂದ ಆರಂಭಗೊಂಡ ಪರೀಕ್ಷೆಯ ಫಲಿತಾಂಶ ನಡೆದ ಪರೀಕ್ಷೆಗಳ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಯಿತು. ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಗ್ರಾಮದ ನಿವಾಸಿ ವಿಜಯಲಕ್ಷ್ಮಿ ಎನ್ನಲಾಗಿದೆ. ‘ಕಂಪ್ಯೂಟರ್ ಸೈನ್ಸ್’ ವಿದ್ಯಾರ್ಥಿನಿಯಾಗಿದ್ದ ವಿಜಯಲಕ್ಷ್ಮಿ, ಪರೀಕ್ಷೆ ಮುಗಿದ ನಂತರ ಸಿಇಟಿ ಸಿದ್ಧತೆ ಮಾಡಿಕೊಳ್ಳುವುದಕ್ಕಾಗಿ ಹಾಸ್ಟೆಲ್ ನಲ್ಲಿದ್ದಳು. ಶುಕ್ರವಾರ ಬೆಳಿಗ್ಗೆ ಫಲಿತಾಂಶ ನೋಡಿದ್ದಾರೆ. ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣಗೊಂಡಿರುವುದು ತಿಳಿಯುತ್ತಿದ್ದಂತೆಯೇ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗೊತ್ತಾಗಿದೆ.

ಈ ಸುದ್ದಿ ಓದಿದ್ದೀರಾ?: ದ್ವಿತೀಯ ಪಿಯುಸಿ | ಫಲಿತಾಂಶ ಹೇಗೆ ಬರಲಿ ಸ್ವೀಕರಿಸುವ ಮನೋಭಾವವಿರಲಿ

ನೆನಪಿಡಿ: ಬದುಕಿನ ಪರೀಕ್ಷೆ ಗೆಲ್ಲುವುದು ಮುಖ್ಯ. ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ: ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸೆಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆ : ರಾಜ್ಯ ಸರ್ಕಾರದ ನಿರ್ಧಾರ

ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನ ಹೆಚ್ಚಿಸುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೆಲ...

ಎನ್‌ಇಪಿಯಿಂದ ಕನ್ನಡವನ್ನೇ ಮರೆತುಬಿಡುವ ಅಪಾಯ: ಸಚಿವ ಮಧು ಬಂಗಾರಪ್ಪ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸುವ ಮೂಲಕ ಹಿಂದಿ ಭಾಷೆ...

ಕೇಂದ್ರ ಸರ್ಕಾರದ ‘ರಗಳೆ’ | ವಿದ್ಯಾರ್ಥಿ ವೇತನಕ್ಕೆ ‘ಕಡ್ಡಾಯ ಬಯೋಮೆಟ್ರಿಕ್’ ಆದೇಶ; ವಿದ್ಯಾರ್ಥಿಗಳು ಸುಸ್ತು!

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದ ಲಕ್ಷಾಂತರ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಾಗೂ ಸಂಸ್ಥೆಗಳ...

ಶಿವಮೊಗ್ಗ | ಬಿಸಿಯೂಟದ ಜೊತೆ ಮೊಟ್ಟೆ ವಿತರಣೆ; ಆಗಸ್ಟ್‌ 18ರಂದು ಚಾಲನೆ

ರಾಜ್ಯದಲ್ಲಿ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆಯನ್ನು ನೀಡಲಾಗುತ್ತದೆ....