ಬಾಗೇಪಲ್ಲಿ | ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸಿಗದೆ ಮರೀಚಿಕೆ:ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾಡಿಲ್ಲ ಎಂಬುದು ಸಾರ್ವಜನಿಕರ ಆರೋಪ

Date:

ಪಟ್ಟಣದ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ಚಿಕಿತ್ಸೆಗಾಗಿ ಬರುವ ಜನಸಾಮಾನ್ಯರಿಗೆ ಆರೋಗ್ಯ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಸಿಬ್ಬಂದಿ ಕೊರತೆಯಿಂದಾಗಿ ಕೌಂಟರ್‌ಗಳಲ್ಲಿ ಚೀಟಿ ಪಡೆಯಲು ರೋಗಿಗಳು ಉದ್ದದ ಸಾಲಿನಲ್ಲಿ ತಾಸುಗಟ್ಟಲೇ ಗಂಟೆ ನಿಲ್ಲುವ ಅನಿವಾರ್ಯತೆ ಎದುರಾಗಿದೆ.

- Advertisement -

ಆಸ್ಪತ್ರೆ ಮುಂದೆ ಪಾರ್ಕಿಂಗ್ ಸಮಸ್ಯೆ, ರೋಗಿಗಳ ಸಂಚಾರಕ್ಕೆ ತೊಂದರೆಯಾಗಿದೆ. ಡಿ ಗ್ರೂಪ್ ನೌಕರರ ಕೊರತೆಯಿಂದಾಗಿ ಆಸ್ಪತ್ರೆಗೆ ಬರುವ ಹಿರಿಯ ನಾಗರಿಕರು ಮತ್ತು ಗಂಭೀರ ಸಮಸ್ಯೆಯುಳ್ಳ ರೋಗಿಗಳನ್ನು ಅವರ ಸಂಬಂಧಿಕರೇ ಸ್ಟ್ರೆಚರ್‌ನಲ್ಲಿ ಕೂರಿಸಿಕೊಂಡು ಅಥವಾ ಮಲಗಿಸಿಕೊಂಡು ಕರೆದೊಯ್ಯುವ ಪರಿಸ್ಥಿತಿ ಎದುರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ತಾಲ್ಲೂಕಿನಲ್ಲಿ 3 ಹೋಬಳಿಗಳು 16 ಗ್ರಾಮ ಪಂಚಾಯಿತಿಗಳಿವೆ. ಮಿಟ್ಟೇಮರಿ, ಗೂಳೂರು, ಕಸಬಾ, ಪಾತಪಾಳ್ಯ ಹೋಬಳಿಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇದೆ. ಇದರಿಂದ ರೋಗಿಗಳು ತಾಲ್ಲೂಕು ಕೇಂದ್ರದ ಸಾರ್ವಜನಿಕ ಆಸ್ಪತ್ರೆಗೆ ಹೆಚ್ಚಾಗಿ ಬರುತ್ತಾರೆ. ಇದರಿಂದಾಗಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ, ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಮಾತ್ರ ಮರೀಚಿಕೆಯಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಜೂರಾದ 86 ಹುದ್ದೆಗಳ ಪೈಕಿ 36 ಹುದ್ದೆಗಳು ಭರ್ತಿಯಾಗಿವೆ. ಉಳಿದಂತೆ 50 ಹುದ್ದೆಗಳು ಖಾಲಿ ಇವೆ. ರೇಡಿಯಾಲಜಿ ತಜ್ಞರು, ಸಿಎಂಒ, ದ್ವಿತೀಯ ದರ್ಜೆ ಸಹಾಯಕರು-1, ಹಿರಿಯ ಶುಶ್ರೂಷಾಧಿಕಾರಿ-2, ಶುಶ್ರೂಷಾಧಿಕಾರಿ-6, ಕಿರಿಯ ವೈದ್ಯಕೀಯ ರೇಡಿಯಾಲಜಿಕಲ್ ಟೆಕ್ನಾಲಾಜಿಸ್ಟ್-2, ಕಿರಿಯ ಫಾರ್ಮಸಿ ಅಧಿಕಾರಿ-2, ವಾಹನ ಚಾಲಕರು-1 ಖಾಲಿ ಹುದ್ದೆಗಳು ಇವೆ. ಇನ್ನು ಮಂಜೂರಾದ 33 ಡಿ ಗ್ರೂಪ್ ನೌಕರರ ಪೈಕಿ ಒಬ್ಬರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, 32 ಹುದ್ದೆಗಳು ಭರ್ತಿಯಾಗಬೇಕಿದೆ ಎಂದು ಅಂಕಿಅಂಶಗಳು ತಿಳಿಸುತ್ತವೆ.

