ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತಂತೆ ಶುಕ್ರವಾರ ವಿಡಿಯೋ ಸಂವಾದ ಸಭೆ ನಡೆಸಿ ಮಾರ್ಗಸೂಚಿಗಳನ್ವಯ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿ ಕೆ ವೆಂಕಟೇಶ್ ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದ ಜಿಲ್ಲೆಯ ಚುನಾವಣೆ ಶಾಖೆ, ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ತಯಾರಿ ನಡೆಸುವಂತೆ ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಬೀದಿನಾಯಿಗಳಿಂದ ಮಾರಣಾಂತಿಕ ದಾಳಿ: ಸುರಕ್ಷತೆ, ನಿಯಂತ್ರಣಕ್ಕೆ ನಾಗರಿಕರ ಆಗ್ರಹ
ವೀಡಿಯೋ ಕಾನ್ಫರೆನ್ಸ್ ನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈ ಕುರಿತಂತೆ ಸೂಕ್ತ ರೀತಿಯಲ್ಲಿ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಸೂಚನೆ ನೀಡಿದರು.

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ವಿಶೇಷ ಭೂಸ್ವಾಧಿನಾಧಿಕಾರಿ ವೆಂಕಟೇಶ ನಾಯ್ಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಚುನಾವಣೆ ಶಾಖೆ ಮಲ್ಲಿಕಾರ್ಜುನ ನಾಯ್ಕ್ ಸೇರಿದಂತೆ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳು ವೀಡಿಯೋ ಸಂವಾದ ಸಭೆಯಲ್ಲಿ ಭಾಗವಹಿಸಿದ್ದರು.