​ಚಿಂತಾಮಣಿ | ಎಸ್ ಐ ಆರ್ ಪ್ರಕ್ರಿಯೆ : ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಸದಸ್ಯ ಸೈಯದ್ ಎಜಾಜ್ ಸ್ಪಷ್ಟನೆ

Date:

ಮುಂಬರುವ ಜೂಲೈ ತಿಂಗಳ 1ನೇ ತಾರೀಖಿನಿಂದ ಆರಂಭವಾಗಲಿರುವ ಎಸ್ ಐ ಆರ್ ಪ್ರಕ್ರಿಯೆಯ ಕುರಿತಾಗಿ ಸಾರ್ವಜನಿಕರು,ವಿಶೇಷವಾಗಿ ಮಹಿಳೆಯರು ಯಾವುದೇ ರೀತಿಯ ಆತಂಕ ಅಥವಾ ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಕೆಪಿಸಿಸಿ ಸದಸ್ಯರಾದ ಸೈಯದ್ ಎಜಾಜ್ ಅವರು ತಿಳಿಸಿದ್ದಾರೆ.

- Advertisement -

​ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಅವರು ಆನ್‌ಲೈನ್‌ನಲ್ಲಿ ದಾಖಲೆಗಳನ್ನು ಸಲ್ಲಿಸಲು ಸಾರ್ವಜನಿಕರು ಸೈಬರ್ ಕೇಂದ್ರಗಳಿಗೆ ಅಲೆದಾಡುತ್ತಿರುವುದು ಮತ್ತು ತಲ್ಲಣಗೊಳ್ಳುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ.ಆದರೆ,ಸರ್ಕಾರವು ಈ ಪ್ರಕ್ರಿಯೆಯನ್ನು ಸುಲಭಗೊಳಿಸಲು ಈಗಾಗಲೇ ಬಿಎಲ್‌ಒ ಬೂತ್ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಪ್ರತಿ ವಾರ್ಡ್ ಹಾಗೂ ಗ್ರಾಮೀಣ ಭಾಗದ ಹಳ್ಳಿಗಳಿಗೆ ಬಿಎಲ್‌ಒಗಳನ್ನು ನಿಯೋಜಿಸಲಾಗಿದ್ದು,ಅವರು ಆಯಾ ಪ್ರದೇಶದ ಜವಾಬ್ದಾರಿಯನ್ನು ಹೊಂದಿರುತ್ತಾರೆ.2002ರ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು,ನಿಮ್ಮ ಪತ್ನಿ ಅಥವಾ ತಂದೆ-ತಾಯಿ ಹೆಸರು ಇದ್ದರೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ.

ಒಂದು ವೇಳೆ ನಿಮ್ಮ ಹೆಸರು ಇಲ್ಲದಿದ್ದರೂ, ನಿಮ್ಮ ತಂದೆ-ತಾಯಿಯ ಹೆಸರು ಪಟ್ಟಿಯಲ್ಲಿದ್ದರೆ,ಆ ದಾಖಲೆಗಳನ್ನು ಜೋಡಿಸಿ ಈಗಾಗಲೇ ಮ್ಯಾಪಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಇಟ್ಟುಕೊಳ್ಳಲಾಗಿದೆ.

ಬಿಎಲ್‌ಒಗಳು ಮನೆಗೆ ಬಂದಾಗ ಸಾರ್ವಜನಿಕರು ತಮ್ಮ ಆಧಾರ್ ಕಾರ್ಡ್ ಮತ್ತು ವೋಟರ್ ಐಡಿಯನ್ನು ಸಿದ್ಧವಾಗಿಟ್ಟುಕೊಂಡು ತೋರಿಸಬೇಕು.
​ಅಧಿಕಾರಿಗಳಿಗೆ ಯಾವುದೇ ಜೆರಾಕ್ಸ್ ಪ್ರತಿಗಳನ್ನು ನೀಡುವ ಅಗತ್ಯವಿರುವುದಿಲ್ಲ.ಅವರು ಕೇವಲ ನಿಮ್ಮ ಮಾಹಿತಿಯನ್ನು ಪರಿಶೀಲಿಸಲಿದ್ದಾರೆ. ವೋಟರ್ ಲಿಸ್ಟ್ ಸಂಖ್ಯೆ ಮತ್ತು ಕ್ಯೂಆರ್ ಕೋಡ್ ಒಳಗೊಂಡಿರುವ ಫಾರ್ಮ್ ಅನ್ನು ಸರ್ಕಾರದಿಂದಲೇ ನೀಡಲಾಗುತ್ತದೆ. ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಪ್ರತ್ಯೇಕ ಫಾರ್ಮ್ ಇರಲಿದ್ದು ಸಾರ್ವಜನಿಕರು ಗೊಂದಲಕ್ಕೊಳಗಾಗಬಾರದು ಎಂದು ವಿವರಿಸಿದರು.