ವೈದ್ಯರು ಸಕಾಲದಲ್ಲಿ ಆರೋಗ್ಯ ಚಿಕಿತ್ಸೆ ನೀಡದೆ ಇತ್ತೀಚೆಗೆ ಇಬ್ಬರು ಮೃತಪಟ್ಟಿದ್ದಾರೆ. ಆದಾಗ್ಯೂ, ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ರೋಗಿಗಳು ದೂರಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಬೇರೆ ಜಾಗದಲ್ಲಿ ತಾಯಿ, ಮಕ್ಕಳ ಆಸ್ಪತ್ರೆ ಆರಂಭಕ್ಕೆ ಹಲವು ಬಾರಿ ಸಾರ್ವಜನಿಕರು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಈ ಸಂಬಂಧ ಆರೋಗ್ಯ ಸಚಿವರಿಗೂ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೆ ತಾಯಿ, ಮಕ್ಕಳ ಆಸ್ಪತ್ರೆ ಆರಂಭವಾಗಿಲ್ಲ. ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾಡಿಲ್ಲ ಎಂಬುದು ಸಾರ್ವಜನಿಕರ ಆರೋಪಿಸಿದ್ದಾರೆ.

ಆಸ್ಪತ್ರೆಯಲ್ಲಿ ರಾತ್ರಿ ವೇಳೆ ವೈದ್ಯರು, ಶುಶ್ರೂಷಕರು ಇದ್ದು ಬರುವ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ರೋಗಿಗಳನ್ನು ಸಾಗಿಸಲು ಡಿ ಗ್ರೂಪ್ ನೌಕರರು ಇರಬೇಕು ಎಂದು ಮಹಿಳೆ ಕೃಷ್ಣವೇಣಿ ಒತ್ತಾಯಿಸಿದರು.

ಬಾಗೇಪಲ್ಲಿ:-ಪಟ್ಟಣದ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ಚಿಕಿತ್ಸೆಗಾಗಿ ಬರುವ ಜನಸಾಮಾನ್ಯರಿಗೆ ಆರೋಗ್ಯ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಸಿಬ್ಬಂದಿ ಕೊರತೆಯಿಂದಾಗಿ ಕೌಂಟರ್‌ಗಳಲ್ಲಿ ಚೀಟಿ ಪಡೆಯಲು ರೋಗಿಗಳು ಉದ್ದದ ಸಾಲಿನಲ್ಲಿ ತಾಸುಗಟ್ಟಲೇ ಗಂಟೆ ನಿಲ್ಲುವ ಅನಿವಾರ್ಯತೆ ಎದುರಾಗಿದೆ.

ಆಸ್ಪತ್ರೆ ಮುಂದೆ ಪಾರ್ಕಿಂಗ್ ಸಮಸ್ಯೆ, ರೋಗಿಗಳ ಸಂಚಾರಕ್ಕೆ ತೊಂದರೆಯಾಗಿದೆ. ಡಿ ಗ್ರೂಪ್ ನೌಕರರ ಕೊರತೆಯಿಂದಾಗಿ ಆಸ್ಪತ್ರೆಗೆ ಬರುವ ಹಿರಿಯ ನಾಗರಿಕರು ಮತ್ತು ಗಂಭೀರ ಸಮಸ್ಯೆಯುಳ್ಳ ರೋಗಿಗಳನ್ನು ಅವರ ಸಂಬಂಧಿಕರೇ ಸ್ಟ್ರೆಚರ್‌ನಲ್ಲಿ ಕೂರಿಸಿಕೊಂಡು ಅಥವಾ ಮಲಗಿಸಿಕೊಂಡು ಕರೆದೊಯ್ಯುವ ಪರಿಸ್ಥಿತಿ ಎದುರಾಗಿದೆ.

ತಾಲ್ಲೂಕಿನಲ್ಲಿ 3 ಹೋಬಳಿಗಳು 16 ಗ್ರಾಮ ಪಂಚಾಯಿತಿಗಳಿವೆ. ಮಿಟ್ಟೇಮರಿ, ಗೂಳೂರು, ಕಸಬಾ, ಪಾತಪಾಳ್ಯ ಹೋಬಳಿಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇದೆ. ಇದರಿಂದ ರೋಗಿಗಳು ತಾಲ್ಲೂಕು ಕೇಂದ್ರದ ಸಾರ್ವಜನಿಕ ಆಸ್ಪತ್ರೆಗೆ ಹೆಚ್ಚಾಗಿ ಬರುತ್ತಾರೆ. ಇದರಿಂದಾಗಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ, ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಮಾತ್ರ ಮರೀಚಿಕೆಯಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಜೂರಾದ 86 ಹುದ್ದೆಗಳ ಪೈಕಿ 36 ಹುದ್ದೆಗಳು ಭರ್ತಿಯಾಗಿವೆ. ಉಳಿದಂತೆ 50 ಹುದ್ದೆಗಳು ಖಾಲಿ ಇವೆ. ರೇಡಿಯಾಲಜಿ ತಜ್ಞರು, ಸಿಎಂಒ, ದ್ವಿತೀಯ ದರ್ಜೆ ಸಹಾಯಕರು-1, ಹಿರಿಯ ಶುಶ್ರೂಷಾಧಿಕಾರಿ-2, ಶುಶ್ರೂಷಾಧಿಕಾರಿ-6, ಕಿರಿಯ ವೈದ್ಯಕೀಯ ರೇಡಿಯಾಲಜಿಕಲ್ ಟೆಕ್ನಾಲಾಜಿಸ್ಟ್-2, ಕಿರಿಯ ಫಾರ್ಮಸಿ ಅಧಿಕಾರಿ-2, ವಾಹನ ಚಾಲಕರು-1 ಖಾಲಿ ಹುದ್ದೆಗಳು ಇವೆ. ಇನ್ನು ಮಂಜೂರಾದ 33 ಡಿ ಗ್ರೂಪ್ ನೌಕರರ ಪೈಕಿ ಒಬ್ಬರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, 32 ಹುದ್ದೆಗಳು ಭರ್ತಿಯಾಗಬೇಕಿದೆ ಎಂದು ಅಂಕಿಅಂಶಗಳು ತಿಳಿಸುತ್ತವೆ.

