ಮುಂಬರುವ ಪವಿತ್ರ ಮೊಹರಂ ಹಬ್ಬವನ್ನು ನಗರದಲ್ಲಿ ಅತ್ಯಂತ ಶಾಂತಿಯುತವಾಗಿ, ಸೌಹಾರ್ದತೆಯಿಂದ ಮತ್ತು ಕಾನೂನು ಚೌಕಟ್ಟಿನೊಳಗೆ ಆಚರಿಸುವ ನಿಟ್ಟಿನಲ್ಲಿ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಗರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ವಿಜಿ ಕುಮಾರ್ ಅವರು ಹಬ್ಬ ಹರಿದಿನಗಳು ಸಮಾಜದಲ್ಲಿ ಸೌಹಾರ್ದತೆ ಮತ್ತು ಐಕ್ಯತೆಯನ್ನು ಮೂಡಿಸಲು ಇರುವಂತವು.ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು. ಸಾರ್ವಜನಿಕರು ಮತ್ತು ಹಬ್ಬದ ಆಚರಣಾ ಸಮಿತಿಯವರು ಪೊಲೀಸರೊಂದಿಗೆ ಸಹಕರಿಸಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಕರೆ ನೀಡಿದರು.
ಇದನ್ನು ಓದಿದ್ದೀರಾ..? ಕೋಲಾರ | ಸುಳ್ಳು ಹೇಳುವವರ ಬಾಯಿ ಲೌಡ್ ಸ್ಪೀಕರ್ ಆಗಿದೆ, ಸತ್ಯ ಹೇಳುವವರ ಬಾಯಿಗೆ ಲಕ್ವಾ ಹೊಡೆದಿದೆ : ರಮೇಶ್ ಕುಮಾರ್
ಇದೇ ಸಂದರ್ಭದಲ್ಲಿ ಹಬ್ಬದ ಮೆರವಣಿಗೆಯ ಮಾರ್ಗಗಳು, ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಧ್ವನಿವರ್ಧಕಗಳ ಬಳಕೆ ಕುರಿತು ಸಭೆಯಲ್ಲಿದ್ದ ಮುಖಂಡರಿಗೆ ಪೊಲೀಸ್ ಇಲಾಖೆಯ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಲಾಯಿತು.
ಸಭೆಯಲ್ಲಿ ನಗರದ ಪ್ರಮುಖ ಮುಸ್ಲಿಂ ಮುಖಂಡರು,ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದು,ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.




