ಚಿಂತಾಮಣಿ | ನಗರಸಭೆಯ ಏಕಾಏಕಿ ನಿರ್ಧಾರಕ್ಕೆ ಬಡವರ ಬದುಕು ಅಯೋಮಯ : ಪತ್ರಿಕಾಗೋಷ್ಠಿ ಯಲ್ಲಿ ಮೊಹಮ್ಮದ್ ಶಫೀಕ್ ಕಿಡಿ

Date:

ನಗರದ ಐಡಿಎಸ್ ಎಂಟಿ ಕಾಂಪ್ಲೆಕ್ಸ್ ಮಳಿಗೆಗಳ ತೆರವಿಗೆ ಸಂಬಂಧಿಸಿದಂತೆ ಮಾಜಿ ನಗರಸಭಾ ಸದಸ್ಯರಾದ ಮೊಹಮ್ಮದ್ ಶಫೀಕ್ ಅವರು ಪತ್ರಿಕಾಗೋಷ್ಠಿ ನಡೆಸಿ ವ್ಯಾಪಾರಿಗಳ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ್ದಾರೆ.

- Advertisement -

ಸುಮಾರು 6 ರಿಂದ 8 ತಿಂಗಳ ಹಿಂದೆ ಬಾಡಿಗೆ ಬಾಕಿ ಇರುವ ಕಾರಣಕ್ಕೆ ನಗರಸಭೆಯಿಂದ ಮಳಿಗೆಗಳಿಗೆ ಬೀಗ ಹಾಕಲಾಗಿತ್ತು.ನಂತರ ವ್ಯಾಪಾರಿಗಳು ಸಾಲ-ಸೋಲ ಮಾಡಿ,ಚಿನ್ನಾಭರಣಗಳನ್ನು ಅಡವಿಟ್ಟು ಬಾಡಿಗೆಯನ್ನು ಪೂರ್ಣವಾಗಿ ಪಾವತಿಸಿದ್ದು,ಇತ್ತೀಚೆಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿ,ಸದರಿ ಕಟ್ಟಡವನ್ನು ನೆಲಸಮಗೊಳಿಸಬೇಕಾಗಿರುವುದರಿಂದ ಕೂಡಲೇ ಮಳಿಗೆಗಳನ್ನು ಖಾಲಿ ಮಾಡುವಂತೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಕಟ್ಟಡದಲ್ಲಿ ಜೀವನೋಪಾಯ ಕಂಡುಕೊಂಡಿರುವ ವ್ಯಾಪಾರಿಗಳು,ವಿಶೇಷವಾಗಿ ಮಹಿಳಾ ವ್ಯಾಪಾರಿಗಳು ಕಣ್ಣೀರು ಹಾಕುತ್ತಿದ್ದಾರೆ.ನಾವು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದೇವೆ,ಏಕಾಏಕಿ ಮಳಿಗೆಗಳನ್ನು ತೆರವುಗೊಳಿಸಿದರೆ ಸಾಲ ಮರುಪಾವತಿ ಮಾಡುವುದು ಹೇಗೆ?”ಎಂದು ಅಳಲು ತೋಡಿಕೊಂಡಿದ್ದಾರೆ.

ಬೇರೆಡೆ ವ್ಯಾಪಾರ ಮಾಡಲು ಸದ್ಯಕ್ಕೆ ವ್ಯವಸ್ಥೆಯಿಲ್ಲದ ಕಾರಣ,ವ್ಯಾಪಾರಿಗಳಿಗೆ ಸ್ವಲ್ಪ ಕಾಲಾವಕಾಶ ನೀಡಬೇಕು ಮತ್ತು ಅವರ ಜೀವನೋಪಾಯಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮೊಹಮ್ಮದ್ ಶಫೀಕ್ ಅವರು ಅಧಿಕಾರಿಗಳಲ್ಲಿ ಮನವಿ ಮಾಡಿದರು.

ಐ ಡಿ ಎಸ್ ಎಂ ಟಿ ಹಳೆಯದಾದ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡದ ಮೇಲೆ ಹೊಸದಾಗಿ ಮಳಿಗೆಗಳನ್ನು ನಿರ್ಮಿಸುವುದು ತಾಂತ್ರಿಕವಾಗಿ ಅಪಾಯಕಾರಿ ಎಂದು ಅಧಿಕಾರಿಗಳು ವರದಿ ನೀಡಿದ್ದರೂ ಸಹ,ಸಚಿವರು ಇದಕ್ಕೆ ಅನುಮೋದನೆ ಕೊಡಿಸಿರುವುದು ಆತಂಕಕಾರಿ ವಿಷಯ ಎಂದರು.

