ಚಿಂತಾಮಣಿ | ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಭೇಟಿ

Date:

​
ಚಿಂತಾಮಣಿ ತಾಲೂಕಿನ ಕೈವಾರ ಹೋಬಳಿಯ ಮಸ್ತೇನಹಳ್ಳಿಯಲ್ಲಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಕಾಲೇಜಿಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು.ನಿಸಾರ್ ಅಹಮದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಶಾಲೆ ಮತ್ತು ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸುದೀರ್ಘವಾಗಿ ಸಂಭಾಷಿಸಿದ ಅಧ್ಯಕ್ಷರು,ಸರ್ಕಾರದಿಂದ ದೊರೆಯುತ್ತಿರುವ ಸವಲತ್ತುಗಳು ಸಮರ್ಪಕವಾಗಿ ತಲುಪುತ್ತಿವೆಯೇ ಎಂದು ಖಾತ್ರಿಪಡಿಸಿಕೊಂಡರು.ದ್ವಿತೀಯ ಪಿಯುಸಿ ನಂತರ ವಿದ್ಯಾರ್ಥಿಗಳಿಗೆ ಸೂಕ್ತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುವಂತೆ ಅಧಿಕಾರಿಗಳು ಮತ್ತು ಪ್ರಾಂಶುಪಾಲರಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ವಸತಿ ನಿಲಯದ ಅಡುಗೆ ಕೋಣೆ,ಡಾರ್ಮಿಟರಿ ಮತ್ತು ಶೌಚಾಲಯಗಳನ್ನು ವೀಕ್ಷಿಸಿದ ಅವರು,ಪರಿಶುದ್ಧತೆ ಹಾಗೂ ಸ್ವಚ್ಛತೆಯ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದರು.ನಂತರ ವಿದ್ಯಾರ್ಥಿಗಳು,ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಭೋಜನಾಲಯದಲ್ಲಿ ಸೌಹಾರ್ದಯುತವಾಗಿ ಆಹಾರ ಸೇವಿಸಿ,ಅಡುಗೆಯ ರುಚಿ ಹಾಗೂ ಸಿಬ್ಬಂದಿಯ ನೈರ್ಮಲ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಹಾಗೂ ಶಿಸ್ತನ್ನು ಬೆಳೆಸುವ ನಿಟ್ಟಿನಲ್ಲಿ ವಸತಿ ಶಾಲೆಯಲ್ಲಿ ಎನ್‌ಸಿಸಿ ಘಟಕವನ್ನು ತಕ್ಷಣವೇ ಪ್ರಾರಂಭಿಸಲು ಸಲಹೆ ನೀಡಿದರು.ಇದೇ ವೇಳೆ ಭೇಟಿಯ ನೆನಪಿಗಾಗಿ ಶಾಲಾ ಆವರಣದಲ್ಲಿ ಗಿಡ ನೆಟ್ಟು ನೀರುಣಿಸಿದರು.
​
ಶಾಲೆಯ ಪ್ರಾಂಶುಪಾಲೆ ಅರುಣಾ ಪಲ್ಲವಿ,ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕುಮಾರಿ ಬಿಂದುಮಣಿ ಎಂ.ಎಲ್.ಅವರೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯ ಕುರಿತು ಚರ್ಚಿಸಿ,ಮುಂದಿನ ಕಾರ್ಯಯೋಜನೆಗಳ ಬಗ್ಗೆ ನಿರ್ದೇಶನ ನೀಡಿದರು.ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಕರ್ತವ್ಯ ಪ್ರಜ್ಞೆಯನ್ನು ಶ್ಲಾಘಿಸಿ,ನೈತಿಕ ಸ್ಥೈರ್ಯ ತುಂಬಿದರು.

ಇದನ್ನು ಓದಿದ್ದೀರಾ..?ಕೋಲಾರ | ವೇಮಗಲ್‌ನಲ್ಲಿ ಕ್ರೋನ್ಸ್ ಉತ್ಪಾದನಾ ಘಟಕಕ್ಕೆ ಚಾಲನೆ

ಈ ಸಂದರ್ಭದಲ್ಲಿ ನಿವೃತ್ತ ಮೇಜರ್ ಜನರಲ್ ಅಹಮದ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಾಷಾಕ್ ಸಾಬ್,ಬೋಧಕ ಸಿಬ್ಬಂದಿಯಾದ ಲೋಕೇಶ್ ಎಸ್.ಎಂ.ಲಕ್ಷ್ಮೀದೇವ ಎಲ್.ಲತೀಫ್,ನಾಗವೇಣಿ ಎಂ. ಪ್ರಕಾಶ್ ವಿ.ನಾಗಮಣಿ ಸಿ.ಜೆ.ದೇವರಾಜ್ ಕೆ.ಎಂ. ಮುಂಜರಿನ್ ಬೇಗಂ,ಶ್ವೇತಾ,ಬೋಧಕೇತರ ಸಿಬ್ಬಂದಿ ,ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಗರಸಭೆಯ ಏಕಾಏಕಿ ನಿರ್ಧಾರಕ್ಕೆ ಬಡವರ ಬದುಕು ಅಯೋಮಯ : ಪತ್ರಿಕಾಗೋಷ್ಠಿ ಯಲ್ಲಿ ಮೊಹಮ್ಮದ್ ಶಫೀಕ್ ಕಿಡಿ

ನಗರದ ಐಡಿಎಸ್ ಎಂಟಿ ಕಾಂಪ್ಲೆಕ್ಸ್ ಮಳಿಗೆಗಳ ತೆರವಿಗೆ ಸಂಬಂಧಿಸಿದಂತೆ ಮಾಜಿ ನಗರಸಭಾ...

ಬಾಗೇಪಲ್ಲಿ | ಎಸ್ಟಿ ಸಮುದಾಯದ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಣೆ

ರೈತರಿಗೆ ಕೊಡುವ ಸರ್ಕಾರಿ ಸೌಲಭ್ಯಗಳಲ್ಲಿ ದಲ್ಲಾಳಿಗಳು, ಮುಖಂಡರು ಪಾಲುದಾರರು ಆಗಬಾರದೆಂಬ ಉದ್ದೇಶಕ್ಕಾಗಿ...

​ಚಿಂತಾಮಣಿ |ಕೆಆರ್‌ಎಸ್ ಪಕ್ಷದ ವತಿಯಿಂದ ಸರ್ವ ಸದಸ್ಯರ ಸಭೆ – ಪಕ್ಷದ ಸಂಘಟನೆಗೆ ಒತ್ತು

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್)ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷರಾದ ದೀಪಕ್...

ಚಿ೦ತಾಮಣಿ |ಸರ್ಕಾರಿ ಕೆರೆ ಮಣ್ಣು ಕೋಳಿ ಫಾರಂ ಪಾಲು, ಗ್ರಾಮಸ್ಥರ ಆಕ್ರೋಶ

ನಗರದ ಅಭಿವೃದ್ಧಿ ಹಾಗೂ ಕ್ರೀಡಾಂಗಣ ನಿರ್ಮಾಣದ ಹೆಸರಿನಲ್ಲಿ ಚಿಂತಾಮಣಿ ನಗರಸಭೆ ಪೌರಾಯುಕ್ತ...