ಮಕ್ಕಳ ಕಲಿಕೆಗೆ ಎಫ್.ಎಲ್. ಎನ್. ಕಲಿಕಾ ಹಬ್ಬ ಪ್ರೇರಣೆ: ಆರ್.ವೆಂಕಟರಾಮ್

Date:

​ಬಾಗೇಪಲ್ಲಿ:-ಮಕ್ಕಳ ಕಲಿಕಾ ಪ್ರತಿಭೆಗೆ ಹಲವಾರು ಶೈಕ್ಷಣಿಕ ಚಟುವಟಿಕೆ ಒಳಗೊಂಡಿದ್ದು ಮಕ್ಕಳ ಕಲಿಕಾ ಪ್ರೇರಣೆ ಮತ್ತು ಬಲವರ್ಧನೆಗೆ ಕಲಿಕಾ ಹಬ್ಬ ಉತ್ತಮ ವೇದಿಕೆ ಒದಗಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಿಕ್ಷಣ ಸಮನ್ವಯಾಧಿಕಾರಿಗಳಾದ ಆರ್.ವೆಂಕಟರಾಮ್ ಹೇಳಿದರು.

- Advertisement -

ಚಿಕ್ಕಬಳ್ಳಾಪುರ ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ ಬಾಗೇಪಲ್ಲಿ ‌ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಬಾಗೇಪಲ್ಲಿ ಪಟ್ಟಣದ ಕ್ಲಸ್ಟರ್ ಮಟ್ಟದ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಎಫ್.ಎಲ್.ಎನ್ ಕಲಿಕಾ ಹಬ್ಬ ( ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ)ಕಲಿಕಾ ಹಬ್ಬ ಕುರಿತು ಏರ್ಪಡಿಸಿದ್ದ ಪಟ್ಟಣದ ಶಾಲೆಯಲ್ಲಿ ಮಕ್ಕಳ ಕಲಿಕಾ ಹಬ್ಬಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಲಿಕಾ ಹಬ್ಬವು ಮಕ್ಕಳ ಪ್ರತಿಭೆ ಹೊರ ತರಲು ಹಾಗೂ ಅವರಲ್ಲಿ ಸಂತಸದ ಕಲಿಕೆಯೊಂದಿಗೆ ಅವರ ಪ್ರತಿಭಾನ್ವೇಷಣೆಗೆ ಸಹಕಾರಿಯಾಗಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಸರ್ಕಾರ ಎಫ್‌ಎಲ್‌ಎನ್ ಕಲಿಕಾ ಹಬ್ಬ ಎಂಬ ವಿನೂತನ ಕಾರ್ಯಕ್ರಮ ಜಾರಿ ಮಾಡಿದೆ. ಪ್ರತಿಯೊಂದು ಮಗುವಿನಲ್ಲಿಯೂ ಕಲಿಕೆಯಲ್ಲಿ ವೈಯಕ್ತಿಕವಾದ ಭಿನ್ನತೆಗಳಿದ್ದು ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಸಂತಸದಾಯಕ ಮತ್ತು ಸೃಜನಾತ್ಮಕ ಚಟುವಟಿಕೆ ಮಾಡುವ ಪರಿಕಲ್ಪನೆಯನ್ನು ಮೂಡಿಸುವ ಚಟುವಟಿಕೆ ಕಾರ್ಯಕ್ರಮವಾಗಿದೆ ಎಂದರು.

ಪಿ.ಎಂ.ಶ್ರೀ ಶಾಲೆಯ ಮುಖ್ಯ ಶಿಕ್ಷಕ ಆರ್.ಹನುಮಂತ ರೆಡ್ಡಿ ಮಾತನಾಡಿ ವಿನೂತನ ಚಟುವಟಿಕೆಗಳುಳ್ಳ ಕಲಿಕಾ ಹಬ್ಬವು ಮಕ್ಕಳ ಕಲಿಕೆಗೆ ಹೆಚ್ಚಿನ ಉತ್ತೇಜನ ನೀಡುವುದರೊಂದಿಗೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಎಂದು ತಿಳಿಸಿದರು ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಗುಣಮಟ್ಟದ ಶಿಕ್ಷಣ ಹಾಗೂ ‌ಮಕ್ಕಳ ಕಲಿಕಾ ಹಬ್ಬದ ಉದ್ದೇಶ ಮತ್ತು ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಸಂಪನ್ಮೂಲ ವ್ಯಕ್ತಿ ಕುಶಲ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ತಾವು ಕಲಿತ ಪಾಠಗಳನ್ನೇ ವಿವಿಧ ಸ್ಪರ್ಧಾತ್ಮಕ ಚಟುವಟಿಕೆಗಳ ಮೂಲಕ ಪ್ರದರ್ಶಿಸಿದರೆ, ಮಕ್ಕಳಿಗೆ ಕಲಿಕೆಯೇ ಒಂದು ಹಬ್ಬವಾಗುತ್ತದೆ. ಈ ಹಬ್ಬದಲ್ಲಿ ಮಕ್ಕಳಿಗೆ ಏಳು ವಿವಿಧ ಸ್ಪರ್ಧೆಗಳ ಮೂಲಕ ಅವರಲ್ಲಿ ಕಲಿಕಾ ಪ್ರೇರೇಪಣೆ ಬೆಳೆಸಲಾಗುತ್ತಿದೆ.