ಯಾವುದೇ ಕಟ್ಟಡದ ಮೇಲೆ ಮತ್ತೊಂದು ಅಂತಸ್ತು ನಿರ್ಮಿಸುವ ಮೊದಲು ವೈಜ್ಞಾನಿಕವಾಗಿ ಫೀಸಿಬಿಲಿಟಿ ರಿಪೋರ್ಟ್’ಪಡೆಯಬೇಕು.ಆದರೆ ಇಲ್ಲಿ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ.

ನಗರದ ಅಭಿವೃದ್ಧಿಯ ಹೆಸರಿನಲ್ಲಿ ಅವೈಜ್ಞಾನಿಕ ಕಾಮಗಾರಿಗಳನ್ನು ನಡೆಸುವುದು ಸರಿಯಲ್ಲ.ಈ ಬಗ್ಗೆ ಜಿಲ್ಲಾಧಿಕಾರಿಗಳು ತಕ್ಷಣ ಗಮನಹರಿಸಿ ಕಾಮಗಾರಿಯನ್ನು ತಡೆಹಿಡಿಯಬೇಕು ಎಂದು ಮೊಹಮ್ಮದ್ ಶಫೀಕ್ ಆಗ್ರಹಿಸಿದ್ದಾರೆ.

ನಗರದ ಸೌಂದರ್ಯೀಕರಣ ಮತ್ತು ರಸ್ತೆ ಅಗಲೀಕರಣದ ಹೆಸರಿನಲ್ಲಿ ಮತ್ತೊಮ್ಮೆ ತೆರವು ಕಾರ್ಯಾಚರಣೆ ನಡೆಯುವ ಸಾಧ್ಯತೆಗಳಿದ್ದು,ಸಾರ್ವಜನಿಕರು ಹಾಗೂ ವರ್ತಕರು ಎಚ್ಚರಿಕೆ ವಹಿಸುವಂತೆ ಹೇಳಿದ ಅವರು  ನಗರದ ಎಂ.ಜಿ.ರಸ್ತೆ ಹಾಗೂ ರೈಲ್ವೆ ಸ್ಟೇಷನ್ ರಸ್ತೆಯ ಅಭಿವೃದ್ಧಿಗಾಗಿ ಅಧಿಕಾರಿಗಳು ಈಗಾಗಲೇ ಗುರುತು ಹಾಕಿದ್ದಾರೆ.ಈ ತೆರವು ಕಾರ್ಯಾಚರಣೆಯು ಮುಂಜಾನೆ 4-5 ಗಂಟೆಯ ಸಮಯದಲ್ಲಿ ಅಥವಾ ರಾತ್ರೋರಾತ್ರಿ ಯಾವುದೇ ಮುನ್ಸೂಚನೆ ಇಲ್ಲದೆ ನಡೆಯುವ ಸಾಧ್ಯತೆಯಿದೆ,ಎಂದು ಅವರು ಎಚ್ಚರಿಸಿದರು.

ತಮ್ಮ ಅಂಗಡಿ ಮುಂಗಟ್ಟುಗಳ ನವೀಕರಣ ಅಥವಾ ದುರಸ್ತಿಗಾಗಿ ಹೆಚ್ಚಿನ ಬಂಡವಾಳ ಹೂಡಲು ಯೋಚಿಸುತ್ತಿರುವ ವರ್ತಕರು ಸದ್ಯಕ್ಕೆ ತಾಳ್ಮೆ ವಹಿಸುವುದು ಉತ್ತಮ.ಯಾವ ಸಮಯದಲ್ಲಿ ಏನು ಬದಲಾವಣೆಯಾಗುತ್ತದೋ ತಿಳಿಯದು, ಆದ್ದರಿಂದ ಅನಗತ್ಯ ವೆಚ್ಚ ಮಾಡಬೇಡಿ,ಎಂದು ಸಲಹೆ ನೀಡಿದರು.

ಮುಜರಾಯಿ ಇಲಾಖೆಯ ಆಸ್ತಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ಕಟ್ಟಡಗಳ ತೆರವು ಕಾರ್ಯಾಚರಣೆಯು ನಗರಸಭೆಯ ಮುಂದಿನ ಯೋಜನೆಯ ಭಾಗವಾಗಿರಬಹುದು ಎಂದು ಅವರು ಶಂಕೆ ವ್ಯಕ್ತಪಡಿಸಿದಲ್ಲದೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ತೀವ್ರ ಅಸಮಾಧಾನ ಹೊರ ಹಾಕಿ ಮಾತನಾಡಿದವರು ಆಸ್ಪತ್ರೆಯ ಕಟ್ಟಡ ದೊಡ್ಡದಾಗಿದ್ದರೂ ಸಹ ಅಲ್ಲಿ ಜನರಿಗೆ ಬೇಕಾದ ಅಗತ್ಯ ಸೌಲಭ್ಯಗಳಿಲ್ಲ.ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್‌ಗೆ ಫೋನ್ ಮಾಡಿದರೆ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇದೆ.ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ರೋಗಿಗಳು ಪರದಾಡುವಂತಾಗಿದೆ ಎಂದು ಅವರು ದೂರಿದರು.ಆಸ್ಪತ್ರೆಗೆ ಅಗತ್ಯವಿರುವ ಸಿಬ್ಬಂದಿ ಮತ್ತು ವೈದ್ಯರನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಅವರು ಸಚಿವರನ್ನು ಒತ್ತಾಯಿಸಿದರು.