ಫಾರ್ಮ್ ಭರ್ತಿ ಮಾಡುವಾಗ ಹೆಸರು ಹಾಗೂ ಇತರೆ ವಿವರಗಳ ಸ್ಪೆಲ್ಲಿಂಗ್ ಸರಿಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.ಮಾಹಿತಿ ಭರ್ತಿ ಮಾಡಿದ ಬಳಿಕ ಸಹಿ ಮಾಡಬೇಕು.ಒಂದು ಪ್ರತಿಯನ್ನು ಅಧಿಕಾರಿಗಳು ಕೊಂಡೊಯ್ಯಲಿದ್ದು, ಮತ್ತೊಂದು ಪ್ರತಿಯನ್ನು ಸಾರ್ವಜನಿಕರು ರಸೀದಿಯಾಗಿ ತಮ್ಮ ಬಳಿ ಇಟ್ಟುಕೊಳ್ಳಬೇಕು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ಶಾಸಕ ಪ್ರದೀಪ್ ಈಶ್ವರ್‌ರನ್ನು ‘ಹುಚ್ಚ-ಹುಚ್ಚ’ ಎಂದು, ಚಪ್ಪಲಿ ಎಸೆದ ಎಚ್‌ಡಿಕೆ ಬೆಂಬಲಿಗರು; ಕಿಡಿಗೇಡಿಗಳು ವಶಕ್ಕೆ

​”ಸಾರ್ವಜನಿಕರು ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡದೆ,ಆತಂಕಕ್ಕೆ ಒಳಗಾಗದೆ ಬಿಎಲ್‌ಒಗಳ ಮೂಲಕ ಅಗತ್ಯ ಸಹಕಾರವನ್ನು ಪಡೆದುಕೊಳ್ಳಬಹುದು ಎಂದು ಸೈಯದ್ ಎಜಾಜ್ ಅವರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಗರಸಭೆಯ ಏಕಾಏಕಿ ನಿರ್ಧಾರಕ್ಕೆ ಬಡವರ ಬದುಕು ಅಯೋಮಯ : ಪತ್ರಿಕಾಗೋಷ್ಠಿ ಯಲ್ಲಿ ಮೊಹಮ್ಮದ್ ಶಫೀಕ್ ಕಿಡಿ

ನಗರದ ಐಡಿಎಸ್ ಎಂಟಿ ಕಾಂಪ್ಲೆಕ್ಸ್ ಮಳಿಗೆಗಳ ತೆರವಿಗೆ ಸಂಬಂಧಿಸಿದಂತೆ ಮಾಜಿ ನಗರಸಭಾ...

ಬಾಗೇಪಲ್ಲಿ | ಎಸ್ಟಿ ಸಮುದಾಯದ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಣೆ

ರೈತರಿಗೆ ಕೊಡುವ ಸರ್ಕಾರಿ ಸೌಲಭ್ಯಗಳಲ್ಲಿ ದಲ್ಲಾಳಿಗಳು, ಮುಖಂಡರು ಪಾಲುದಾರರು ಆಗಬಾರದೆಂಬ ಉದ್ದೇಶಕ್ಕಾಗಿ...

​ಚಿಂತಾಮಣಿ |ಕೆಆರ್‌ಎಸ್ ಪಕ್ಷದ ವತಿಯಿಂದ ಸರ್ವ ಸದಸ್ಯರ ಸಭೆ – ಪಕ್ಷದ ಸಂಘಟನೆಗೆ ಒತ್ತು

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್)ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷರಾದ ದೀಪಕ್...

ಚಿ೦ತಾಮಣಿ |ಸರ್ಕಾರಿ ಕೆರೆ ಮಣ್ಣು ಕೋಳಿ ಫಾರಂ ಪಾಲು, ಗ್ರಾಮಸ್ಥರ ಆಕ್ರೋಶ

ನಗರದ ಅಭಿವೃದ್ಧಿ ಹಾಗೂ ಕ್ರೀಡಾಂಗಣ ನಿರ್ಮಾಣದ ಹೆಸರಿನಲ್ಲಿ ಚಿಂತಾಮಣಿ ನಗರಸಭೆ ಪೌರಾಯುಕ್ತ...