ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್)ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷರಾದ ದೀಪಕ್ ಸಿಎನ್ ರವರ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.ಪಕ್ಷದ ಸಕ್ರಿಯ ಕಾರ್ಯಕರ್ತರು ಮತ್ತು ಮುಖಂಡರು ಈ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಪಕ್ಷದ ಹಿರಿಯ ಮುಖಂಡರಿಗೆ ಮತ್ತು ಸಕ್ರಿಯ ಕಾರ್ಯಕರ್ತರಿಗೆ ಹೂಮಾಲೆ ಹಾಕಿ ಗೌರವಿಸಲಾಯಿತು. ಪಕ್ಷದ ಬೆಳವಣಿಗೆಗೆ ಶ್ರಮಿಸುತ್ತಿರುವವರನ್ನು ಈ ಮೂಲಕ ಪ್ರೋತ್ಸಾಹಿಸಲಾಯಿತು.ಸಭೆಯಲ್ಲಿ ಸೇರಿದ ಕಾರ್ಯಕರ್ತರು “ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷಕ್ಕೆ ಜಯವಾಗಲಿ”, “ಭ್ರಷ್ಟರೇ ಬಿಟ್ಟು ತೊಲಗಿ, ಜನಪ್ರೇಮಿಗಳೇ ಅಧಿಕಾರಕ್ಕೆ ಬನ್ನಿ” ಎಂಬ ಘೋಷಣೆಗಳನ್ನು ಕೂಗುವ ಮೂಲಕ ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪ ಮಾಡಿದರು.
ಕುಪ್ಪಂ ಮತ್ತು ಬಸವಣ್ಣನವರ ಆಶಯದಂತೆ ಕಲ್ಯಾಣ ಕರ್ನಾಟಕ ನಿರ್ಮಿಸುವ ಗುರಿಯನ್ನು ಸಭೆಯಲ್ಲಿ ಪುನರುಚ್ಚರಿಸಲಾಯಿತು.ಮುಂಬರುವ ದಿನಗಳಲ್ಲಿ ಚಿಂತಾಮಣಿ ಕ್ಷೇತ್ರದಲ್ಲಿ ಪಕ್ಷವನ್ನು ಹೇಗೆ ಬಲಪಡಿಸಬೇಕು ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಬೇಕು ಎಂಬ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಸ್ಥಳೀಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.ಭ್ರಷ್ಟಾಚಾರದ ವಿರುದ್ಧದ ಹೋರಾಟ ಹಾಗೂ ಪ್ರಾಮಾಣಿಕ ರಾಜಕಾರಣದ ಅವಶ್ಯಕತೆಯನ್ನು ಸಭೆಯಲ್ಲಿ ಒತ್ತಿ ಹೇಳಲಾಯಿತು.
ಇದನ್ನು ಓದಿದ್ದೀರಾ..? ಕೋಲಾರ |ರಾಜಕೀಯ ಪಕ್ಷಗಳ ಏಜೆಂಟರಿಗೆ ಅಟ್ರಾಸಿಟಿ ಸಮಿತಿಯಲ್ಲಿ ಸ್ಥಾನ
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್ ಸಿ ವಿ,ಜಿಲ್ಲಾಧ್ಯಕ್ಷ ಸುಬ್ರಮಣಿ,ಜಿಲ್ಲಾ ಉಪಾಧ್ಯಕ್ಷ ಶಿವಾರೆಡ್ಡಿ,ತಾಲ್ಲೂಕು ಅಧ್ಯಕ್ಷ ಅಬ್ದುಲ್ ಖಯ್ಯೂಮ್,ವಿಶ್ವನಾಥ್,ಶಬ್ಬೀರ್ ಪಾಷಾ,ನಾಗರಾಜ್, ಮೆಹಬೂಬ್ ಪಾಷ,ಚಂದ್ರು,ಸೌಮ್ಯ,ದೇವರಾಜ್, ಅಂಜಿ,ಅಪ್ರೋಜ್,ಮಂಜುನಾಥ್,ಸೋಮಶೇಖರ್, ನರಸಿಂಹ,ರಾಜು,ಜಮೀರ್ ಸೇರಿದಂತೆ ಮತ್ತಿತರರು ಇದ್ದರು.