ನಗರಸಭೆಯ ಕಾರ್ಯವೈಖರಿಯ ಬಗ್ಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ನಗರಸಭೆಯಲ್ಲಿ ಎಂಜಿನಿಯರ್‌ಗಳ ಕೊರತೆ ಇದೆ.ಇದರಿಂದಾಗಿ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ. ನಗರವು ಮಾದರಿಯಾಗಬೇಕಾದರೆ ಮೊದಲು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದರು.

ನಗರದ ಸ್ಟೇಡಿಯಂನಿಂದ ತೆಗೆದ ಮಣ್ಣನ್ನು ಅಕ್ರಮವಾಗಿ ಖಾಸಗಿ ಜಾಗಗಳಿಗೆ ಸಾಗಿಸಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಅವರು ಮಾಡಿದರು.ನಮ್ಮ ಕಮಿಷನರ್ ಅವರು ಸಾಮಾನ್ಯ ವ್ಯಕ್ತಿಯಲ್ಲ,ಅಸಾಮಾನ್ಯ ವ್ಯಕ್ತಿ! ಸ್ಟೇಡಿಯಂನ ಮಣ್ಣನ್ನು ಟಿಪ್ಪರ್‌ಗಳ ಮೂಲಕ ಖಾಸಗಿ ಜಾಗಕ್ಕೆ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಕೇಳಿಬರುತ್ತಿದೆ.ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು,”ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ..? ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಚಿವ ಡಿ.ಸುಧಾಕರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಬಡವರು ಅಥವಾ ರೈತರು ಏನಾದರೂ ಮಾಡಿದರೆ ತಕ್ಷಣ ಕ್ರಮ ಕೈಗೊಳ್ಳುವ ಅಧಿಕಾರಿಗಳು,ಪ್ರಭಾವಿಗಳ ವಿಷಯದಲ್ಲಿ ಕಣ್ಣು ಮುಚ್ಚಿ ಕುಳಿತಿದ್ದಾರೆ.ಸಾಮಾನ್ಯ ಜನರಿಗೊಂದು ನ್ಯಾಯ, ಬಲಿಷ್ಠರಿಗೊಂದು ನ್ಯಾಯ ಎಂಬಂತಾಗಿದೆ.ಸಾರ್ವಜನಿಕರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ಇದರ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆ ನಡೆಯಲಿದೆ,” ಎಂದು ಮೊಹಮ್ಮದ್ ಶಫೀಕ್ ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸಿಗದೆ ಮರೀಚಿಕೆ:ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾಡಿಲ್ಲ ಎಂಬುದು ಸಾರ್ವಜನಿಕರ ಆರೋಪ

ಪಟ್ಟಣದ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ...

ಬಾಗೇಪಲ್ಲಿ | ಎಸ್ಟಿ ಸಮುದಾಯದ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಣೆ

ರೈತರಿಗೆ ಕೊಡುವ ಸರ್ಕಾರಿ ಸೌಲಭ್ಯಗಳಲ್ಲಿ ದಲ್ಲಾಳಿಗಳು, ಮುಖಂಡರು ಪಾಲುದಾರರು ಆಗಬಾರದೆಂಬ ಉದ್ದೇಶಕ್ಕಾಗಿ...

​ಚಿಂತಾಮಣಿ |ಕೆಆರ್‌ಎಸ್ ಪಕ್ಷದ ವತಿಯಿಂದ ಸರ್ವ ಸದಸ್ಯರ ಸಭೆ – ಪಕ್ಷದ ಸಂಘಟನೆಗೆ ಒತ್ತು

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್)ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷರಾದ ದೀಪಕ್...

ಚಿ೦ತಾಮಣಿ |ಸರ್ಕಾರಿ ಕೆರೆ ಮಣ್ಣು ಕೋಳಿ ಫಾರಂ ಪಾಲು, ಗ್ರಾಮಸ್ಥರ ಆಕ್ರೋಶ

ನಗರದ ಅಭಿವೃದ್ಧಿ ಹಾಗೂ ಕ್ರೀಡಾಂಗಣ ನಿರ್ಮಾಣದ ಹೆಸರಿನಲ್ಲಿ ಚಿಂತಾಮಣಿ ನಗರಸಭೆ ಪೌರಾಯುಕ್ತ...