ವೈದ್ಯರು ಸಕಾಲದಲ್ಲಿ ಆರೋಗ್ಯ ಚಿಕಿತ್ಸೆ ನೀಡದೆ ಇತ್ತೀಚೆಗೆ ಇಬ್ಬರು ಮೃತಪಟ್ಟಿದ್ದಾರೆ. ಆದಾಗ್ಯೂ, ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ರೋಗಿಗಳು ದೂರಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಬೇರೆ ಜಾಗದಲ್ಲಿ ತಾಯಿ, ಮಕ್ಕಳ ಆಸ್ಪತ್ರೆ ಆರಂಭಕ್ಕೆ ಹಲವು ಬಾರಿ ಸಾರ್ವಜನಿಕರು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಈ ಸಂಬಂಧ ಆರೋಗ್ಯ ಸಚಿವರಿಗೂ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೆ ತಾಯಿ, ಮಕ್ಕಳ ಆಸ್ಪತ್ರೆ ಆರಂಭವಾಗಿಲ್ಲ. ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾಡಿಲ್ಲ ಎಂಬುದು ಸಾರ್ವಜನಿಕರ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ..? ಶ್ರೀನಿವಾಸಪುರ | ಗಾಳಿ-ಮಳೆಗೆ ಮಾವು ಬೆಳೆ ನಾಶ: ರೈತರಿಗೆ ತ್ವರಿತ ಪರಿಹಾರ ನೀಡಲು ಕೆಆರ್‌ಎಸ್ ಪಕ್ಷ ಆಗ್ರಹ

ಆಸ್ಪತ್ರೆಯಲ್ಲಿ ರಾತ್ರಿ ವೇಳೆ ವೈದ್ಯರು, ಶುಶ್ರೂಷಕರು ಇದ್ದು ಬರುವ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ರೋಗಿಗಳನ್ನು ಸಾಗಿಸಲು ಡಿ ಗ್ರೂಪ್ ನೌಕರರು ಇರಬೇಕು ಎಂದು ಮಹಿಳೆ ಕೃಷ್ಣವೇಣಿ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಗರಸಭೆಯ ಏಕಾಏಕಿ ನಿರ್ಧಾರಕ್ಕೆ ಬಡವರ ಬದುಕು ಅಯೋಮಯ : ಪತ್ರಿಕಾಗೋಷ್ಠಿ ಯಲ್ಲಿ ಮೊಹಮ್ಮದ್ ಶಫೀಕ್ ಕಿಡಿ

ನಗರದ ಐಡಿಎಸ್ ಎಂಟಿ ಕಾಂಪ್ಲೆಕ್ಸ್ ಮಳಿಗೆಗಳ ತೆರವಿಗೆ ಸಂಬಂಧಿಸಿದಂತೆ ಮಾಜಿ ನಗರಸಭಾ...

ಬಾಗೇಪಲ್ಲಿ | ಎಸ್ಟಿ ಸಮುದಾಯದ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಣೆ

ರೈತರಿಗೆ ಕೊಡುವ ಸರ್ಕಾರಿ ಸೌಲಭ್ಯಗಳಲ್ಲಿ ದಲ್ಲಾಳಿಗಳು, ಮುಖಂಡರು ಪಾಲುದಾರರು ಆಗಬಾರದೆಂಬ ಉದ್ದೇಶಕ್ಕಾಗಿ...

​ಚಿಂತಾಮಣಿ |ಕೆಆರ್‌ಎಸ್ ಪಕ್ಷದ ವತಿಯಿಂದ ಸರ್ವ ಸದಸ್ಯರ ಸಭೆ – ಪಕ್ಷದ ಸಂಘಟನೆಗೆ ಒತ್ತು

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್)ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷರಾದ ದೀಪಕ್...

ಚಿ೦ತಾಮಣಿ |ಸರ್ಕಾರಿ ಕೆರೆ ಮಣ್ಣು ಕೋಳಿ ಫಾರಂ ಪಾಲು, ಗ್ರಾಮಸ್ಥರ ಆಕ್ರೋಶ

ನಗರದ ಅಭಿವೃದ್ಧಿ ಹಾಗೂ ಕ್ರೀಡಾಂಗಣ ನಿರ್ಮಾಣದ ಹೆಸರಿನಲ್ಲಿ ಚಿಂತಾಮಣಿ ನಗರಸಭೆ ಪೌರಾಯುಕ್ತ...