ಹಿರಿಯೂರು ಉಪಚುನಾವಣೆಗೆ ಕಾಂಗ್ರೆಸ್ ಸಂಘಟನೆ ಚುರುಕು

Date:

 

ಮುಂಬರುವ ಹಿರಿಯೂರು ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ರಾಜ್ಯ ವಕ್ತಾರ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷರು (ಸಂಘಟನೆ) ಅಬ್ದುಲ್ ಮುನೀರ್ ಜನ್ಸಾಲೆ ಅವರು ಸಂಘಟನಾ ಕಾರ್ಯಕ್ಕೆ ವೇಗ ನೀಡಿದ್ದಾರೆ.

- Advertisement -

ಕಕಳೆದ 45 ದಿನಗಳಿಂದ ತಮ್ಮ ತಂಡದೊಂದಿಗೆ ಕ್ಷೇತ್ರದ 300 ಬೂತ್‌ಗಳಲ್ಲೂ ನಿರಂತರವಾಗಿ ಸಂಘಟನಾ ಚಟುವಟಿಕೆ ನಡೆಸುತ್ತಿರುವ ಅವರು, ಬೂತ್ ಮಟ್ಟದ ಏಜೆಂಟರ ನೇಮಕ, ಬೂತ್ ಸಮಿತಿಗಳ ರಚನೆ ಹಾಗೂ ಚುನಾವಣಾ ಪೂರ್ವಸಿದ್ಧತೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಇದರ ಭಾಗವಾಗಿ ಹೊಸಹೇಳನಾಡು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರಿಗೆ BLA-2 ಜವಾಬ್ದಾರಿ, ಮತದಾರರ ಪಟ್ಟಿ ನಿರ್ವಹಣೆ ಹಾಗೂ ಚುನಾವಣಾ ಸಂಘಟನೆಯ ಕುರಿತು ತರಬೇತಿ ನೀಡುವ ಮೂಲಕ ಕಾರ್ಯಕರ್ತರನ್ನು ಮುಂದಿನ ಚುನಾವಣೆಗೆ ಸಜ್ಜುಗೊಳಿಸಿದ್ದಾರೆ.

ಪ್ರತಿ ಬೂತ್‌ನಲ್ಲೂ ಸಮರ್ಥ ಕಾರ್ಯಕರ್ತರ ತಂಡವನ್ನು ನಿರ್ಮಿಸುವುದು, ಮತದಾರರ ಪಟ್ಟಿಯ ಬಗ್ಗೆ ಅರಿವು ಮೂಡಿಸುವುದು, BLA ಮತ್ತು BLA-2 ನಡುವೆ ಸಮನ್ವಯ ಸಾಧಿಸುವುದು ಹಾಗೂ ಸ್ಥಳೀಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಮುನೀರ್ ಅವರ ಕಾರ್ಯತಂತ್ರದ ಪ್ರಮುಖ ಉದ್ದೇಶವಾಗಿದೆ.

ಈ ಹಿಂದೆ ತೆಲಂಗಾಣ ಸೇರಿದಂತೆ ಕರ್ನಾಟಕದ ಶಿಗ್ಗಾಂವಿ ಮತ್ತು ಬಾಗಲಕೋಟೆ ಉಪಚುನಾವಣೆಗಳಲ್ಲಿ ಸಂಘಟನೆ ಹಾಗೂ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಮುನೀರ್, ಅಲ್ಲಿನ ಅನುಭವವನ್ನು ಹಿರಿಯೂರು ಕ್ಷೇತ್ರದ ಚುನಾವಣಾ ಸಿದ್ಧತೆಯಲ್ಲಿ ಬಳಸಿಕೊಳ್ಳುತ್ತಿದ್ದಾರೆ.

ಚುನಾವಣೆ ಘೋಷಣೆಯಾಗುವ ಮುನ್ನವೇ ಕ್ಷೇತ್ರದ 300 ಬೂತ್‌ಗಳಲ್ಲಿ ಸಂಘಟನಾ ಜಾಲವನ್ನು ಸಜ್ಜುಗೊಳಿಸಿ ಪಕ್ಷಕ್ಕೆ ಭದ್ರ ಬುನಾದಿ ನಿರ್ಮಿಸುವ ಪ್ರಯತ್ನ ನಡೆಯುತ್ತಿದೆ. ಬೂತ್ ಮಟ್ಟದ ಸಂಘಟನೆಯೇ ಚುನಾವಣಾ ಯಶಸ್ಸಿನ ಪ್ರಮುಖ ಶಕ್ತಿಯಾಗಬೇಕು ಎಂಬ ಗುರಿಯೊಂದಿಗೆ ಮುನೀರ್ ಜನ್ಸಾಲೆ ರೂಪಿಸಿರುವ ಕಾರ್ಯತಂತ್ರ ಇದೀಗ ಹಿರಿಯೂರು ಕ್ಷೇತ್ರದ ರಾಜಕೀಯ ವಲಯದಲ್ಲಿ ಗಮನ ಸೆಳೆಯುತ್ತಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related