ಇದನ್ನು ಓದಿದ್ದೀರಾ..? ಮಾನವೀಯ ಮೌಲ್ಯಗಳನ್ನು ಹರಡಿದರಷ್ಟೇ ಸಮಸಮಾಜ ನಿರ್ಮಾಣ ಸಾಧ್ಯ: ಜಿಲ್ಲಾಧಿಕಾರಿ ಡಾ ಎಂ. ಆರ್ . ರವಿ

ಈ ಸಂದರ್ಭದಲ್ಲಿ ಸಿ.ಆರ್.ಪಿ ಪದ್ಮಾವತಿ, ಮಂಜುನಾಥ್, ನಾರಾಯಣ ಸ್ವಾಮಿ,, ಶಿಕ್ಷಕರಾದ ಪ್ರಭಾವತಿ,ಮುಖ್ಯ ಶಿಕ್ಷಕ ಕೆ.ವಿ.ಆದಿನಾರಾಯಣ,ಶ್ರೀನಿವಾಸ್,ಬೇಬಿ ಮಂತಾಜ್ ,ರಾಮಚಂದ್ರಪ್ಪ,ಜಬೀವುಲ್ಲಾ ವೈ.ಎಸ್.ಪ್ರಮೀಳಾ. ಹಾಗೂ ಎಸ್. ಡಿ.ಎಂ. ಸಿ ಅದ್ಯಕ್ಷೆ ಉಷಾ,ಸದಸ್ಯರಾದ ಶ್ರೀನಿವಾಸ್, ಹಾಗೂ ವಿವಿಧ ಶಾಲೆಯ ಶಿಕ್ಷಕರು ಹಾಗೂ ಶಾಲಾ ಮಕ್ಕಳು ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸಿಗದೆ ಮರೀಚಿಕೆ:ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾಡಿಲ್ಲ ಎಂಬುದು ಸಾರ್ವಜನಿಕರ ಆರೋಪ

ಪಟ್ಟಣದ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ...

ಚಿಂತಾಮಣಿ | ನಗರಸಭೆಯ ಏಕಾಏಕಿ ನಿರ್ಧಾರಕ್ಕೆ ಬಡವರ ಬದುಕು ಅಯೋಮಯ : ಪತ್ರಿಕಾಗೋಷ್ಠಿ ಯಲ್ಲಿ ಮೊಹಮ್ಮದ್ ಶಫೀಕ್ ಕಿಡಿ

ನಗರದ ಐಡಿಎಸ್ ಎಂಟಿ ಕಾಂಪ್ಲೆಕ್ಸ್ ಮಳಿಗೆಗಳ ತೆರವಿಗೆ ಸಂಬಂಧಿಸಿದಂತೆ ಮಾಜಿ ನಗರಸಭಾ...

ಬಾಗೇಪಲ್ಲಿ | ಎಸ್ಟಿ ಸಮುದಾಯದ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಣೆ

ರೈತರಿಗೆ ಕೊಡುವ ಸರ್ಕಾರಿ ಸೌಲಭ್ಯಗಳಲ್ಲಿ ದಲ್ಲಾಳಿಗಳು, ಮುಖಂಡರು ಪಾಲುದಾರರು ಆಗಬಾರದೆಂಬ ಉದ್ದೇಶಕ್ಕಾಗಿ...

​ಚಿಂತಾಮಣಿ |ಕೆಆರ್‌ಎಸ್ ಪಕ್ಷದ ವತಿಯಿಂದ ಸರ್ವ ಸದಸ್ಯರ ಸಭೆ – ಪಕ್ಷದ ಸಂಘಟನೆಗೆ ಒತ್ತು

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್)ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷರಾದ ದೀಪಕ್...