ಚಿಕ್ಕಮಗಳೂರು | ಅಕ್ರಮ ಮದ್ಯಕ್ಕೆ ನಾಲ್ಕನೇ ಬಲಿ; ರಸ್ತೆಯಲ್ಲಿ ಶವವಿಟ್ಟು ಪ್ರತಿಭಟಿಸಿದ ಗ್ರಾಮಸ್ಥರು

Date:

  • ಅಧಿಕಾರಿಗಳು ಗ್ರಾಮಕ್ಕೆ ಬಂದು ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹ
  • ಮದ್ಯ ಸೇವನೆಯಿಂದ ಇದೇ ಗ್ರಾಮದ ಮೂವರು ಯುವಕರು ಹಿಂದೆ ಮೃತಪಟ್ಟಿದ್ದರು

ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದ್ದು, ಇದರಿಂದಾಗಿ ಅನೇಕ ಕುಟುಂಬಗಳು ಬೀದಿ ಬೀಳುತ್ತಿವೆ. ಗ್ರಾಮಗಳಲ್ಲಿಯೇ ಸುಲಭವಾಗಿ ಮದ್ಯ ಸಿಗುವುದರಿಂದ ಕುಡಿತದ ಚಟಕ್ಕೆ ಅನೇಕರು ತಮ್ಮ ಬದುಕು ಕಳೆದುಕೊಳ್ಳುತ್ತಿದ್ದಾರೆ.

ಕುಡಿತದ ಚಟಕ್ಕೆ ಪ್ರಾಣವನ್ನೇ ಕಳೆದುಕೊಂಡ ಒಂದು ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹಗಲಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಗೂರು ಗ್ರಾಮ ಕಿತ್ಲೆಗೊಳಿ ಸೈಟ್ ನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಆದಿವಾಸಿ ಸಮುದಾಯದ ಕೂಲಿ ಕಾರ್ಮಿಕ ಪುಟ್ಟೇಗೌಡ ವಿಪರೀತ ಮದ್ಯ ಸೇವಿಸಿ ಮೃತಪಟ್ಟಿದ್ದಾರೆ.

ಪುಟ್ಟೇಗೌಡ ಅವರ ಪತ್ನಿ ಮಂಗಳವಾರ ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕೆ ತೆರಳಿದ್ದರು. ಸಂಜೆ 3 ಗಂಟೆ ಸಮಾರಿಗೆ ಮನೆಗೆ ಹಿಂತಿರುಗಿ ಬಂದು ನೋಡಿದಾಗ ಪುಟ್ಟೇಗೌಡ ನಿಧನರಾಗಿರುವುದು ಗೊತ್ತಾಗಿದೆ.

ಬಳಿಕ ಬುಧವಾರ ಗ್ರಾಮಸ್ಥರು ಪುಟ್ಟೇಗೌಡ ಅವರ ಶವವನ್ನು ರಸ್ತೆಯಲ್ಲಿಯೇ ಇಟ್ಟು ಪ್ರತಿಭಟನೆ ನಡೆಸಿದರು. “ಸ್ಥಳಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಆಗಮಿಸಿ, ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿ ಮದ್ಯ ಮಾರಾಟ ನಿಲ್ಲಿಸಬೇಕು. ಅಲ್ಲಿಯ ವರೆಗೂ ಶವ ತೆಗೆಯುವುದಿಲ್ಲ” ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

“ಗ್ರಾಮದಲ್ಲಿ ಹಲವು ತಿಂಗಳಿನಿಂದ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಮೊದಲು 15 ಕಿ.ಮೀ ದೂರ ಹೋಗಿ ಮದ್ಯ ಸೇವಿಸಬೇಕಿತ್ತು. ಗ್ರಾಮದಿಂದ ದೂರ ಇದ್ದಿದ್ದರಿಂದ ಯಾರೂ ನಿತ್ಯ ಮದ್ಯ ಸೇವಿಸುತ್ತಿರಲಿಲ್ಲ. ಆದರೆ, ಈಗ ಗ್ರಾಮದಲ್ಲಿಯೇ ಸುಲಭವಾಗಿ ಮದ್ಯ ಸಿಗುವುದರಿಂದ ನಿತ್ಯ ಹಗಲಿನಲ್ಲಿಯೇ ಕುಡಿಯುವರ ಸಂಖ್ಯೆ ಹೆಚ್ಚಾಗಿದೆ” ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡರು.

ವಿಪರೀತವಾಗಿ ಮದ್ಯ ಸೇವನೆಯಿಂದ ಗ್ರಾಮದ ಮೂರು ಮಂದಿ ಮಧ್ಯಮ ವಯಸ್ಸಿನವರು ಮೃತಪಟ್ಟಿದ್ದಾರೆ. ಈ ಸಮಸ್ಯೆ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ನಿಲ್ಲಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಆದಿವಾಸಿ ಬುಡಕಟ್ಟು ಸಮುದಾಯದವರು, ಗ್ರಾಮಸ್ಥರು ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು ಎಂದು ‘ಕರ್ನಾಟಕ ಜನಶಕ್ತಿ’ಯ ವೆಂಕಟೇಶ್, ರಾಧಾ ಹಾಗೂ ವಾಲ್ಮೀಕಿ ಸಂಘಟನೆಯ ಶ್ರೀನಿವಾಸ್ ‘ಈದಿನ.ಕಾಮ್’ಗೆ ತಿಳಿಸಿದ್ದಾರೆ.

(ಮಾಸ್ ಮೀಡಿಯಾ ಹಾಸನ, ಚಿಕ್ಕಮಗಳೂರು ಜಿಲ್ಲಾ ಸಂಯೋಜಕಿ ಗಿರಿಜಾ ಎಸ್ ಜಿ ಮಾಹಿತಿ ಆಧರಿಸಿದ ವರದಿ)

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣುಭ್ರೂಣ ಹತ್ಯೆ ಪ್ರಕರಣ: 9 ಮಂದಿ ಆರೋಪಿಗಳ ಬಂಧನ; ಹಲವರ ಕೈವಾಡವಿರುವ ಶಂಕೆ

ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ...

ಬೆಂಗಳೂರು | ನ. 29ರಂದು ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ; ಕನ್ನಡ-ಉರ್ದು ಕವಿಗೋಷ್ಠಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ...

ಗದಗ | ʼಸೊಸೆಗೆ ಸೀರೆ ಉಡಿಸಬೇಕುʼ ವದಂತಿ; ಅಂಗಡಿಗಳಲ್ಲಿ ವ್ಯಾಪಾರ ಜೋರು

ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರೆದ್ರೂ ಮೌಢ್ಯ ಆಚರಣೆಗಳನ್ನ ಮಾತ್ರ ಬಿಟ್ಟಿಲ್ಲ. ಇದಕ್ಕೆ...

ಬೆಳಗಾವಿ | ನಿಗಮ-ಮಂಡಳಿ ಅಧ್ಯಕ್ಷರಿಗೆ ಸಂಪುಟ ಸ್ಥಾನಮಾನ; ಪಿಐಎಲ್‌ ದಾಖಲಿಸುವುದಾಗಿ ಎಚ್ಚರಿಕೆ

"ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನಗಳಿಂದ ವಂಚಿತರಾಗಿ ಅತೃಪ್ತರಾಗಿರುವ ಶಾಸಕರನ್ನು ಸಮಾಧಾನಪಡಿಸುವ ಸಲುವಾಗಿ,...